ಶಿಡ್ಲಘಟ್ಟ: ನಗರದ ತಾಲ್ಲೂಕು ಕಚೇರಿ ಸಭಾಂಗಣದಲ್ಲಿ ಸೋಮವಾರ ತಾಲ್ಲೂಕು ಆಡಳಿತ ವತಿಯಿಂದ ಛತ್ರಪತಿ ಶಿವಾಜಿ ಜಯಂತ್ಯುತ್ಸವ ಕಾರ್ಯಕ್ರಮ ನಡೆಯಿತು.
ತಾಲ್ಲೂಕು ಆರೋಗ್ಯಾಧಿಕಾರಿ ಡಾ. ವೆಂಕಚೇಶಮೂರ್ತಿ ಮಾತನಾಡಿ, ‘ಹಿಂದೂಸ್ಥಾನವನ್ನು ಒಗ್ಗೂಡಿಸಲು ಶ್ರಮಿಸಿದ ಮಹಾನ್ ಪುರುಷರಲ್ಲಿ ಛತ್ರಪತಿ ಶಿವಾಜಿ ಪ್ರಮುಖರು’ ಎಂದು ಹೇಳಿದರು.
ಧೈರ್ಯಶಾಲಿ ಸಾಮ್ರಾಜ್ಯದ ಅಧಿಪತಿಗಳು ತಮ್ಮ ತಾಯಿನಾಡು ಮತ್ತು ಸ್ವರಾಜ್ಯದ ರಕ್ಷಣೆಗೆ ತಮ್ಮ ಪ್ರಾಣವನ್ನೇ ಬಲಿದಾನ ಮಾಡಿದ್ದರು. ಅಂತಹ ಮಹಾನ್ ಧೈರ್ಯಶಾಲಿ ಯೋಧರಲ್ಲಿ ಛತ್ರಪತಿ ಶಿವಾಜಿ ಮಹಾರಾಜರು ಒಬ್ಬರಾಗಿದ್ದರು ಎಂದರು.
ಈ ವೇಳೆ ಕ್ಷೇತ್ರ ಶಿಕ್ಷಣಾಧಿಕಾರಿ ಸಿ.ಎ.ನರೇಂದ್ರಕುಮಾರ್, ಶೀರಸ್ತೇದಾರ್ ಆಸಿಯಾ ಬೀ, ಆರೋಗ್ಯ ನಿರೀಕ್ಷಕ ದೇವರಾಜ್, ಜಿಲ್ಲಾ ಜಾಗೃತಿ ಸಮಿತಿ ಸದಸ್ಯ ಮಂಜುನಾಥ್ ಹಾಜರಿದ್ದರು.