ಬುಧವಾರ, 15 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಚಿಕ್ಕಬಳ್ಳಾಪುರ: ರೈಲಿಗೆ ಸಿಲುಕಿ 92 ಕುರಿ ಸಾವು

Published 15 ಡಿಸೆಂಬರ್ 2023, 14:25 IST
Last Updated 15 ಡಿಸೆಂಬರ್ 2023, 14:25 IST
ಅಕ್ಷರ ಗಾತ್ರ

ಚಿಕ್ಕಬಳ್ಳಾಪುರ: ನಾಯಿಗಳಿಂದ ತಪ್ಪಿಸಿಕೊಳ್ಳುವ ಭರದಲ್ಲಿ 92 ಕುರಿಗಳು ಶಿಡ್ಲಘಟ್ಟ ತಾಲ್ಲೂಕು ಲಕ್ಕಹಳ್ಳಿ ಗ್ರಾಮದ ಬಳಿ ಶುಕ್ರವಾರ ಚಲಿಸುತ್ತಿದ್ದ ರೈಲಿಗೆ ಸಿಲುಕಿ ಸಾವನ್ನಪ್ಪಿವೆ.

ಚಿಕ್ಕಬಳ್ಳಾಪುರ-ಶಿಡ್ಲಘಟ್ಟ-ಕೋಲಾರ ರೈಲು ಲಕ್ಕಹಳ್ಳಿ ಮಾರ್ಗವಾಗಿ ಹಾದು ಹೋಗುತ್ತದೆ. ರೈಲ್ವೆ ಹಳಿಗಳ ಪಕ್ಕದ ಬಯಲಿನಲ್ಲಿ  ಕುರಿಗಾಹಿಗಳಾದ ಕೂದಲಮ್ಮ, ಕೂದಲಪ್ಪ ಹಾಗೂ ದೇವರಾಜ್ ಎಂಬುವವರು ಕುರಿ ಮಂದೆ ಮೇಯಿಸುತ್ತಿದ್ದರು.

ಈ ವೇಳೆ ನಾಯಿಗಳು ಕುರಿ ಹಿಂಡಿನ ಮೇಲೆ ದಾಳಿ ಮಾಡಿವೆ. ಇದರಿಂದ ಬೆದರಿದ ಕುರಿಗಳು ತಪ್ಪಿಸಿಕೊಳ್ಳಲು ಹಳಿಯತ್ತ ನುಗ್ಗಿವೆ. ಇದೇ ಸಮಯಕ್ಕೆ ಬಂದ ರೈಲು ಕುರಿಗಳ ಮೇಲೆ ಹರಿದಿದೆ. ಕುರಿಗಳು ಸ್ಥಳದಲ್ಲೇ ಸಾವನ್ನಪ್ಪಿವೆ.  

ರೈಲ್ವೆ ಹಳಿಗಳ ಮೇಲೆ ರಕ್ತಸಿಕ್ತ ಕುರಿಗಳ ದೇಹಗಳು ಚೆಲ್ಲಾಪಿಲ್ಲಿಯಾಗಿ ಬಿದ್ದಿದ್ದವು. ಕುರಿಗಾಹಿ ಮಹಿಳೆ ಕೂದಲಮ್ಮ ಸಹ ಗಾಯಗೊಂಡಿದ್ದಾರೆ. ರೈಲ್ವೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರೆಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT