ಚಿಕ್ಕಬಳ್ಳಾಪುರ: ರಾಜ್ಯ ಸರ್ಕಾರವು ಪರಿಶಿಷ್ಟ ಮತ್ತು ಹಿಂದುಳಿದ ವರ್ಗದ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನವನ್ನು ಸಕಾಲಕ್ಕೆ ನೀಡದೆ ನಿರ್ಲಕ್ಷ್ಯವಹಿಸಿದೆ ಎಂದು ಆರೋಪಿಸಿ ಎಬಿವಿಪಿ ನೇತೃತ್ವದಲ್ಲಿ ವಿದ್ಯಾರ್ಥಿಗಳು ನಗರದಲ್ಲಿ ಗುರುವಾರ ಪ್ರತಿಭಟಿಸಿದರು.

ಬಿ.ಬಿ ರಸ್ತೆಯಲ್ಲಿ ಪ್ರತಿಭಟನಾ ಮೆರವಣಿಗೆ ನಡೆಸಿದ ವಿದ್ಯಾರ್ಥಿಗಳು ಅಂಬೇಡ್ಕರ್ ವೃತ್ತದಲ್ಲಿ ಮಾನವ ಸರಪಳಿ ನಿರ್ಮಿಸಿದರು. ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿದರು. ತಾಲೂಕು ಕಚೇರಿಗೆ ಬಂದ ವಿದ್ಯಾರ್ಥಿಗಳು ತಹಶೀಲ್ದಾರ್ಗೆ ಮನವಿ ಸಲ್ಲಿಸಿದರು. ಬೇಡಿಕೆಗಳನ್ನು ಕೂಡಲೇ ಈಡೇರಿಸುವಂತೆ ಒತ್ತಾಯಿಸಿದರು.

ರಾಜ್ಯ ಸರ್ಕಾರವು ಪರಿಶಿಷ್ಟ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನದ ಅರ್ಜಿ ಮಾತ್ರ ನೀಡಿದೆ. ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನವನ್ನೇ ನೀಡಿಲ್ಲ.ವಿದ್ಯಾರ್ಥಿಗಳು ಜಿಲ್ಲಾ ಕೇಂದ್ರ ಸೇರಿದಂತೆ ನಗರ ಪ್ರದೇಶಗಳಿಗೆ ತೆರಳಲು ಸಮರ್ಪಕ ಬಸ್ ವ್ಯವಸ್ಥೆಯೂ ಇಲ್ಲ ಎಂದು ಪ್ರತಿಭಟನಕಾರರು ಆಕ್ರೋಶ ವ್ಯಕ್ತಪಡಿಸಿದರು.

ಶಾಲಾ ಕಾಲೇಜುಗಳಿಗೆ ನಿಗದಿತ ಸಮಯಕ್ಕೆ ಬರಲು ಬಸ್ ಸೌಲಭ್ಯ ಕಲ್ಪಿಸಬೇಕು. ಬೆಳಿಗ್ಗೆ ಮತ್ತು ಸಂಜೆ ನಿಗದಿತ ಸಮಯಕ್ಕೆ ಬಸ್ಗಳು ಸಂಚರಿಸಬೇಕು ಎಂದು ಒತ್ತಾಯಿಸಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260501-16-2133751003

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.