ಚಿಕ್ಕಬಳ್ಳಾಪುರ: ಕೃಷಿ ಇಲಾಖೆಯು ಪ್ರಸಕ್ತ ಸಾಲಿನ ಮುಂಗಾರು ಅವಧಿಯಲ್ಲಿ ಜಿಲ್ಲೆಯಲ್ಲಿ ಬಿತ್ತನೆ ಗುರಿ ನಿಗದಿಗೊಳಿಸಿದೆ. ಈ ಬಾರಿ 1,26,854 ಹೆಕ್ಟೇರ್ ಬಿತ್ತನೆಯ ಗುರಿಯನ್ನು ಹೊಂದಲಾಗಿದೆ.

ಕಳೆದ ವರ್ಷಕ್ಕೆ 1,32,796 ಹೆಕ್ಟೇರ್ ಬಿತ್ತನೆ ಗುರಿ ಹೊಂದಲಾಗಿತ್ತು. ಈ ಬಾರಿ ಆರು ಸಾವಿರ ಹೆಕ್ಟೇರ್ ಬಿತ್ತನೆ ಗುರಿ ಕಡಿಮೆಯಾಗಿದೆ. ಈ ಪೈಕಿ ನೆಲಗಡಲೆಯೇ 6000 ಹೆಕ್ಟೇರ್ ಬಿತ್ತನೆ ಪ್ರದೇಶ ಕುಸಿತ ಕಂಡಿದೆ.

ಕೃಷಿ ಇಲಾಖೆಯು ಬಿತ್ತನೆ ಕಾರ್ಯ ಅಗತ್ಯ ಸಿದ್ಧತೆಗಳಲ್ಲಿ ತಲ್ಲೀನವಾಗಿದೆ. ಜಿಲ್ಲೆಯಲ್ಲಿ ಕಳೆದ ಎರಡು, ಮೂರು ತಿಂಗಳಿಂದ ಆರ್ಭಟಿಸಿದ್ದ ಬಿಸಿಲಿನ ತಾಪ ಕುಂಚ ಕಡಿಮೆ ಆಗುತ್ತಿದೆ. ಮೋಡ ಕವಿದ ವಾತಾವರಣಯೂ ಆಗೊಮ್ಮೆ ಈಗೊಮ್ಮೆ ಕಾಣಿಸಿಕೊಂಡಿದೆ.

ಬಯಲು ಸೀಮೆಯ ಚಿಕ್ಕಬಳ್ಳಾಪುರ ಜಿಲ್ಲೆಯು ಶಾಶ್ವತ ನೀರಾವರಿ ವಂಚಿತ ಜಿಲ್ಲೆ. ಮಳೆ ಅಶ್ರಿತ ಬೇಸಾಯ ಹೆಚ್ಚು ಅವಲಂಬಿಸಿದೆ. ಜಿಲ್ಲೆಯಲ್ಲಿ ನೀರಾವರಿ ಪ್ರದೇಶಕ್ಕಿಂತ ಮಳೆ ಆಶ್ರಿತ ಕೃಷಿ ಭೂಮಿಯೆ ಹೆಚ್ಚಾಗಿದೆ.

ಈಗಾಗಲೇ ಜಿಲ್ಲೆಯ ಕೃಷಿ ಇಲಾಖೆ ಅಧಿಕಾರಿಗಳು, ಕೃಷಿ ಪರಿಕರಗಳ ಮಾರಾಟಗಾರರೊಂದಿಗೆ ಸಭೆ ನಡೆಸಿ ಮುಂಗಾರು ಬಿತ್ತನೆಗೆ ಬೇಕಾದ ಸಿದ್ಧತೆಗಳನ್ನು ಮಾಡಿಕೊಳ್ಳಲು ಸೂಚಿಸಿದ್ದಾರೆ.

ಇನ್ನೂ ಈ ಬಾರಿ ರಸಗೊಬ್ಬರ ಅದರಲ್ಲೂ ಯೂರಿಯಾ, ಡಿಎಪಿ ದುರ್ಬಳಕೆಗೆ ಕಡಿವಾಣ ಹಾಕುವ ನಿಟ್ಟಿನಲ್ಲಿ ರೈತರನ್ನು ಕಡ್ಡಾಯವಾಗಿ ಪ್ರೋಟ್ಸ್ ತಂತ್ರಾಂಶದಲ್ಲಿ ನೋಂದಣಿ ಆಗಿರಬೇಕು ಎನ್ನುವ ನಿಯಮವನ್ನು ಕಡ್ಡಾಯ ಮಾಡಲಾಗಿದೆ.

ಮಾರ್ಚ್ ಮಧ್ಯಭಾಗದಲ್ಲಿ ಮಳೆ ಬಂದಿತ್ತು. ಮೇ ಆರಂಭದಲ್ಲಿಯೂ ತುಂತುರು ಮಳೆ ಸುರಿದಿತ್ತು. ಕೃಷಿ ಇಲಾಖೆ ಅಧಿಕಾರಿಗಳು ಜಿಲ್ಲಾಡಳಿತದ ಮಾರ್ಗದರ್ಶನದಲ್ಲಿ ತಾಲ್ಲೂಕುಗಳಲ್ಲಿ ಅಧಿಕಾರಿಗಳ ಸಭೆ ನಡೆಸುತ್ತಿದ್ದಾರೆ.

ಮುಂಗಾರು ಹಂಗಾಮಿನ ಕೃಷಿ ಚಟುವಟಿಕೆಗಳಿಗೆ ಈಗಾಗಲೇ ಚಾಲನೆ ನೀಡಿರುವ ರೈತರು ತಿಪ್ಪೆಗಳಲ್ಲಿ ಸಂಗ್ರಹಿಸಿದ್ದ ಗೊಬ್ಬರವನ್ನು ಹೊಲಗಳಿಗೆ ಸಾಗಿಸುತ್ತಿದ್ದಾರೆ.

ಜಿಲ್ಲೆಯಲ್ಲಿ ಈಗಾಗಲೇ ಮಿತಿ ಮೀರಿ ರಸಗೊಬ್ಬರ ಬಳಕೆ ಮಾಡುತ್ತಿರುವುದನ್ನು ಕೃಷಿ ತಜ್ಞರು ಎಚ್ಚರಿಕೆ ನೀಡಿದ್ದಾರೆ. ಹೀಗಿದ್ದರೂ ಜಿಲ್ಲೆಯಲ್ಲಿ ಈ ವರ್ಷ 50 ಸಾವಿರ ಟನ್ನಷ್ಟು ರಸಗೊಬ್ಬರ ಬೇಕಿದೆ ಎಂದು ಕೃಷಿ ಇಲಾಖೆ ಅಂದಾಜಿಸಿದೆ.

ಹೋಬಳಿವಾರು ರೈತ ಸಂಪರ್ಕ ಕೇಂದ್ರಗಳ ಮೂಲಕ ರೈತರ ಬೇಡಿಕೆಗೆ ಅನುಗುಣವಾಗಿ ಬಿತ್ತನೆ ಬೀಜ ದಾಸ್ತಾನಿಗೆ ಕೃಷಿ ಇಲಾಖೆ ಮುಂದಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.