ಚಿಕ್ಕಬಳ್ಳಾಪುರ: ವಿದ್ಯಾರ್ಥಿಗಳು ಮಾನಸಿಕ ಒತ್ತಡಗಳಿಂದ ದೂರವಿದ್ದು, ಉಜ್ವಲ ಭವಿಷ್ಯ ರೂಪಿಸಿಕೊಳ್ಳಬೇಕು. ಇದಕ್ಕಾಗಿ ಸದಾ ಸಕಾರಾತ್ಮಕ ಆಲೋಚನೆಗಳನ್ನು ಬೆಳೆಸಿಕೊಳ್ಳಬೇಕು ಎಂದು ಬೆಂಗಳೂರು ಉತ್ತರ ವಿಶ್ವವಿದ್ಯಾನಿಲಯದ ರಿಜಿಸ್ಟ್ರಾರ್ (ಮೌಲ್ಯಮಾಪನ) ಎನ್. ಲೋಕನಾಥ್ ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು.

ನಗರದ ಸಿ.ವಿ.ವಿ. ಕ್ರೀಡಾಂಗಣದಲ್ಲಿ ಕೆ.ವೆಂಕಟಪತೆಪ್ಪ ದೈಹಿಕ ಶಿಕ್ಷಣ ವಿದ್ಯಾಲಯದಿಂದ ಆಯೋಜಿಸಿದ್ದ ‘ಅಥ್ಲೆಟಿಕ್ ವಾರ್ಷಿಕ ಕ್ರೀಡಾಕೂಟ’ ಸಮಾರೋಪದಲ್ಲಿ ಕ್ರೀಡೆಗಳಲ್ಲಿ ಗೆಲುವು ಪಡೆದ ವಿದ್ಯಾರ್ಥಿಗಳಿಗೆ ಪ್ರಶಸ್ತಿ ವಿತರಿಸಿ ಮಾತನಾಡಿದರು.

ಮನಸ್ಸಿನಲ್ಲಿ ನೋವು ಅಥವಾ ದುಃಖವಿದ್ದಾಗ ಅದನ್ನು ಒಂಟಿಯಾಗಿ ಅನುಭವಿಸಬೇಡಿ. ನಂಬಿಕಸ್ಥ ಸ್ನೇಹಿತರು, ಪೋಷಕರು ಅಥವಾ ಶಿಕ್ಷಕರೊಂದಿಗೆ ಸಮಸ್ಯೆ ಹಂಚಿಕೊಳ್ಳುವುದರಿಂದ ಮನಸ್ಸು ಹಗುರಾಗುತ್ತದೆ. ಪರಿಹಾರ ಸಾಧ್ಯವಾಗುತ್ತದೆ ಎಂದರು.

ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಶಿಲ್ಪಾ ಮಾತನಾಡಿ, ಯೌವನದ ಅವಧಿಯಲ್ಲಿ ತಾಳ್ಮೆ ಕಳೆದುಕೊಳ್ಳಬಾರದು. ಜವಾಬ್ದಾರಿಯುತ ವಿದ್ಯಾರ್ಹತೆ ಪಡೆದು ಸಮಾಜದಲ್ಲಿ ಮಾದರಿ ವ್ಯಕ್ತಿಗಳಾಗಿ ರೂಪುಗೊಳ್ಳಬೇಕು ಎಂದರು.

ಕೆ.ವಿ ಮತ್ತು ಪಂಚಗಿರಿ ಶಿಕ್ಷಣ ಸಂಸ್ಥೆ ಅಧ್ಯಕ್ಷ ಕೆ.ವಿ.ನವೀನ್ ಕಿರಣ್ ಮಾತನಾಡಿ, ನಮ್ಮ ಸಂಸ್ಕೃತಿ ಉಳಿಸಿ, ಬೆಳೆಸಬೇಕಾಗಿದೆ. ಯುವಜನರು ದೈಹಿಕ ಹಾಗೂ ಮಾನಸಿಕ ಸದೃಢತೆ ಬೆಳೆಸಿಕೊಳ್ಳುವುದು ಅತಿ ಅವಶ್ಯ. ಅದೇ ರೀತಿ ವ್ಯಾಸಂಗ ಮಾಡಿದ ವಿದ್ಯಾಸಂಸ್ಥೆ ಹಾಗೂ ತಾಯಿ ತಂದೆಗೆ ಕೀರ್ತಿ ತರುವ ಕೆಲಸ ಮಾಡಬೇಕು ಎಂದು ಹೇಳಿದರು.

ಪತ್ರಕರ್ತರಾದ ಎಂ.ಕೃಷ್ಣಪ್ಪ, ಈಶ್ವರ್ ಗೌಡಗೆರೆ, ನಗರಸಭೆ ಮಾಜಿ ಉಪಾಧ್ಯಕ್ಷೆ ನಿರ್ಮಲಾ ಪ್ರಭು, ಪ್ರಾಂಶುಪಾಲ ವೆಂಕಟೇಶ್, ಪ್ರಾಧ್ಯಾಪಕರಾದ ಎ.ಎಸ್ ಅಮರೇಂದ್ರ, ಜಿ.ಅಶ್ವತ್ಥಪ್ಪ, ಜಿ ಸಿದ್ದಪ್ಪಸ್ವಾಮಿ, ಕೆ.ಎನ್ ಅಶೋಕ್, ಹರಿಚರಣ್, ಮಂಜುನಾಥ್, ವಕೀಲರ ಸಂಘದ ಅಧ್ಯಕ್ಷ ಅಭಿಲಾಷ್ ಮತ್ತಿತರರು ಪಾಲ್ಗೊಂಡಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260529-16-327480

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.