ಚಿಕ್ಕಬಳ್ಳಾಪುರ: ಬಾಬೂ ಜಗಜೀವನ ರಾಂ ಅವರು ಒಬ್ಬ ಸಾಮಾನ್ಯ ವ್ಯಕ್ತಿಯಲ್ಲ. ಬಲಹೀನ ವರ್ಗಗಳ ಶಕ್ತಿ ಎಂದು ಸಂಸದ ಡಾ.ಕೆ ಸುಧಾಕರ್ ಬಣ್ಣಿಸಿದರು.

ನಗರದ ಕನ್ನಡ ಭವನದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಹಾಗೂ ಸಮಾಜ ಕಲ್ಯಾಣ ಇಲಾಖೆಯು ಆಯೋಜಿಸಿದ್ದ ಹಸಿರು ಕ್ರಾಂತಿಯ ಹರಿಕಾರ ಹಾಗೂ ಭಾರತದ ಮಾಜಿ ಉಪ ಪ್ರಧಾನಿ ಬಾಬು ಜಗಜೀವನ ರಾಂ ಅವರ 119ನೇ ಜಯಂತಿಯಲ್ಲಿ ಮಾತನಾಡಿದರು.

ಗೌತಮ ಬುದ್ಧರು ವಿಶ್ವಕ್ಕೆ ನೀಡಿದ ಸಾಮಾಜಿಕ ನ್ಯಾಯದ ಸಂದೇಶವನ್ನು ಇಡೀ ದೇಶಕ್ಕೆ ಪಸರಿಸಿದವರು ಜಗಜೀವನ್ ರಾಂ ಅವರು. ಅವರು ಕಾರ್ಮಿಕ ಸಚಿವರಾಗಿ ಐತಿಹಾಸಿಕ ಕಾರ್ಯಕ್ರಮಗಳನ್ನು ರೂಪಿಸಿದರು. ಅವರು ತಾವು ಕೆಲಸ ಮಾಡಿದ ಇಲಾಖೆಗಳಲ್ಲಿ ಜನರ ಕಲ್ಯಾಣಕ್ಕಾಗಿ ರೂಪಿಸಿದ ಯೋಜನೆಗಳು ಈಗಲೂ ಚಾಲನೆಯಲ್ಲಿವೆ ಎಂದರು.

ಆಹಾರ ಉತ್ಪನ್ನಗಳನ್ನು ದೇಶದ ರೈತರು ಇಂದು ರಫ್ತು ಮಾಡುವ ಮಟ್ಟಕ್ಕೆ ಬೆಳೆದಿದ್ದಾರೆ ಎಂದರೆ ಅದರಲ್ಲಿ ಬಾಬೂಜಿ ಅವರ ಕಾಣಿಕೆ ಅಪಾರ. ದೇಶದ ಹಸಿವು ನೀಗಿಸುವ ಕೆಲಸ ಮಾಡಿದರು ಎಂದು ತಿಳಿಸಿದರು.

ಶಿಕ್ಷಣವೇ ನಮ್ಮನ್ನು ಮೇಲೆತ್ತುವ ಆಯುಧ ಎಂದು ಅಂಬೇಡ್ಕರ್ ಹೇಳಿದರು. ಅದನ್ನು ಯಥಾವತ್ತಾಗಿ ಪಾಲಿಸಿದ್ದರೆ ಅವರು ಜಗಜೀವನ ರಾಂ ಎಂದರು.

ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಯಲುವಳ್ಳಿ ಎನ್. ರಮೇಶ್ ಮಾತನಾಡಿ, ದೇಶದ ಆರ್ಥಿಕ, ಸಾಮಾಜಿಕ ಸುಧಾರಕರಾಗಿ, ರಾಜಕೀಯ ಕ್ಷೇತ್ರದಲ್ಲಿ ತಮ್ಮನ್ನು ಸುದೀರ್ಘವಾಗಿ ತೊಡಗಿಸಿಕೊಂಡು ಅಪ್ರತಿಮ ನಾಯಕ ಬಾಬು ಜಗಜೀವನ ರಾಂ ಎಂದರು.

ಜಿಲ್ಲಾಧಿಕಾರಿ ಜಿ.ಪ್ರಭು ಮಾತನಾಡಿ, ಬಿ.ಆರ್ ಅಂಬೇಡ್ಕರ್ ಮತ್ತು ಜಗಜೀವನ್ ರಾಂ ಅವರು ನಮ್ಮ ದೇಶದ ಎರಡು ಕಣ್ಣುಗಳು. ಅವರ ನಡೆ, ನುಡಿ ಹಾಗೂ ಅವರ ಸಾಧನೆಗಳು ಆದರ್ಶ ಪ್ರಾಯ. ಬಾಬೂಜಿ, ಮಹಾತ್ಮ ಗಾಂಧಿ ಹಾಗೂ ಮದನ್ ಮೋಹನ್ ಮಾಳವಿಯಾ ಅವರಿಂದ ಪ್ರೇರಣೆಗೊಂಡು ಅನೇಕ ಸಂಘಟನೆಗಳನ್ನು ಹುಟ್ಟುಹಾಕಿದರು. ಸ್ವಾತಂತ್ರ್ಯ ಸಂಗ್ರಾಮದಲ್ಲಿ ಭಾಗವಹಿಸಿ ದೇಶ ಸೇವೆಗೆ ಅರ್ಪಿಸಿಕೊಂಡರು ಎಂದು ಹೇಳಿದರು.

ಅಸ್ಪೃಶ್ಯತೆ ಮತ್ತು ಅಸಮಾನತೆ ವಿರುದ್ಧ ಹೋರಾಡಿದ್ದಕ್ಕಾಗಿ ಇವರ ಜನ್ಮದಿನವನ್ನು ‘ಸಮಾನತೆಯ ದಿನ’ವಾಗಿ ಆಚರಿಸಲಾಗುತ್ತದೆ ಎಂದು ತಿಳಿಸಿದರು.

ಬೆಂಗಳೂರು ಮಾತಂಗ ಫೌಂಡೇಶನ್ ಅಧ್ಯಕ್ಷ ಆರ್.ಲೋಕೇಶ್, ಬಾಬು ಜಗಜೀವನ ರಾಂ ಅವರ ಕುರಿತು ಉಪನ್ಯಾಸ ನೀಡಿದರು. 2024-25 ನೇ ಸಾಲಿನ ಎಸ್ಎಸ್ಎಲ್ಸಿ ಹಾಗೂ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ಸಮುದಾಯದ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು.

ವೇದಿಕೆ ಕಾರ್ಯಕ್ರಮಕ್ಕೂ ಮುನ್ನ ನಗರದ ವಾಪಸಂದ್ರದ ರಂಗನಾಥಸ್ವಾಮಿ ದೇವಾಲಯದ ಮುಂಭಾಗದಿಂದ ಬಾಬು ಜಗಜೀವನ ರಾಂ ಅವರ ಭಾವಚಿತ್ರಗಳ ಪಲ್ಲಕ್ಕಿ, ಸ್ತಬ್ದ ಚಿತ್ರಗಳು ಹಾಗೂ ತಮಟೆ ವಾದ್ಯಗಳೊಂದಿಗೆ ಅದ್ದೂರಿ ಮೆರವಣಿಗೆ ನಡೆಯಿತು.

ಮಾಜಿ ಶಾಸಕರಾದ ಎಸ್.ಎಂ. ಮುನಿಯಪ್ಪ, ಅನಸೂಯಮ್ಮ, ರಾಜ್ಯ ಸಹಕಾರ ಕೈಮಗ್ಗ ನೇಕಾರರ ಮಹಾಮಂಡಳಿ ನಿಗಮದ ಅಧ್ಯಕ್ಷ ಬಿ.ಜಿ ಗಣೇಶ್, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ನವೀನ್ ಭಟ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ, ಕುಶಾಲ್ ಚೌಕ್ಸೆ, ಹೆಚ್ಚುವರಿ ಜಿಲ್ಲಾಧಿಕಾರಿ ಡಾ. ಭಾಸ್ಕರ್, ಸಮುದಾಯದ ಮುಖಂಡರು ಪಾಲ್ಗೊಂಡಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260406-16-591765053

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.