ಚಿಕ್ಕಬಳ್ಳಾಪುರ: ಬಸವಣ್ಣ ಅವರ ನೇತೃತ್ವದಲ್ಲಿ 850 ವರ್ಷಗಳ ಹಿಂದೆ ನಡೆದ ಶರಣ ಚಳವಳಿಯ ಕನ್ನಡದ ನೆಲದಲ್ಲಿ ನಡೆದ ಮಹೋನ್ನತ ಚಳವಳಿ ಎಂದು ಜಿಲ್ಲಾಧಿಕಾರಿ ಜಿ.ಪ್ರಭು ತಿಳಿಸಿದರು.

ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಯೋಗದಲ್ಲಿ ಸೋಮವಾರ ನಗರದ ಬಸವನಗುಡಿ ಮುಂಭಾಗದಲ್ಲಿ ನಡೆದ ವಿಶ್ವಗುರು, ಸಾಂಸ್ಕೃತಿಕ ನಾಯಕ ಬಸವಣ್ಣ ಅವರ ಜಯಂತಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಸರಳವಾಗಿ ಆಡುಭಾಷೆಯಲ್ಲಿ ಶರಣರು ವಚನಗಳನ್ನು ರಚಿಸಿದರು. ವಚನಗಳು ಸಮಾಜದ ಅಂಕುಡೊಂಕುಗಳನ್ನು ತಿದ್ದುವ ಜೊತೆಗೆ ಉತ್ತಮ ವ್ಯಕ್ತಿತ್ವ ನಿರ್ಮಾಣಕ್ಕೆ ಕಾರಣವಾಗಿವೆ. ಆದ್ದರಿಂದಲೇ ವಚನಗಳು ಕರ್ನಾಟಕದ ಆಚೆಗೂ ಮಾತ್ರವಲ್ಲದೆ ಭಾರತದ ಆಚೆಗೂ ತಲುಪಿವೆ ಎಂದು ಹೇಳಿದರು.

12ನೇ ಶತಮಾನದಲ್ಲಿ ನಡೆದ ವಚನ ಚಳವಳಿ ಕ್ರಾಂತಿಯನ್ನೇ ಹುಟ್ಟು ಹಾಕಿದೆ. ಶರಣರ ಜೀವನಾನುಭವದಿಂದ ಬಂದ ವಚನಗಳು ಸಮಾಜಕ್ಕೆ ಸಮಾನತೆಯ ಸಂದೇಶ ನೀಡಿದವು. ವಚನಗಳು ಭಾರತದ ಆಚೆಗೂ ತಲುಪಿ ಭಾರತೀಯ ಸಂಸ್ಕೃತಿ, ಸಂಸ್ಕಾರ, ಮೌಲ್ಯಗಳನ್ನು ಜಾಗತಿಕ ಮಟ್ಟದಲ್ಲಿ ಎತ್ತಿಹಿಡಿದಿವೆ ಎಂದು ಹೇಳಿದರು.

ಶರಣರ ಪ್ರಾಮಾಣಿಕ, ಭಕ್ತಿ, ಸೇವೆ, ಅಧ್ಯಾತ್ಮ, ಮೌಲ್ಯಗಳು ಪ್ರಸ್ತುತ ಸಮಾಜಕ್ಕೆ ಪ್ರೇರಣೆ ಆಗಬೇಕು. ಸರಳವಾಗಿ ಆಡುಭಾಷೆಯಲ್ಲಿ ರಚನೆಯಾದ ವಚನಗಳು ಇಂದು ವಿಶ್ವಮಾನ್ಯವಾಗಿವೆ. ಅನುಭವ ಮಂಟಪವೇ ಮೊದಲ ಸಂಸತ್ತು. ಅನುಭವ ಮಂಟಪದಲ್ಲಿನ ಚಿಂತನ ಮಂಥನಗಳು ದೊಡ್ಡ ಜ್ಞಾನವನ್ನೇ ಪಸರಿಸಿವೆ ಎಂದು ಹೇಳಿದರು.

ಇಂದಿನ ವಿದ್ಯಾರ್ಥಿಗಳು, ಯುವ ಪೀಳಿಗೆ ಶರಣರ ವಿಚಾರಗಳನ್ನು ಅಧ್ಯಯನ ಮಾಡಬೇಕು. ಆ ಮೂಲಕ ಸಾಮಾಜಿಕ ಬದಲಾವಣೆಗೆ ಕಾರಣವಾಗಬೇಕು. ಕಂದಾಚಾರ, ಮೌಢ್ಯ, ಮೇಲು ಕೀಳುಗಳಂತಹ ಅನಿಷ್ಠಗಳನ್ನು ತೊಡೆಯಲು ವಚನಗಳನ್ನು ಪೂರಕ ಮತ್ತು ಪ್ರೇರಕವಾಗಿ ಬಳಸಿಕೊಳ್ಳಬೇಕು ಎಂದು ಸಲಹೆ ಮಾಡಿದರು.

ಕಮ್ಯುನಿಸ್ಟ್ ಆಡಳಿತ ವ್ಯವಸ್ಥೆ , ರಾಜಪ್ರಭುತ್ವ, ಮಿಲಿಟರಿ ಆಡಳಿತ ಹಾಗೂ ಪ್ರಜಾಪ್ರಭುತ್ವ ಆಡಳಿತ ವ್ಯವಸ್ಥೆಗಳು ಜಗತ್ತಿನ ವಿವಿಧ ದೇಶಗಳಲ್ಲಿ ಅಸ್ತಿತ್ವದಲ್ಲಿವೆ. ಈ ಆಡಳಿತ ವ್ಯವಸ್ಥೆಗಳಲ್ಲಿ ಅತ್ಯಂತ ಶಕ್ತಿಶಾಲಿ ಹಾಗೂ ಮೌಲ್ಯಯುತವಾದುದು ಪ್ರಜಾಪ್ರಭುತ್ವ. ಅಂತಹ ಪ್ರಜಾಪ್ರಭುತ್ವ ವ್ಯವಸ್ಥೆಗೆ ಮುನ್ನುಡಿ ಬರೆದವರು ಬಸವಣ್ಣ ಎಂದು ಸ್ಮರಿಸಿದರು.

ಸುನಿಲ್ ಆರಾಧ್ಯ, ಬಸವಣ್ಣ ಅವರ ವಿಚಾರಗಳ ಕುರಿತು ಉಪನ್ಯಾಸ ನೀಡಿದರು.

ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ವೈ. ನವೀನ್ ಭಟ್, ಉಪ ವಿಭಾಗಾಧಿಕಾರಿ ಡಿ.ಎಚ್ ಅಶ್ವಿನ್, ಸಮುದಾಯದ ಮುಖಂಡರಾದ ಮಹೇಶ್ ಬಸಾಪುರ, ಗಿರೀಶ್, ಸಮುದಾಯದ ಸಂಘ ಸಂಸ್ಥೆಗಳ ಪದಾಧಿಕಾರಿಗಳು, ಬಸವಣ್ಣನ ಅನುಯಾಯಿಗಳು ಪಾಲ್ಗೊಂಡಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260421-16-7255123

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.