ಚಿಕ್ಕಬಳ್ಳಾಪುರ: ದೇವನಹಳ್ಳಿಯ ರೆಸಾರ್ಟ್ವೊಂದರಲ್ಲಿ ಚಿಕ್ಕಬಳ್ಳಾಪುರ ವಿಧಾನಸಭಾ ಕ್ಷೇತ್ರದ ಬಿಜೆಪಿ ಪ್ರಶಿಕ್ಷಣ ವರ್ಗದ ಕಾರ್ಯಕ್ರಮಕ್ಕೆ ಭಾನುವಾರ ಚಾಲನೆ ನೀಡಲಾಯಿತು.

‘ವ್ಯಕ್ತಿ ನಿರ್ಮಾಣದಿಂದ ರಾಷ್ಟ್ರ ನಿರ್ಮಾಣದತ್ತ ಹೆಜ್ಜೆ’ ಎನ್ನುವ ಧ್ಯೇಯದಡಿ ಪಂಡಿತ್ ದೀನದಯಾಳ್ ಉಪಾಧ್ಯಾಯ ಪ್ರಶಿಕ್ಷಣ ಮಹಾಭಿಯಾನ 2026ರ ಅಂಗವಾಗಿ ಈ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.

ಕಾರ್ಯಕ್ರಮಕ್ಕೆ ಚಾಲನೆ ನೀಡಿದ ವೇಳೆ ಮಾತನಾಡಿದ ಸಂಸದ ಡಾ.ಕೆ.ಸುಧಾಕರ್, ‘ಬಿಜೆಪಿಯು ನಾಯಕರ ಪಕ್ಷವಲ್ಲ. ತತ್ವ ಸಿದ್ಧಾಂತಗಳನ್ನು ನಂಬಿ ನಡೆಯುವ ಶಿಸ್ತಿನ ಕಾರ್ಯಕರ್ತರ ಪಕ್ಷ. ಸಮಾಜದ ಕಟ್ಟಕಡೆಯ ವ್ಯಕ್ತಿಗೂ ಅಭಿವೃದ್ಧಿ ತಲುಪಬೇಕು ಎನ್ನುವ ಪಂಡಿತ್ ದೀನ್ದಯಾಳ್ ಉಪಾಧ್ಯಾಯ ಅವರ ‘ಅಂತ್ಯೋದಯ’ ತತ್ವವೇ ನಮಗೆ ಸದಾ ಮಾರ್ಗದರ್ಶಿ’ ಎಂದು ಹೇಳಿದರು.

‘ಪಕ್ಷದ ಉದ್ದೇಶಗಳ ಬಗ್ಗೆ ಸ್ಪಷ್ಟ ಅರಿವು ಹೊಂದಿರಬೇಕು. ಬೂತ್ ಗೆದ್ದರೆ ಚುನಾವಣೆ ಗೆದ್ದಂತೆ ಎನ್ನುವ ಮಂತ್ರದೊಂದಿಗೆ ಪ್ರತಿ ಮನೆ ತಲುಪಬೇಕು. ಅಧಿಕಾರಕ್ಕಿಂತ ಮಿಗಿಲಾದ ಸೇವೆಗೆ ಮೊದಲ ಆದ್ಯತೆ ನೀಡಬೇಕು’ ಎಂದರು.

ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್. ಅಶೋಕ ಮಾತನಾಡಿ, ಸಂಘಟನೆಯ ಬಲವೇ ಪಕ್ಷದ ಯಶಸ್ಸಿನ ಆಧಾರ. ಪ್ರತಿಯೊಬ್ಬ ಕಾರ್ಯಕರ್ತರೂ ತಮ್ಮ ಹೊಣೆಗಾರಿಕೆಯನ್ನು ಅರಿತು ಕಾರ್ಯನಿರ್ವಹಿಸಿದರೆ ಪಕ್ಷವು ಮತ್ತಷ್ಟು ಶಕ್ತಿಶಾಲಿ ಆಗುತ್ತದೆ ಎಂದು ಹೇಳಿದರು.

ತರಬೇತಿ ಮೂಲಕ ಕಾರ್ಯಕರ್ತರ ಸಾಮರ್ಥ್ಯವನ್ನು ಹೆಚ್ಚಿಸಿ ಸಂಘಟನೆಯನ್ನು ಬಲಪಡಿಸುವುದು ಈ ಅಭಿಯಾನದ ಮುಖ್ಯ ಉದ್ದೇಶ ಎಂದು ಹೇಳಿದರು.

ಸೈದ್ಧಾಂತಿಕ ಸ್ಪಷ್ಟತೆ, ಜನಸಂಪರ್ಕ ಮತ್ತು ಸೇವಾ ಮನೋಭಾವ, ಸಂಘಟನೆ ಸೇರಿದಂತೆ ವಿವಿಧ ವಿಚಾರಗಳ ಕುರಿತು ಕಾರ್ಯಾಗಾರದಲ್ಲಿ ಸಂಪನ್ಮೂಲ ವ್ಯಕ್ತಿಗಳು ಮಾಹಿತಿ ನೀಡಿದರು.

ಕೇಂದ್ರ ಕಾರ್ಮಿಕ ಸಚಿವ ಮನ್ಸುಖ್ ಮಾಂಡವಿಯಾ, ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ, ಬಿಜೆಪಿ ಜಿಲ್ಲಾ ಅಧ್ಯಕ್ಷ ಸೀಕಲ್ ರಾಮಚಂದ್ರಗೌಡ, ಸಂಸದ ಪಿ.ಸಿ.ಮೋಹನ್, ರಾಜ್ಯ ಎಸ್ಸಿ ಮೋರ್ಚಾ ಸಮಿತಿ ಸದಸ್ಯ ಬಾಲಕುಂಟಹಳ್ಳಿ ಕೃಷ್ಣಮೂರ್ತಿ, ಜಿಲ್ಲಾ ಬಿಜೆಪಿ ಉಪಾಧ್ಯಕ್ಷ ಮರಳಕುಂಟೆ ಕೃಷ್ಣಮೂರ್ತಿ ಹಾಗೂ ಚಿಕ್ಕಬಳ್ಳಾಪುರ ವಿಧಾನಸಭಾ ಕ್ಷೇತ್ರದ ಬಿಜೆಪಿ ವಿವಿಧ ಘಟಕಗಳ ಪದಾಧಿಕಾರಿಗಳು, ಬೂತ್ ಮಟ್ಟದ ಮುಖಂಡರು ಕಾರ್ಯಾಗಾರದಲ್ಲಿ ಪಾಲ್ಗೊಂಡಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260504-16-1217392629

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.