ಸೋಮವಾರ, ಮಾರ್ಚ್ 8, 2021
25 °C

ಚಿಕ್ಕಬಳ್ಳಾಪುರ ಸ್ಫೋಟ ಪ್ರಕರಣ ಸಿಐಡಿಗೆ: ಬಸವರಾಜ ಬೊಮ್ಮಾಯಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

DH File

ಚಿಕ್ಕಬಳ್ಳಾಪುರ: ಚಿಕ್ಕಬಳ್ಳಾಪುರ ಜಿಲ್ಲೆ ಗುಡಿಬಂಡೆಯ ಹಿರೇನಾಗವಲ್ಲಿ ಕಲ್ಲು ಕ್ವಾರಿಯಲ್ಲಿ ಸಂಭವಿಸಿರುವ ಸ್ಪೋಟ ಪ್ರಕರಣವನ್ನು ಸಿಐಡಿಗೆ ವಹಿಸಲು ತೀರ್ಮಾನಿಸಿರುವುದಾಗಿ ಗೃಹ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಖಾತೆ ಸಚಿವರಾದ ಬಸವರಾಜ ಬೊಮ್ಮಾಯಿ ಹೇಳಿದರು.

ಸ್ಫೋಟ ಸಂಭವಿಸಿದ ಕ್ವಾರಿಗೆ ಭೇಟಿ ನೀಡಿದ ಬಳಿಕ ಅವರು ಸುದ್ದಿಗಾರರಿಗೆ ಈ ವಿಷಯ ತಿಳಿಸಿದರು. ಘಟನೆ ಸಂಭವಿಸುತ್ತಿದ್ದಂತೆಯೇ ಚಿಕ್ಕಬಳ್ಳಾಪುರದ ಹಿರೆನಾಗವೇಲಿ ಕ್ವಾರಿಗೆ ಭೇಟಿ ನೀಡಿ ಅಲ್ಲಿನ ಪರಿಸ್ಥಿತಿಯನ್ನು ಸಚಿವರು ಪರಿಶೀಲಿಸಿದರು.

ಈ ಘಟನೆಯನ್ನು ಗಂಭೀರವಾಗಿ ಪರಿಗಣಿಸಿದ್ದೇನೆ. ನಿಷ್ಪಕ್ಷಪಾತ ತನಿಖೆಗಾಗಿ ಪ್ರಕರಣವನ್ನು ಸಿಐಡಿಗೆ ವಹಿಸಿಲು ತೀರ್ಮಾನಿಸಿದ್ದೇನೆ ಎಂದು ಬೊಮ್ಮಾಯಿ ಹೇಳಿದರು.

ವರದಿ ಬಂದ 24 ಗಂಟೆಗಳಲ್ಲಿ ತಪ್ಪಿತಸ್ಥರ ವಿರುದ್ಧ ನಿರ್ದಾಕ್ಷಿಣ್ಯವಾಗಿ ಕಠಿಣ ಕ್ರಮ ಜರುಗಿಸುತ್ತೇನೆ‌. ಈ ಪ್ರಕರಣದಲ್ಲಿ ನನ್ನ ಇಲಾಖೆಯಿಂದಲೇ ಕ್ರಮ ಆರಂಭಿಸುತ್ತೇನೆ. ಯಾರನ್ನೂ ರಕ್ಷಣೆ ಮಾಡುವ ಪ್ರಶ್ನೆಯೇ ಇಲ್ಲ ಎಂದು ಬಸವರಾಜ ಬೊಮ್ಮಾಯಿ ಹೇಳಿದರು.

ಮೃತರ ಕುಟುಂಬಸ್ಥರಿಗೆ ₹5 ಲಕ್ಷ ಪರಿಹಾರ

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಕಲ್ಲು ಗಣಿಗಾರಿಕೆ ಬಗ್ಗೆ ಪ್ರತಿ ತಿಂಗಳು ಎಸ್‌ಪಿ ಅವರಿಗೆ ವರದಿ ನೀಡಲು ತಿಳಿಸಿದ್ದೇನೆ. ಸರ್ಕಾರದಿಂದ ಮೃತರ ಕುಟುಂಬದವರಿಗೆ ತಲಾ ₹5 ಲಕ್ಷ ಪರಿಹಾರ ನೀಡಲಾಗುವುದು’ ಎಂದು ಹೇಳಿದರು. 

‘ಹುಣಸೋಡು ದುರಂತ ಬಳಿಕ ಸರ್ಕಾರ ಕಲ್ಲು ಗಣಿಗಾರಿಕೆ ಸಂಬಂಧ ಕಠಿಣ ಕ್ರಮಗಳನ್ನು ತೆಗೆದುಕೊಂಡಿದೆ.  ಮೊದಲು‌ ಮೂರು ತಿಂಗಳಿಗೊಮ್ಮೆ ಪರಿಶೀಲನೆ ನಡೆಸಲಾಗುತ್ತಿತ್ತು. ಈ ಘಟನೆ ಬಳಿಕ ಪ್ರತಿ ತಿಂಗಳು ಕ್ರಷರ್‌ಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಲು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ’ ಎಂದು ತಿಳಿಸಿದರು.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು