ಚಿಕ್ಕಬಳ್ಳಾಪುರ: ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಆಶ್ರಯದಲ್ಲಿ ಮೇ 1 ರಂದು ಬೆಳಗ್ಗೆ 11ಕ್ಕೆ ನಗರದ ಬಿ.ಆರ್ ಅಂಬೇಡ್ಕರ್ ಭವನದಲ್ಲಿ ಭಗವಾನ್ ಬುದ್ಧ ಜಯಂತಿ ಆಯೋಜಿಸಲಾಗಿದೆ.

ಗುಡಿಬಂಡೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಅರ್ಥಶಾಸ್ತ್ರ ಉಪನ್ಯಾಸಕ ಪ್ರೊ.ಟಿ. ಮಂಜಣ್ಣ ಉಪನ್ಯಾಸ ನೀಡುವರು. ಜಿಲ್ಲೆಯ ಎಲ್ಲಾ ಚುನಾಯಿತ ಪ್ರತಿನಿಧಿಗಳು, ಸರ್ಕಾರಿ ನೌಕರರ ಸಂಘ ಮತ್ತು ಇತರೆ ಸಂಘ ಸಂಸ್ಥೆಗಳ ಪದಾಧಿಕಾರಿಗಳು ಭಾಗವಹಿಸುವರು.

ಗೌರಿಬಿದನೂರು ಜಿಟಿಟಿಸಿ ಕಾಲೇಜು ಪ್ರವೇಶಕ್ಕೆ ಅರ್ಜಿ

ಚಿಕ್ಕಬಳ್ಳಾಪುರ: ಗೌರಿಬಿದನೂರಿನ ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರದಲ್ಲಿ (ಜಿಟಿಟಿಸಿ) ಡಿಪ್ಲೊಮಾ ಪ್ರವೇಶಕ್ಕೆ ಅರ್ಜಿ ಆಹ್ವಾನಿಸಲಾಗಿದೆ.

ಎಸ್.ಎಸ್.ಎಲ್.ಸಿ ಉತ್ತೀರ್ಣ ಅಥವಾ ಅನುತ್ತೀರ್ಣರಾದ ವಿದ್ಯಾರ್ಥಿಗಳಿಗಾಗಿ ನಾಲ್ಕು ವರ್ಷದ ಡಿಪ್ಲೊಮಾ ಕೋರ್ಸ್ಗಳಿಗೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಜಿಟಿಟಿಸಿ ಕೇಂದ್ರದಲ್ಲಿ ಡಿಪ್ಲೊಮಾ ಇನ್ ಟೂಲ್ ಆ್ಯಂಡ್ ಡೈ ಮೇಕಿಂಗ್, ಡಿಪ್ಲೊಮಾ ಇನ್ ಮೆಕಾಟ್ರಾನಿಕ್ಸ್, ಡಿಪ್ಲೊಮಾ ಇನ್ ಪ್ರಿಸಿಷನ್ ಮ್ಯಾನುಪ್ಯಾಕ್ಟರಿಂಗ್ ಕೋರ್ಸ್ಗಳಿಗೆ ಪ್ರವೇಶಾತಿ ಪ್ರಾರಂಭವಾಗಿದೆ.

ವಿದ್ಯಾರ್ಥಿಗಳು 3 ವರ್ಷ ಕಾಲೇಜಿನಲ್ಲಿ ವ್ಯಾಸಂಗ ಮಾಡಿದ ನಂತರ ಒಂದು ವರ್ಷ ಕಡ್ಡಾಯವಾಗಿ ಕೈಗಾರಿಕಾ ತರಬೇತಿಗೆ ಪ್ರತಿಷ್ಠಿತ ಕಂಪನಿಗಳಿಗೆ ನಿಯೋಜಿಸಲಾಗುವುದು. ಈ ಅವಧಿಯಲ್ಲಿ ಎಲ್ಲಾ ವಿದ್ಯಾರ್ಥಿಗಳಿಗೂ ₹18,000ದಿಂದ ₹20,000 ವರೆಗೂ ಪ್ರತಿ ತಿಂಗಳು ಶಿಷ್ಯವೇತನ ನೀಡಲಾಗುವುದು.

ಕೋರ್ಸ್ ಮುಗಿದ ನಂತರ ಕಾಲೇಜಿನಿಂದಲೇ ಶೇ 100ರಷ್ಟು ಉದ್ಯೋಗಾವಕಾಶ ಕಲ್ಪಿಸಲಾಗುವುದು. ಜಿಟಿಟಿಸಿಯಲ್ಲಿ ವ್ಯಾಸಂಗ ಮಾಡುತ್ತಿರುವ ಅರ್ಹ ವಿದ್ಯಾರ್ಥಿಗಳಿಗೆ ಸರ್ಕಾರದಿಂದ ವಿದ್ಯಾರ್ಥಿವೇತನ ಸೌಲಭ್ಯವಿದೆ. ಕಾಲೇಜಿನ ಕ್ಯಾಂಪಸ್ ನಲ್ಲಿಯೇ ಬಾಲಕ ಮತ್ತು ಬಾಲಕಿಯರಿಗೆ ರಿಯಾಯಿತಿ ದರದಲ್ಲಿ ಪ್ರತ್ಯೇಕ ಹಾಸ್ಟೆಲ್ ಹಾಗೂ ಕ್ಯಾಂಟೀನ್ ವ್ಯವಸ್ಥೆ ಸಹ ಇದೆ.

ಮಾಹಿತಿಗೆ 8884585436, 7349342369 ಸಂಪರ್ಕಿಸಬಹುದು ಎಂದು ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರ ಪ್ರಾಂಶುಪಾಲರು ತಿಳಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260430-16-1009714772

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.