ಚಿಕ್ಕಬಳ್ಳಾಪುರ: ತಾಲ್ಲೂಕಿನ ಕೊತ್ತನೂರು ಗೇಟ್ನ ರಾಷ್ಟ್ರೀಯ ಹೆದ್ದಾರಿ 44ರಲ್ಲಿ ಶನಿವಾರ ಕಾರು ಉರುಳಿ ಬಿದ್ದು 9 ವರ್ಷ ಬಾಲಕಿ ಸ್ಥಳದಲ್ಲಿಯೇ ಮೃತಪಟ್ಟಿದ್ದಾಳೆ.

ಕಲಬುರ್ಗಿ ಜಿಲ್ಲೆ ಚಿಂಚೋಳಿಯ ರಾಜೇಂದ್ರ ಹಾಗೂ ಭಾಗ್ಯ ದಂಪತಿ ಪುತ್ರಿ ಅಂಕಿತಾ ಮೃತರು. ದಂಪತಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆಯಲ್ಲಿ ವಾಸಿಸುತ್ತಿದ್ದು ಚಿಂಚೋಳಿಯಿಂದ ಹೊಸಕೋಟೆ ಬರುವಾಗ ಈ ಅವಘಡ ನಡೆದಿದೆ.

ಕೊತ್ತನೂರು ಗೇಟ್ ಬಳಿ ಲಾರಿಯನ್ನು ಹಿಂದಿಕ್ಕುವ ವೇಳೆ ಕಾರು ನಿಯಂತ್ರಣ ತಪ್ಪಿ ರಸ್ತೆ ಬದಿಯ ತಡೆಗೋಡೆಗೆ ಡಿಕ್ಕಿಯಾಗಿ ಪಲ್ಟಿಯಾಗಿದೆ. ಅಂಕಿತಾ ತಲೆಗೆ ತೀವ್ರವಾಗಿ ಪೆಟ್ಟು ಬಿದ್ದಿದೆ. ಕಾರಿನಲ್ಲಿದ್ದವರಿಗೆ ಸಣ್ಣ ಪುಟ್ಟ ಗಾಯಗಳಾಗಿವೆ. ಚಿಕ್ಕಬಳ್ಳಾಪುರ ಸಂಚಾರ ಪೋಲಿಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260405-16-1995340408

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.