ಚಿಕ್ಕಬಳ್ಳಾಪುರ: ವಿಶ್ವ ಬಾಲಕಾರ್ಮಿಕ ವಿರೋಧಿ ದಿನಾಚರಣೆಯನ್ನು ಜೂನ್ 12 ರಂದು ಜಿಲ್ಲಾ ಕೇಂದ್ರದಲ್ಲಿ ಅರ್ಥಪೂರ್ಣವಾಗಿ ಆಚರಿಸಲಾಗುತ್ತದೆ. ಇದಕ್ಕೆ ಅಗತ್ಯ ಸಿದ್ದತೆಗಳನ್ನು ಮಾಡಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಜಿ.ಪ್ರಭು ಸೂಚಿಸಿದರು.

ವಿಶ್ವ ಬಾಲಕಾರ್ಮಿಕ ವಿರೋಧಿ ದಿನಾಚರಣೆ ಆಚರಿಸುವ ಸಂಬಂಧ ರೂಪುರೇಷೆಗಳ ಬಗ್ಗೆ ಚರ್ಚಿಸುವ ಸಲುವಾಗಿ ಮಂಗಳವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಜಿಲ್ಲಾ ಬಾಲಕಾರ್ಮಿಕ ಯೋಜನಾ ಸೊಸೈಟಿಯ ಜಿಲ್ಲಾ ಮಟ್ಟದ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಮಾತನಾಡಿದರು.

ಬಾಲಕಾರ್ಮಿಕ ವಿರೋಧಿ ದಿನವನ್ನು ಜೂ.12 ರಂದು ಆಯೋಜಿಸಿ ಆ ಮೂಲಕ ಸಮಾಜಕ್ಕೆ ಪರಿಣಾಮಕಾರಿ ಸಂದೇಶ ರವಾನೆ ಆಗುವಂತೆ ಕಾರ್ಯಕ್ರಮ ನಡೆಸಬೇಕು. ಬಾಲ ಕಾರ್ಮಿಕ ಪದ್ಧತಿ ನಿಷೇಧ ಕಾಯಿದೆ ಮತ್ತು ಬಾಲ ಕಾರ್ಮಿಕ ಪದ್ಧತಿಯಿಂದ ಆಗುವ ದುಷ್ಪರಿಣಾಮಗಳ ಬಗ್ಗೆ ಅಂದು ಜಿಲ್ಲಾ ಕೇಂದ್ರದಲ್ಲಿ ಜಾಗೃತಿ ಜಾಥಾ ನಡೆಸಬೇಕು ಎಂದರು.

ಅಂದು ಬೆಳಿಗ್ಗೆ 9ಕ್ಕೆ ಜಾಥಾಕ್ಕೆ ಪಂಚಗಿರಿ ಬೋಧನಾ ಪ್ರೌಢಶಾಲೆಯಿಂದ ಚಾಲನೆ ನೀಡಲಾಗುವುದು. ಬಿ.ಬಿ.ರಸ್ತೆಯ ಮೂಲಕ ಜಾಥಾವು ಸಭಾ ಕಾರ್ಯಕ್ರಮ ನಡೆಯುವ ಕನ್ನಡ ಭವನಕ್ಕೆ ತಲುಪಲಿದೆ. ಕನ್ನಡ ಭವನದಲ್ಲಿ ಬೆಳಿಗ್ಗೆ 11ಕ್ಕೆ ಸಭಾ ಕಾರ್ಯಕ್ರಮ ನಡೆಯಲಿದೆ ಎಂದು ಹೇಳಿದರು.

ಎಲ್ಲಾ ಇಲಾಖೆಗಳ ಸಹಕಾರ ಮತ್ತು ಸಮನ್ವಯದೊಂದಿಗೆ ಅರ್ಥವತ್ತಾದ ಕಾರ್ಯಕ್ರಮದ ಜೊತೆಗೆ ಪೂರಕವಾದ ಚಟುವಟಿಕೆಗಳನ್ನು ಹಮ್ಮಿಕೊಳ್ಳಬೇಕು. ಕಾರ್ಯಕ್ರಮವು ಚುನಾಯಿತ ಜನಪ್ರತಿನಿಧಿಗಳು, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಸರ್ಕಾರೇತರ ಸಂಸ್ಥೆಗಳು, ಸ್ವಸಹಾಯ ಗುಂಪುಗಳು ಮತ್ತು ಸಂಘಗಳು, ವಿವಿಧ ಕಾರ್ಮಿಕ ಸಂಘಟನೆಗಳು ಹಾಗೂ ಬಾಲ ಕಾರ್ಮಿಕ ಪದ್ಧತಿಯ ವಿರುದ್ಧ ಆಂದೋಲನ ನಡೆಸುತ್ತಿರುವ ಸಂಸ್ಥೆಗಳ ಕಾರ್ಯಕರ್ತರನ್ನು ಒಳಗೊಳ್ಳುವಂತೆ ಮುಂಜಾಗ್ರತೆ ವಹಿಸಬೇಕು. ಕಾರ್ಯಕ್ರಮ ಆಯೋಜನೆಯಲ್ಲಿ ಯಾವುದೇ ಲೋಪಗಳಾಗದಂತೆ ಎಚ್ಚರ ವಹಿಸಬೇಕು ಎಂದು ನಿರ್ದೇಶನ ನೀಡಿದರು.

ಬಾಲಕಾರ್ಮಿಕ ಪದ್ಧತಿ ಹೋಗಲಾಡಿಸುವ ವಿಚಾರವನ್ನು ಜಿಲ್ಲಾಡಳಿತ ಗಂಭೀರವಾಗಿ ಮತ್ತು ವಿಶೇಷ ಕಾಳಜಿಯ ವಿಷಯವಾಗಿ ತೆಗೆದುಕೊಂಡಿದೆ. ಅನಿರೀಕ್ಷಿತ ದಾಳಿಗಳನ್ನು ನಡೆಸಿ ಬಾಲಕಾರ್ಮಿಕರನ್ನು ರಕ್ಷಿಸುವ ಮತ್ತು ಅವರಿಗೆ ಶಿಕ್ಷಣ ನೀಡಿ ಉತ್ತಮ ಭವಿಷ್ಯ ಕಟ್ಟಿಕೊಡುವ ಜೊತೆಗೆ ಮಕ್ಕಳ ಪೋಷಕರಿಗೆ ತಿಳಿವಳಿಕೆ ನೀಡುವ ಹಾಗೂ ಮಕ್ಕಳನ್ನು ದುಡಿಮೆಯಲ್ಲಿ ತೊಡಗಿಸುವವರ ವಿರುದ್ಧ ಕಾನೂನಿನ ಅಸ್ತ್ರ ಪ್ರಯೋಗಿಸಲಾಗುವುದು ಎಂದರು.

ಕೆಲಸದ ಸ್ಥಳಗಳಲ್ಲಿ ಅನಿರೀಕ್ಷಿತ ತಪಾಸಣೆ ಕೈಗೊಂಡು ಬಾಲಕಾರ್ಮಿಕರಾಗಿರುವ ಮಕ್ಕಳನ್ನು ರಕ್ಷಿಸುವುದು ಹಾಗೂ ಮಕ್ಕಳನ್ನು ಶಾಲೆಗೆ ಸೇರಿಸಿ, ಪೋಷಕರ ವಶಕ್ಕೆ ನೀಡಲಾಗುವುದು. ಪೋಷಕರಿಗೆ ಮೊದಲ ಬಾರಿಗೆ ಅಗತ್ಯ ತಿಳಿವಳಿಕೆ ನೀಡಬೇಕು. ಒಂದು ವೇಳೆ ಪುನರಾವರ್ತಿತ ಪ್ರಕರಣವಾದರೆ ಕಾನೂನು ರೀತಿ ಕ್ರಮಜರುಗಿಸಬೇಕು ಎಂದು ಸೂಚಿಸಿದರು.

ವಿಶ್ವ ಬಾಲಕಾರ್ಮಿಕ ಪದ್ಧತಿ ವಿರೋಧಿ ದಿನಾಚರಣೆ ಪ್ರಯುಕ್ತ ಬಾಲ ಹಾಗೂ ಕಿಶೋರ ಕಾರ್ಮಿಕ ಪದ್ಧತಿ ನಿಷೇಧ ಕಾಯ್ದೆಯ ಕುರಿತು ಆಡಿಯೊ ತುಣುಕಿನಲ್ಲಿರುವ ಅರಿವು ಮಾಹಿತಿಯನ್ನು ನಗರ ಮತ್ತು ಗ್ರಾಮೀಣ ಸಂಸ್ಥೆಗಳ ಸ್ವಚ್ಛತಾ ವಾಹನಗಳ ಧ್ವನಿವರ್ಧಕಗಳಲ್ಲಿ ಪ್ರಚಾರ ಮಾಡಬೇಕು. ಈ ಕುರಿತು ಎಲ್ಲಾ ನಗರಸಭೆ, ಪುರಸಭೆ ಹಾಗೂ ತಾಲ್ಲೂಕು ಮತ್ತು ಗ್ರಾಮ ಪಂಚಾಯಿತಿ ವ್ಯಾಪ್ತಿಗಳಲ್ಲಿ ಹೆಚ್ಚಿನ ಅರಿವು ಮೂಡಿಸಬೇಕು ಎಂದರು.

ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಜಗನ್ನಾಥ ರೈ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಎಸ್.ಎಸ್.ಮಹೇಶ್ ಕುಮಾರ್, ಜಿಲ್ಲಾ ಕಾರ್ಮಿಕ ಅಧಿಕಾರಿ ಶಬನಾ ಅಜ್ಮಿ, ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕ ವಿ.ರಮೇಶ್, ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಮಂಜುನಾಥ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಕೆ.ವಿ.ಮುನಿರತ್ನಮ್ಮ, ಮಹಿಳಾ ಮತ್ತು ಮಕ್ಕಳ ಇಲಾಖೆಯ ಉಪ ನಿರ್ದೇಶಕ ಆರ್.ವೆಂಕಟೇಶರೆಡ್ಡಿ, ರೇಷ್ಮೆ ಉಪನಿರ್ದೇಶಕ ಮಾರಪ್ಪ ಬಾಲಪ್ಪ ಬೀರದಹಳ್ಳಿ, ಬೆಸ್ಕಾಂ ಕಾರ್ಯನಿರ್ವಾಹಕ ಎಂಜಿನಿಯರ್ ರಮೇಶ್ ಕುಮಾರ್, ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆಯ ಸಹಾಯಕ ನಿರ್ದೇಶಕ ಮಂಜುನಾಥ ಹಾಗೂ ತಾಲ್ಲೂಕು ಕಾರ್ಮಿಕ ನಿರೀಕ್ಷಕರು ಪಾಲ್ಗೊಂಡಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260520-16-480517443

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.