ಚಿಕ್ಕಬಳ್ಳಾಪುರ: ವಿಶ್ವಹಾಲು ದಿನಾಚರಣೆ ಅಂಗವಾಗಿ ಸೋಮವಾರ ಇಲ್ಲಿನ ಜಿಲ್ಲಾ ಆಸ್ಪತ್ರೆ ಮತ್ತು ತಾಯಿ ಮತ್ತು ಮಕ್ಕಳ ಆಸ್ಪತ್ರೆಯ ಒಳರೋಗಿಗಳಿಗೆ ಚಿಕ್ಕಬಳ್ಳಾಪುರ ಹಾಲು ಒಕ್ಕೂಟ (ಚಿಮುಲ್)ದಿಂದ ಉಚಿತವಾಗಿ ಹಾಲು ವಿತರಿಸಲಾಯಿತು.

ಚಿಮುಲ್ ನಿರ್ದೇಶಕ ಎನ್.ಸಿ. ವೆಂಕಟೇಶ್ ಮಾತನಾಡಿ, ಚಿಮುಲ್ ರಚನೆಯಾದ ನಂತರ ಇದೇ ಮೊದಲ ಬಾರಿಗೆ ಒಳರೋಗಿಗಳಿಗೆ ವಿಶ್ವ ಹಾಲು ದಿನದ ಅಂಗವಾಗಿ ಹಾಲು ವಿತರಿಸಲಾಗಿದೆ. ಈ ಕೆಲಸ ಪ್ರತಿ ವರ್ಷವೂ ಮುಂದುವರಿಯಲಿದೆ ಎಂದು ಹೇಳಿದರು.

ಕೋಲಾರ–ಚಿಕ್ಕಬಳ್ಳಾಪುರ ಹಾಲು ಒಕ್ಕೂಟದ ಪ್ರಥಮ ಅಧ್ಯಕ್ಷರಾಗಿದ್ದ ಪಿಳ್ಳಪ್ಪ ಅವರು ನಮ್ಮ ಎರಡೂ ಜಿಲ್ಲೆಗಳಲ್ಲಿ ಹೈನುಗಾರಿಕೆಯನ್ನು ದೊಡ್ಡ ಪ್ರಮಾಣದಲ್ಲಿ ಬೆಳೆಸಿದರು. ಖಾಸಗಿ ಹಾಲಿನಲ್ಲಿ ರಾಸಾಯನಿಕರಗಳು ಮಿಶ್ರಣವಾಗುತ್ತಿವೆ. ನಂದಿನಿ ಹಾಲಿನಲ್ಲಿ ಗುಣಮಟ್ಟದ್ದಾಗಿದೆ. ಆದ್ದರಿಂದ ಹೊರ ರಾಜ್ಯಗಳಲ್ಲಿಯೂ ಬೇಡಿಕೆ ಇದೆ ಎಂದು ಹೇಳಿದರು.

ತಾಯಿ ಮತ್ತು ಮಕ್ಕಳ ಆಸ್ಪತ್ರೆಯಲ್ಲಿ ನಿರ್ದೇಶಕ ಕೆ.ವಿ.ನಾಗರಾಜ್ ನೇತೃತ್ವದಲ್ಲಿ ಹಾಲು ವಿತರಣೆ ನಡೆಯಿತು.

ಚಿಮುಲ್ ಉಪ ವ್ಯವಸ್ಥಾಪಕ ಮನೋರಂಜನ್ ರೆಡ್ಡಿ ಬಿ., ವಿಸ್ತರಣಾಧಿಕಾರಿ ಹಾಜರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260602-16-1207530511

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.