ಚಿಕ್ಕಬಳ್ಳಾಪುರ: ಸಂವಿಧಾನದತ್ತ ಹಕ್ಕುಗಳನ್ನು ಎಲ್ಲರೂ ಚಲಾಯಿಸುತ್ತೇವೆ ಆದರೆ ಕರ್ತವ್ಯಗಳನ್ನು ಮರೆತಿದ್ದೇವೆ ಎಂದು ರಾಜ್ಯ ಗ್ರಾಹಕ ವ್ಯಾಜ್ಯಗಳ ಪರಿಹಾರ ಆಯೋಗದ ಅಧ್ಯಕ್ಷ ಟಿ.ಜಿ. ಶಿವಶಂಕರೇಗೌಡ ಅವರು ತಿಳಿಸಿದರು.

ಜಿಲ್ಲೆಯಲ್ಲಿ ಐದು ಲಕ್ಷ ಗಿಡಗಳನ್ನು ನೆಡುವ ಕಾರ್ಯಕ್ರಮದ ಭಾಗವಾಗಿ ತಾಲ್ಲೂಕಿನ ಮುದ್ದೇನಹಳ್ಳಿಯಲ್ಲಿರುವ ಸರ್.ಎಂ.ವಿಶ್ವೇಶ್ವರಯ್ಯ ಅವರ ಸ್ಮಾರಕದ ಬಳಿ ಗಿಡ ನೆಡುವ ಕಾರ್ಯಕ್ರಮಕ್ಕೆ ಬುಧವಾರ ಚಾಲನೆ ನೀಡಿ ಮಾತನಾಡಿದರು.

ಇಂದಿನ ಮತ್ತು ಮುಂದಿನ ಪೀಳಿಗೆಯ ಉಳಿವಿಗಾಗಿ ಪರಿಸರ ರಕ್ಷಿಸಿಕೊಳ್ಳುವುದು ಆದ್ಯ ಕರ್ತವ್ಯ. ಆ ನಿಟ್ಟಿನಲ್ಲಿ ನಾವೆಲ್ಲರೂ ಗಿಡಗಳನ್ನು ನೆಟ್ಟು ಪೋಷಿಸುವ ಅಗತ್ಯವಿದೆ. ಈ ಭಾಗವಾಗಿ ಚಿಕ್ಕಬಳ್ಳಾಪುರ ನ್ಯಾಯಾಂಗ ಮತ್ತು ಜಿಲ್ಲಾಡಳಿತ 5 ಲಕ್ಷ ಸಸಿಗಳನ್ನು ನೆಟ್ಟು ಬೆಳೆಸುವ ಕಾರ್ಯಕ್ಕೆ ಮುಂದಾಗಿರುವುದು ಶ್ಲಾಘನೀಯ ಎಂದು ತಿಳಿಸಿದರು.

ಜಿಲ್ಲಾ ಪ್ರಧಾನ ಹಾಗೂ ಸೆಷನ್ಸ್ ನ್ಯಾಯಾಧೀಶ ಟಿ.ಪಿ. ರಾಮಲಿಂಗೇಗೌಡ ಅವರು ಮಾತನಾಡಿ, ರಾಜ್ಯದಲ್ಲಿ 5 ಕೋಟಿ ಗಿಡಗಳನ್ನು ನೆಟ್ಟು ಬೆಳೆಸುವ ಕಾರ್ಯಕ್ಕೆ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರವು ಧರೆ ಫೌಂಡೇಶನ್ ಜೊತೆ ಒಪ್ಪಂದ ಮಾಡಿಕೊಂಡಿದೆ ಎಂದರು.

ಈ ಭಾಗವಾಗಿ ಶಿಡ್ಲಘಟ್ಟ ತಾಲ್ಲೂಕಿನ ಅಪ್ಪೇಗೌಡನಹಳ್ಳಿಯ ಇಂದಿರಾ ಗಾಂಧಿ ವಸತಿ ಶಾಲೆಯ ಆವರಣದಲ್ಲಿ ಗಿಡ ನೆಡುವ ಕಾರ್ಯಕ್ರಮಕ್ಕೆ ಏಪ್ರಿಲ್ನಲ್ಲಿ ಚಾಲನೆ ದೊರಕಿದೆ. ಮುಂದುವರೆದ ಭಾಗವಾಗಿ ಸರ್.ಎಂ.ವಿಶ್ವೇಶ್ವರಯ್ಯ ಅವರ ಸ್ಮಾರಕದ ಬಳಿ 5 ಗುಂಟೆ ಜಮೀನಿನಲ್ಲಿ ಗಿಡ ನೆಡುವ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಗಿದೆ. ಈ ಕಾರ್ಯಕ್ರಮ ಮುಂದಿನ ದಿನಗಳಲ್ಲಿ ಜಿಲ್ಲೆಯ ವಿವಿಧೆಡೆ ಅನುಷ್ಠಾನವಾಗಿ ಒಟ್ಟು 5 ಲಕ್ಷ ಗಿಡಗಳನ್ನು ನೆಟ್ಟು ಬೆಳೆಸುವ ಯೋಜಿತ ಗುರಿ ಹೊಂದಲಾಗಿದೆ ಎಂದು ಹೇಳಿದರು.

ಕೇವಲ ಗಿಡಗಳನ್ನು ನೆಟ್ಟು ಹೋಗುವುದರಿಂದ ಗಿಡ ಬೆಳೆಯುವುದಿಲ್ಲ. ಅವು ಬೆಳೆಯುವವರೆಗೆ ಕನಿಷ್ಠ 3 ವರ್ಷ ರಕ್ಷಣೆ ಮಾಡುವ ಅಗತ್ಯವಿದೆ. ಜಿಲ್ಲಾಡಳಿತ, ಅರಣ್ಯ ಇಲಾಖೆ, ಸಾಮಾಜಿಕ ಅರಣ್ಯ ಇಲಾಖೆ ಸಹಕಾರದಲ್ಲಿ ಜಿಲ್ಲೆಯಲ್ಲಿ 5 ಲಕ್ಷ ಸಸಿಗಳನ್ನು ನೆಟ್ಟು ಬೆಳೆಸಲಾಗುವುದು ಎಂದು ಹೇಳಿದರು.

ಜಿಲ್ಲಾಧಿಕಾರಿ ಜಿ.ಪ್ರಭು ಮಾತನಾಡಿ, ಈ ವರ್ಷ 5 ಲಕ್ಷ ಗಿಡಗಳನ್ನು ಮುಂಗಾರು ಮಳೆಯ ಅವಧಿಯಲ್ಲಿ ನೆಡಲು ಜಿಲ್ಲಾಡಳಿತ ಸಿದ್ಧತೆ ಮಾಡಿಕೊಂಡಿದೆ. ಆ ಕಾರ್ಯಕ್ರಮದ ಜೊತೆಗೆ ಕಾನೂನು ಸೇವಾ ಪ್ರಾಧಿಕಾರದ ಜೊತೆಗೂಡಿ ಹೆಚ್ಚುವರಿಯಾಗಿ 5 ಲಕ್ಷ ಸಸಿಗಳನ್ನು ಬೆಳೆಸುವ ಅರ್ಥಪೂರ್ಣ ಕಾರ್ಯಕ್ರಮವನ್ನು ಅನುಷ್ಠಾನ ಮಾಡಲಾಗುವುದು ಎಂದರು.

ನೆಟ್ಟ ಗಿಡಗಳ ಪೈಕಿ ಶೇ 80 ರಷ್ಟು ಗಿಡಗಳನ್ನು ಉಳಿಸಿ ಬೆಳೆಸಲು ಪ್ರತಿ ತಿಂಗಳಿಗೆ ಒಮ್ಮೆ ಎಲ್ಲಾ ನೆಟ್ಟ ಸಸಿಗಳ ಮೌಲ್ಯಮಾಪನ ಮಾಡುವ ಮೂಲಕ ಈ ಮೌಲ್ಯಯುತವಾದ ಕಾರ್ಯಕ್ರಮ ಯಶಸ್ವಿಗೊಳಿಸಲಾಗುವುದು ಎಂದರು.

ಜಿಲ್ಲಾ ವಕೀಲರ ಸಂಘದ ಅಧ್ಯಕ್ಷ ಅಭಿಲಾಷ್ ಮಾತನಾಡಿ, ಗಿಡ ನೆಟ್ಟು ಮರ ಬೆಳೆಸುವುದರಿಂದ ಬರಗಾಲ ತಪ್ಪಿಸಬಹುದು. ಮಳೆಯ ಪ್ರಮಾಣದಲ್ಲಿ ಸಮತೋಲನದ ಹಂಚಿಕೆಯನ್ನು ಕಾಪಾಡಿಕೊಳ್ಳಬಹುದು ಎಂದರು.

ನ್ಯಾಯಾಧೀಶರಾದ ಕಾಂತರಾಜ್, ಉಮೇಶ್, ಭಾರತಿ ಎಂ, ಬಿ.ಶಿಲ್ಪಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕುಶಾಲ್ ಚೌಕ್ಸೆ, ಸರ್.ಎಂ.ವಿಶ್ವೇಶ್ವರಯ್ಯ ರಾಷ್ಟ್ರೀಯ ಮೆಮೊರಿಯಲ್ ಟ್ರಸ್ಟ್ ಅಧ್ಯಕ್ಷ ಸತೀಶ್ ಮೋಕ್ಷಗುಂಡಂ ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು ಪಾಲ್ಗೊಂಡಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260514-16-738982506

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.