ಮಂಗಳವಾರ, ಜೂನ್ 15, 2021
23 °C

ಚಿಕ್ಕಬಳ್ಳಾಪುರ: ಜಿಲ್ಲಾಧಿಕಾರಿ ಆರ್‌. ಲತಾ ಗ್ರಾಮ ವಾಸ್ತವ್ಯ ಆರಂಭ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಚಿಕ್ಕಬಳ್ಳಾಪುರ: ಜಿಲ್ಲೆಯ ಶಿಡ್ಲಘಟ್ಟ ತಾಲ್ಲೂಕಿನ ಕಸಬಾ ಹೋಬಳಿಯ ಆನೂರು ಗ್ರಾಮ ಪಂಚಾಯತಿ ವ್ಯಾಪ್ತಿಗೆ ಸೇರಿದ ಬೋದಗೂರು ಗ್ರಾಮದಲ್ಲಿ ಜಿಲ್ಲಾಧಿಕಾರಿ ಆರ್.ಲತಾ ಅವರು ಶನಿವಾರ ಬೆಳಿಗ್ಗೆ ಗ್ರಾಮ ವಾಸ್ತವ್ಯ ಆರಂಭಿಸಿದ್ದಾರೆ. 

ಚಿಕ್ಕಬಳ್ಳಾಪುರದಿಂದ ಬೋದಗೂರು ಗ್ರಾಮಕ್ಕೆ ಬಂದಿಳಿದ ಆರ್.ಲತಾ ಅವರು ಮೊದಲಿಗೆ ಗ್ರಾಮದಲ್ಲಿನ ಆಂಜನೇಯಸ್ವಾಮಿ ದೇವಾಲಯಕ್ಕೆ ಭೇಟಿ, ಪೂಜೆ ಸಲ್ಲಿಸಿದರು. ದೇವಸ್ಥಾನದ ಮುಂಭಾಗದಲ್ಲಿ ತೆರೆದಿರುವ ಸಾವಯವ ಹಾಗೂ ಸಿರಿಧಾನ್ಯ ಮಳಿಗೆಗಳಿಗೆ ಭೇಟಿ ನೀಡಿ ರೈತರಿಂದ ಮಾಹಿತಿ ಪಡೆದರು. 

ಇದೇ ವೇಳೆ ಮಾತನಾಡಿದ ಅವರು, ‘ರೈತರು ಬೆಳೆಯುವ ಸಿರಿಧಾನ್ಯಗಳಿಗೆ ಜಿಲ್ಲೆಯಲ್ಲಿ ಹೊಸದಾಗಿ ಒಂದು ಬ್ರ್ಯಾಂಡ್‌ ರೂಪ ನೀಡಿ ರಫ್ತಿಗೆ ಉತ್ತೇಜನ ನೀಡಲಾಗುವುದು’ ಎಂದು ಭರವಸೆ ನೀಡಿದರು.
 
ಬಳಿಕ ಎಸ್‍ಸಿ, ಎಸ್‍ಟಿ ಕಾಲೊನಿಗಳಿಗೆ ಭೇಟಿ ನೀಡಿ ದ್ದು, ಗ್ರಾಮಸ್ಥರ ಅಹವಾಲು ಆಲಿಸುತ್ತಿದ್ದಾರೆ. ವಿವಿಧ ಇಲಾಖಾ ಅಧಿಕಾರಿಗಳು ಸಾರ್ವಜನಿಕರ ಅಹವಾಲುಗಳಿಗೆ ಸಕಾರಾತ್ಮಕವಾಗಿ ಸ್ಪಂದಿಸುತ್ತಿದ್ದಾರೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು