ಚಿಕ್ಕಬಳ್ಳಾಪುರ: 2026-27ನೇ ಸಾಲಿನ ಜಿಲ್ಲಾ ಕರಡು ಅಭಿವೃದ್ಧಿ ಯೋಜನೆ ರೂಪಿಸಲಾಗಿದೆ. ಈ ಕರಡಿನಲ್ಲಿ ₹ 5 ಸಾವಿರ ಕೋಟಿ ಅನುದಾನಕ್ಕೆ ರಾಜ್ಯ ಸರ್ಕಾರಕ್ಕೆ ಬೇಡಿಕೆ ಸಲ್ಲಿಸಲಾಗಿದೆ.

ವಿಶೇಷವಾಗಿ ಶಿಕ್ಷಣ, ಸಮಾಜ ಕಲ್ಯಾಣ, ಉನ್ನತ ಶಿಕ್ಷಣ, ಮಹಿಳಾ ಮತ್ತು ಮಕ್ಕಳ ಕಲ್ಯಾಣ, ಲೋಕೋಪಯೋಗಿ, ಸಣ್ಣ ನೀರಾವರಿ, ಇಂಧನ ಇಲಾಖೆಗಳಿಗೆ ಸಂಬಂಧಿಸಿದಂತೆ ಹೆಚ್ಚು ಅನುದಾನದ ಬೇಡಿಕೆ ಇದೆ.

ಆಯಾ ಜಿಲ್ಲೆಗಳ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಅವರ ನೇತೃತ್ವದಲ್ಲಿ ಪ್ರತಿ ವರ್ಷವೂ ಪ್ರತಿಯೊಂದು ಜಿಲ್ಲೆಯಲ್ಲಿಯೂ ‘ಜಿಲ್ಲಾ ವಾರ್ಷಿಕ ಕರಡು ಅಭಿವೃದ್ಧಿ ಯೋಜನೆ’ ತಯಾರಿಸಲಾಗುತ್ತದೆ. ಜಿಲ್ಲೆಯ ಸಮಗ್ರ ಅಭಿವೃದ್ಧಿ, ರಸ್ತೆ, ನೀರು, ಶಿಕ್ಷಣ, ಆರೋಗ್ಯ ಸೇರಿದಂತೆ ವಿವಿಧ ಮೂಲಸೌಕರ್ಯಗಳು ಈ ಅಭಿವೃದ್ಧಿ ಯೋಜನೆ ವ್ಯಾಪ್ತಿಗೆ ಒಳಪಡುತ್ತವೆ.

ಪ್ರತಿಯೊಂದು ಇಲಾಖೆಗಳಿಗೆ ಭೌತಿಕ ಗುರಿಗಳು ಮತ್ತು ಅನುದಾನದ ಬೇಡಿಕೆಯ ಅಂಕಿ ಅಂಶಗಳನ್ನು ಈ ವರದಿ ಹೊಂದಿರುತ್ತದೆ. ಆ ವರ್ಷ ಜಿಲ್ಲೆಯಲ್ಲಿ ಕೈಗೊಳ್ಳುವ ಪ್ರಮುಖ ಚಟುವಟಿಕೆಗಳು (ಕಾಮಗಾರಿ) ಈ ಕರಡು ಯೋಜನೆಯಲ್ಲಿ ಇರುತ್ತವೆ. ನಮ್ಮ ಇಲಾಖೆಗೆ ಇಂತಿಷ್ಟು ಹಣ ಅಗತ್ಯವಿದೆ, ಇಂತಹ ಕಾಮಗಾರಿಗಳನ್ನು ಕೈಗೊಳ್ಳಬೇಕು ಎಂದು ಸರ್ಕಾರಕ್ಕೆ ಈ ಕರಡು ಅಭಿವೃದ್ಧಿ ಯೋಜನೆಯನ್ನು ಸಲ್ಲಿಸಲಾಗುತ್ತದೆ.

ಒಟ್ಟು 37 ಇಲಾಖೆಗಳ ಭೌತಿಕ ಗುರಿ ಮತ್ತು ಅನುದಾನದ ಬೇಡಿಕೆ ಕರಡು ಪಟ್ಟಿಯಲ್ಲಿವೆ. ಹೀಗೆ ಸಲ್ಲಿಕೆಯಾಗಿರುವ ₹ 5,008 ಕೋಟಿ ಅನುದಾನ ಬೇಡಿಕೆಯ ಕರಡಿನಲ್ಲಿ ಎಸ್ಸಿಎಸ್ಪಿ ಮತ್ತು ಟಿಪಿಎಸ್ ಅನುದಾನವೂ ಇದೆ.

ಅಲ್ಪಸಂಖ್ಯಾತರ ಕಲ್ಯಾಣಕ್ಕೆ 179 ಕೋಟಿ: ಜಿಲ್ಲೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿರುವ ಅಲ್ಪಸಂಖ್ಯಾತರ ಕಲ್ಯಾಣಕ್ಕೆ ₹ 179 ಕೋಟಿ ಮೀಸಲಿಡಲಾಗಿದೆ. ₹ 10 ಕೋಟಿ ವೆಚ್ಚದಲ್ಲಿ ಮೌಲಾನಾ ಆಜಾದ್ ಮಾದರಿ ಶಾಲೆ, ಇಲಾಖೆಯ ಜಿಲ್ಲಾ ಮತ್ತು ತಾಲ್ಲೂಕು ಕಚೇರಿಗಳ ವೆಚ್ಚ ಮತ್ತು ದುರಸ್ತಿಗೆ ₹ 3.20 ಕೋಟಿಗೆ ಮೀಸಲಿಡಲಾಗಿದೆ. ಇವು ಅಲ್ಪಸಂಖ್ಯಾತ ಇಲಾಖೆಯ ಪ್ರಮುಖ ಕಾರ್ಯಕ್ರಮಗಳಾಗಿವೆ. ಅಲ್ಪಸಂಖ್ಯಾತರು ಹೆಚ್ಚಿರುವ ಚಿಂತಾಮಣಿ ವಿಧಾನಸಭಾ ಕ್ಷೇತ್ರಕ್ಕೆ ಈ ಇಲಾಖೆಯ ಹಣವನ್ನು ಹೆಚ್ಚು ವ್ಯಯಿಸಲು ಯೋಜಿಸಲಾಗಿದೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260405-16-123827991

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.