ಚಿಕ್ಕಬಳ್ಳಾಪುರ: ಸಾರ್ವಜನಿಕ ಸ್ಥಳಗಳಲ್ಲಿ ವಿಶೇಷ ಶೌಚಾಲಯ ಸೌಲಭ್ಯ ಕಲ್ಪಿಸುವುದು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಕರ್ನಾಟಕ ವಿಕಲಚೇತನರ ಒಕ್ಕೂಟವು ಹೆಚ್ಚುವರಿ ಜಿಲ್ಲಾಧಿಕಾರಿ ಡಾ.ಎನ್.ಭಾಸ್ಕರ್ ಅವರಿಗೆ ಮಂಗಳವಾರ ಮನವಿ ಸಲ್ಲಿಸಿತು.

ಜಿಲ್ಲೆಯ ಗ್ರಾಮ ಪಂಚಾಯಿತಿಗಳಲ್ಲಿ ಅಂಗವಿಕಲರ ಕಲ್ಯಾಣಕ್ಕಾಗಿ ಮೀಸಲಾದ ಶೇ 5ರ ಅನುದಾನದ ಅನುಷ್ಠಾನ ಕುರಿತು ಕೈಗೊಂಡಿರುವ ಕ್ರಮಗಳ ಮಾಹಿತಿಯನ್ನು ಸಾರ್ವಜನಿಕರಿಗೆ ನೀಡಬೇಕು. ಖಾಸಗಿ ಕ್ಷೇತ್ರಗಳಲ್ಲಿ ಉದ್ಯೋಗ ಕಲ್ಪಿಸಲು ಕ್ರಮ ಕೈಗೊಳ್ಳಬೇಕು. ಪಂಚಾಯಿತಿ ವ್ಯಾಪ್ತಿಯಲ್ಲಿ ಅಂಗವಿಕಲರಿಗೆ ವಿಶೇಷ ಶೌಚಾಲಯಗಳನ್ನು ಕಡ್ಡಾಯವಾಗಿ ನಿರ್ಮಿಸಬೇಕು. ಸರ್ಕಾರಿ ಶಾಲೆಗಳು, ಕಾಲೇಜುಗಳು ಮತ್ತು ಕಚೇರಿಗಳಲ್ಲಿ ರ್ಯಾಂಪ್ ನಿರ್ಮಿಸಬೇಕು ಎಂದು ಕೋರಿದರು.

ಗ್ರಾಮ ಪಂಚಾಯಿತಿ, ಪುರಸಭೆ ಹಾಗೂ ನಗರಸಭೆ ವ್ಯಾಪ್ತಿಯಲ್ಲಿ ಮನೆ ಮತ್ತು ನಿವೇಶನಗಳನ್ನು ಆದ್ಯತೆ ಮೇರೆಗೆ ನೀಡಬೇಕು. ಸರ್ಕಾರದ ಎಲ್ಲಾ ಯೋಜನೆಗಳ ಸೌಲಭ್ಯಗಳು ನೇರವಾಗಿ ಅರ್ಹ ಅಂಗವಿಕಲ ಫಲಾನುಭವಿಗಳಿಗೆ ತಲುಪುವಂತೆ ಕ್ರಮ ಕೈಗೊಳ್ಳಬೇಕು. ಸರ್ಕಾರಿ ಆಸ್ಪತ್ರೆಗಳು, ಅಂಚೆ ಕಚೇರಿಗಳು, ಬ್ಯಾಂಕ್ಗಳು ಹಾಗೂ ಸಾರ್ವಜನಿಕ ಸೇವಾ ಕೇಂದ್ರಗಳಲ್ಲಿ ಪ್ರತ್ಯೇಕ ಸಾಲುಗಳ ವ್ಯವಸ್ಥೆ ಕಡ್ಡಾಯಗೊಳಿಸಬೇಕು ಎಂದು ಮನವಿ ಮಾಡಿದರು.

ಕಡಿಮೆ ಬಡ್ಡಿದರದಲ್ಲಿ ನೇರ ಸಾಲ ಸೌಲಭ್ಯ ಒದಗಿಸಬೇಕು. ಅಂಗವಿಕಲ ಮಹಿಳೆಯರಿಗೆ ಅಗತ್ಯ ಸ್ವಚ್ಛತಾ ಸೌಲಭ್ಯ ಒದಗಿಸಬೇಕು. ಪ್ರತಿ 10 ವರ್ಷಕ್ಕೊಮ್ಮೆ ತ್ರಿಚಕ್ರ ವಾಹನಗಳನ್ನು ಬದಲಿಸಿ ಹೊಸ ವಾಹನ ವಿತರಿಸಬೇಕು. ಜಿಲ್ಲೆಯ ಎಲ್ಲಾ ಪೊಲೀಸ್ ಠಾಣೆಗಳಲ್ಲಿ ಅಂಗವಿಕಲರ ದೂರುಗಳನ್ನು ಪ್ರತ್ಯೇಕವಾಗಿ ದಾಖಲಿಸಬೇಕು. ಪೊಲೀಸ್ ಅಧಿಕಾರಿಗಳು ಗೌರವಯುತವಾಗಿ ವರ್ತಿಸುವಂತೆ ನಿರ್ದೇಶಿಸಬೇಕು.

ಆಸ್ತಿ, ಜಮೀನು ಹಾಗೂ ಹಕ್ಕುಗಳಿಗೆ ಸಂಬಂಧಿಸಿದ ವಿಷಯಗಳಲ್ಲಿ ತಹಶೀಲ್ದಾರ್ ಹಾಗೂ ಸಂಬಂಧಿತ ಅಧಿಕಾರಿಗಳು ಅಂಗವಿಕಲರನ್ನು ನಿರ್ಲಕ್ಷಿಸದೆ ಕಾನೂನುಬದ್ಧವಾಗಿ ಸಮಸ್ಯೆ ಪರಿಹರಿಸಬೇಕು ಎಂದು ಒಕ್ಕೂಟದ ಪದಾಧಿಕಾರಿಗಳು ಮನವಿ ಮಾಡಿದರು.

ಒಕ್ಕೂಟದ ಅಧ್ಯಕ್ಷ ಕೆ.ಜಿ. ಸುಬ್ರಮಣ್ಯಂ, ಕಾರ್ಯದರ್ಶಿ ಕಿರಣ್ ನಾಯಕ್ ಬಿ., ಉಪಾಧ್ಯಕ್ಷೆ ಕೆ.ಸಿ. ಮಮತಾ, ಸಂಚಾಲಕರಾದ ಎಚ್.ಎಸ್. ಕೃಷ್ಣಪ್ಪ, ವೆಂಕಟಶಿವಪ್ಪ, ನರಸಿಂಹಮೂರ್ತಿ, ಮಂಜುನಾಥ್, ಜಯಂತಿ, ಶ್ರೀನಿವಾಸ್ ನಿಯೋಗದಲ್ಲಿ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260603-16-1542758268

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.