ಚಿಕ್ಕಬಳ್ಳಾಪುರ: ಜಿಲ್ಲೆಯ 53 ಕೇಂದ್ರಗಳಲ್ಲಿ ಬುಧವಾರ ಎಸ್ಎಸ್ಎಲ್ಸಿ ಪರೀಕ್ಷೆಯ ಪ್ರಥಮ ಭಾಷೆ ಕನ್ನಡ ಪರೀಕ್ಷೆಯು ಯಾವುದೇ ಲೋಪಗಳು ಇಲ್ಲದಂತೆ ಸುಸೂತ್ರವಾಗಿ ನಡೆಯಿತು.

ಜಿಲ್ಲೆಯಲ್ಲಿ ಪರೀಕ್ಷೆ ಬರೆಯಲು 15,411 ವಿದ್ಯಾರ್ಥಿಗಳು ನೋಂದಾಯಿಸಿಕೊಂಡಿದ್ದರು. ಈ ಪೈಕಿ 15,241 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದರು. 170 ವಿದ್ಯಾರ್ಥಿಗಳು ಗೈರಾಗಿದ್ದರು.

ಬಾಗೇಪಲ್ಲಿ ತಾಲ್ಲೂಕಿನಲ್ಲಿ ಪರೀಕ್ಷೆ ಬರೆಯಲು 2,327 ವಿದ್ಯಾರ್ಥಿಗಳು ನೋಂದಾಯಿಸಿಕೊಂಡಿದ್ದು 2,301 ವಿದ್ಯಾರ್ಥಿಗಳು ಪರೀಕ್ಷೆ ಬರೆದರು. 26 ವಿದ್ಯಾರ್ಥಿಗಳು ಗೈರಾಗಿದ್ದರು. ಚಿಕ್ಕಬಳ್ಳಾಪುರದಲ್ಲಿ ನೋಂದಣಿಯಾಗಿದ್ದ 2,862 ವಿದ್ಯಾರ್ಥಿಗಳ ಪೈಕಿ 2,841 ಮಂದಿ ಪರೀಕ್ಷೆ ಬರೆದರು. 21 ವಿದ್ಯಾರ್ಥಿಗಳು ಗೈರಾಗಿದ್ದರು.

ಚಿಂತಾಮಣಿ ತಾಲ್ಲೂಕಿನಲ್ಲಿ 3,522 ವಿದ್ಯಾರ್ಥಿಗಳು ನೋಂದಣಿ ಮಾಡಿಕೊಂಡಿದ್ದರು. ಇವರಲ್ಲಿ 3,493 ಮಂದಿ ಪರೀಕ್ಷೆ ಬರೆದರೆ 29 ವಿದ್ಯಾರ್ಥಿಗಳು ಗೈರಾಗಿದ್ದರು. ಗೌರಿಬಿದನೂರು ತಾಲ್ಲೂಕಿನಲ್ಲಿ 3,415 ವಿದ್ಯಾರ್ಥಿಗಳ ಪೈಕಿ 3,350 ವಿದ್ಯಾರ್ಥಿಗಳು ಪರೀಕ್ಷೆ ಬರೆದರು. 65 ವಿದ್ಯಾರ್ಥಿಗಳು ಗೈರಾಗಿದ್ದರು.

ಗುಡಿಬಂಡೆ ತಾಲ್ಲೂಕಿನಲ್ಲಿ 655 ವಿದ್ಯಾರ್ಥಿಗಳು ನೋಂದಣಿ ಮಾಡಿಕೊಂಡಿದ್ದು 649 ವಿದ್ಯಾರ್ಥಿಗಳು ಪರೀಕ್ಷೆ ಬರೆದರೆ 6 ವಿದ್ಯಾರ್ಥಿಗಳು ಗೈರಾಗಿದ್ದರು. ಶಿಡ್ಲಘಟ್ಟ ತಾಲ್ಲೂಕಿನಲ್ಲಿ 2,630 ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಾಯಿಸಿಕೊಂಡಿದ್ದು 2,607 ವಿದ್ಯಾರ್ಥಿಗಳು ಪರೀಕ್ಷೆ ಬರೆದರು. 23 ವಿದ್ಯಾರ್ಥಿಗಳು
ಗೈರಾಗಿದ್ದರು.

ನಗರದ ವಿವಿಧ ಪರೀಕ್ಷಾ ಕೇಂದ್ರಗಳಿಗೆ ಶಿಕ್ಷಣ ಇಲಾಖೆ ಡಿಡಿಪಿಐ ರಮೇಶ್ ಹಾಗೂ ಅಧಿಕಾರಿಗಳು ಭೇಟಿ ನೀಡಿದರು.

ಗೌರಿಬಿದನೂರು; 65 ವಿದ್ಯಾರ್ಥಿಗಳು ಗೈರು

ಗೌರಿಬಿದನೂರು: ಕನ್ನಡ ಭಾಷಾ ಪರೀಕ್ಷೆಯೊಂದಿಗೆ ಬುಧವಾರ ಹತ್ತನೇ ತರಗತಿ ವಾರ್ಷಿಕ ಪರೀಕ್ಷೆ ಆರಂಭವಾಗಿದೆ. ತಾಲ್ಲೂಕಿನ ಸರ್ಕಾರಿ, ಅನುದಾನಿತ, ಅನುದಾನ ರಹಿತ 53 ಶಾಲೆಗಳಿಂದ 3,415 ಮಂದಿ ವಿದ್ಯಾರ್ಥಿಗಳು ಪರೀಕ್ಷೆ ಬರೆಯಲು ನೋಂದಾಯಿಸಿಕೊಂಡಿದ್ದರು.

ಇದರಲ್ಲಿ 3,350 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದಾರೆ, 65 ಮಂದಿ ವಿದ್ಯಾರ್ಥಿಗಳು ಗೈರಾಗಿದ್ದರು. ತಾಲ್ಲೂಕಿನಲ್ಲಿ ಒಟ್ಟು 13 ಕೇಂದ್ರಗಳಲ್ಲಿ ಪರೀಕ್ಷೆ ನಡೆಯುತ್ತಿದೆ.

ಪರೀಕ್ಷೆಯನ್ನು ಪಾರದರ್ಶಕವಾಗಿ ನಡೆಸುವ ದೃಷ್ಟಿಯಿಂದ 13 ಮುಖ್ಯ ಅಧೀಕ್ಷಕರು, 2 ಸಹಾಯಕ ಉಪ ಅಧೀಕ್ಷಕರು, 13 ಸಿಟ್ಟಿಂಗ್ ಸ್ಕ್ವಾಡ್, 13 ಕಸ್ಟೋಡಿಯನ್ ಅಧಿಕಾರಿಗಳು, 5 ಮಾರ್ಗ ಅಧಿಕಾರಿಗಳು, 26 ಮಂದಿ ಪೋಲಿಸ್ ಹಾಗೂ ಆಶಾ ಕಾರ್ಯಕರ್ತೆಯರನ್ನು
ನಿಯೋಜಿಸಲಾಗಿತ್ತು.

ಪರೀಕ್ಷೆ ನಡೆಯುವ ಎಲ್ಲಾ ಕೊಠಡಿಗಳಲ್ಲಿ ಸಿಸಿಟಿವಿ ಕ್ಯಾಮೆರಾ ಕಣ್ಗಾವಲು ವ್ಯವಸ್ಥೆ ಮಾಡಲಾಗಿತ್ತು. ಕುಡಿಯುವ ನೀರಿನ ವ್ಯವಸ್ಥೆ, ಆಸನದ ವ್ಯವಸ್ಥೆ ಸೇರಿದಂತೆ ಮೂಲಭೂತ ಸೌಕರ್ಯಗಳನ್ನು ಮಾಡಲಾಗಿತ್ತು.

‘ಈ ಬಾರಿ ಉತ್ತಮ ಫಲಿತಾಂಶ ಬರಲು ಕ್ರಮ ಕೈಗೊಳ್ಳ ಲಾಗಿದೆ. ವಿಧ್ಯಾರ್ಥಿಗಳಿಗೆ ಭಾಷಾವಾರು ಪ್ರತ್ಯೇಕ ಬೋಧನ ನೀಡಲಾಗಿದೆ. ವಿದ್ಯಾರ್ಥಿಗಳು ಭಯ ಬಿಟ್ಟು ಪರೀಕ್ಷೆ ಬರೆಯಬೇಕು’ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಜಿ.ಗಂಗರೆಡ್ಡಿ ತಿಳಿಸಿದರು.

‘ಪರೀಕ್ಷಾ ಕೇಂದ್ರಗಳ ಕೋಠಡಿಗಳಲ್ಲಿ ಉತ್ತಮ ವ್ಯವಸ್ಥೆ ಮಾಡಲಾಗಿದೆ. ಕುಡಿಯಲು ನೀರು, ಪ್ರಥಮ ಚಿಕಿತ್ಸಾ ವೈದ್ಯ ಸೌಲಭ್ಯ ಒದಗಿಸಲಾಗಿದೆ. ಕನ್ನಡ ಪರೀಕ್ಷಾ ಪ್ರಶ್ನೆ ಪತ್ರಿಕೆ ಸುಲಭವಾಗಿತ್ತು’ ಎಂದು ಪರೀಕ್ಷೆ ಬರೆದ ವಿದ್ಯಾರ್ಥಿ ತಿಳಿಸಿದರು.

ಚಿಂತಾಮಣಿಯಲ್ಲಿ ಪರೀಕ್ಷೆ ಸುಗಮ

ಚಿಂತಾಮಣಿ: ಎಸ್ಎಸ್ಎಲ್ಸಿ ಪರೀಕ್ಷೆಯ ಬುಧವಾರದಿಂದ ಆರಂಭವಾಗಿದ್ದು, ಮೊದಲ ದಿನ ಪ್ರಥಮ ಭಾಷೆ ಪರೀಕ್ಷೆಯು ಯಾವುದೇ ಗೊಂದಲಗಳಿಲ್ಲದೆ ಸುಸೂತ್ರವಾಗಿ ನಡೆಯಿತು.

ನಗರದ ಎಲ್ಲ ಪರೀಕ್ಷಾ ಕೇಂದ್ರಗಳ ಮುಂದೆ ವಿದ್ಯಾರ್ಥಿಗಳು ಮೊದಲ ದಿನ ತಮ್ಮ ನೋಂದಣಿ ಸಂಖ್ಯೆ, ಪರೀಕ್ಷಾ ಕೊಠಡಿ ಹುಡುಕುವುದರಲ್ಲಿ ತೊಡಗಿದ್ದರು.

ತಾಲ್ಲೂಕಿನಲ್ಲಿ ಪ್ರಥಮ ಭಾಷೆಗೆ 3,522 ವಿದ್ಯಾರ್ಥಿಗಳು ನೋಂದಣಿ ಮಾಡಿದ್ದು, 3,493 ವಿದ್ಯಾರ್ಥಿಗಳು ಹಾಜರಾಗಿ, 29 ವಿದ್ಯಾರ್ಥಿಗಳು ಗೈರು ಹಾಜರಾಗಿದ್ದರು.

ನಗರದ 5 ಮತ್ತು ಗ್ರಾಮೀಣ ಭಾಗಗಳ 6 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ನಡೆಯಿತು. ಪರೀಕ್ಷೆಗೆ ಸಂಬಂಧಿಸಿ ವಿದ್ಯಾರ್ಥಿಗಳು ಮತ್ತು ಪೋಷಕರಿಂದ ದೂರುಗಳು ಬಂದಿಲ್ಲ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ತನುಜಾ ತಿಳಿಸಿದರು.

ಪರೀಕ್ಷೆಯಲ್ಲಿ ಯಾವುದೇ ಅವ್ಯವಹಾರಗಳಿಗೆ ಅವಕಾಶವಿಲ್ಲದಂತೆ ಪರೀಕ್ಷಾ ಕೊಠಡಿಗಳಲ್ಲಿ ಸಿ.ಸಿ. ಕ್ಯಾಮರಾಗಳನ್ನು ಅಳವಡಿಸಲಾಗಿತ್ತು. ವೆಬ್ಕಾಸ್ಟಿಂಗ್ ಮೂಲಕ ಬೆಂಗಳೂರಿನಿಂದಲೇ ಪರೀಕ್ಷಾ ಮಂಡಳಿಯ ಅಧಿಕಾರಿಗಳು ಎಲ್ಲ ಕೇಂದ್ರಗಳ ಮೇಲ್ವಿಚಾರಣೆ ನಡೆಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.