ಚಿಕ್ಕಬಳ್ಳಾಪುರ: ‘ಸಚಿವ ಸ್ಥಾನ ನೀಡುವ ವಿಚಾರವಾಗಿ ಪಕ್ಷದ ವರಿಷ್ಠರು ಕೈಗೊಳ್ಳುವ ತೀರ್ಮಾನಕ್ಕೆ ಬದ್ಧ. ಆದರೆ ನಮ್ಮ ಜಿಲ್ಲೆಗೆ ಸಚಿವ ಸಂಪುಟದಲ್ಲಿ ಪ್ರಾತಿನಿಧ್ಯ ಕೊಡಿ ಎಂದು ವರಿಷ್ಠರಲ್ಲಿ ಮನವಿ ಮಾಡುವೆ’ ಎಂದು ಉನ್ನತ ಶಿಕ್ಷಣ ಇಲಾಖೆ ಮಾಜಿ ಸಚಿವ ಹಾಗೂ ಚಿಂತಾಮಣಿ ಶಾಸಕ ಡಾ.ಎಂ.ಸಿ.ಸುಧಾಕರ್ ತಿಳಿಸಿದರು.

ನಗರದಲ್ಲಿ ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಜಿಲ್ಲೆಯಲ್ಲಿ ಯಾರಿಗೆ ಸ್ಥಾನ ಕೊಡುವರೊ ಗೊತ್ತಿಲ್ಲ. ಅದು ವರಿಷ್ಠರಿಗೆ ಬಿಟ್ಟ ವಿಚಾರ’ ಎಂದರು.

‘ಸಚಿವನಾಗುವ ಬಯಕೆ ಇರಲಿಲ್ಲ. ಆದರೂ ನನಗೆ ಸಚಿವನಾಗಿ ಕೆಲಸ ಮಾಡಲು ಪಕ್ಷವು ಮೂರು ವರ್ಷ ಅವಕಾಶ ನೀಡಿತ್ತು. ನಾನು ಬಹಳ ಜವಾಬ್ದಾರಿಯಿಂದ ನನ್ನ ಇಲಾಖೆ ಮತ್ತು ಜಿಲ್ಲೆಯಲ್ಲಿ ಕೆಲಸ ಮಾಡಿದ್ದೇನೆ. ನಾನು ಸಚಿವನಾಗಿ ಮುಂದುವರಿಯಬೇಕಾ, ಬೇಡವಾ ಎನ್ನುವುದು ಪಕ್ಷದ ತೀರ್ಮಾನ’ ಎಂದರು.

ಸಚಿವರಾಗಲು ಹಲವು ಮಂದಿ ಅರ್ಹರು ಇದ್ದಾರೆ. ವರಿಷ್ಠರು ಅವಕಾಶ ನೀಡಿದರೆ ಮುಂದುವರಿಯುವೆ, ಇಲ್ಲದಿದ್ದರೆ ಇಷ್ಟು ದಿನ ಅವಕಾಶ ಕೊಟ್ಟಿದ್ದಕ್ಕೆ ಕೃತಜ್ಞತೆ ಸಲ್ಲಿಸುವೆ. ಮುಂದೆ ಏನಾಗುತ್ತದೆಯೊ ನೋಡೋಣ ಎಂದು ಹೇಳಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260601-16-883659061

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.