ದೇವನಹಳ್ಳಿ: ಪಟ್ಟಣದ ಪುರಸಭೆ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಶುದ್ಧ ಕುಡಿಯುವ ನೀರಿನ ಘಟಕ ಮಾದರಿಯನ್ನು ಚಿಕ್ಕಬಳ್ಳಾಪುರ ಜಿಲ್ಲೆಯಲ್ಲೂ ಅಳವಡಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಚಿಕ್ಕಬಳ್ಳಾಪುರ ಜಿಲ್ಲಾ ಉಸ್ತುವಾರಿ ಸಚಿವ ಎಂ.ಸಿ. ಸುಧಾಕರ್ ಹೇಳಿದರು.

ಪಟ್ಟಣದ ಸಿಹಿನೀರಿನ ಕೆರೆಯ ಪಕ್ಕದಲ್ಲಿ ಬಯೋಮ್ ಸಂಸ್ಥೆ ನಿರ್ಮಿಸಿರುವ ಶುದ್ಧ ಕುಡಿಯುವ ನೀರಿನ ಘಟಕಕ್ಕೆ ಭೇಟಿ ನೀಡಿ ಪರಿಶೀಲಿಸಿದ ಬಳಿಕ ಅವರು ಮಾತನಾಡಿದರು.

‘ಬಯೋಮ್ ಸಂಸ್ಥೆ ಕೊಳವೆಬಾವಿಯ ನೀರನ್ನು ಶುದ್ಧೀಕರಿಸಿ ದೇವನಹಳ್ಳಿ ಪುರಸಭೆ ವ್ಯಾಪ್ತಿಯಲ್ಲಿ ಪೂರೈಸುತ್ತಿದೆ. ಇದೇ ಮಾದರಿಯನ್ನು ಚಿಂತಾಮಣಿಯಲ್ಲಿ ಪ್ರಾಯೋಗಿಕವಾಗಿ ಅಳವಡಿಸುವ ಬಗ್ಗೆ ಚಿಂತನೆ ನಡೆಸಲಾಗಿದೆ. ಈ ಸಂಬಂಧ ಜಿಲ್ಲಾಧಿಕಾರಿಗಳೊಂದಿಗೆ ಸ್ಥಳ ಪರಿಶೀಲನೆ ನಡೆಸಿದ್ದೇವೆ’ ಎಂದು ತಿಳಿಸಿದರು.

‘ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ಗಂಭೀರವಾಗಿದೆ. ಜನರಿಗೆ ಶಾಶ್ವತ ಪರಿಹಾರ ಒದಗಿಸುವ ಉದ್ದೇಶದಿಂದ ವಿವಿಧ ಮಾದರಿಗಳನ್ನು ಪರಿಶೀಲಿಸಲಾಗುತ್ತಿದೆ. ಬಳ್ಳೂರಿನ ವೆಟ್ಲ್ಯಾಂಡ್ ಟ್ರೀಟ್ಮೆಂಟ್ ವ್ಯವಸ್ಥೆಯನ್ನೂ ಅಧ್ಯಯನ ಮಾಡಲಾಗುವುದು’ ಎಂದರು.

‘ಎಚ್.ಎನ್. ವ್ಯಾಲಿ ನೀರಿಗೆ ತ್ಯಾಜ್ಯ ನೀರು ಮಿಶ್ರಣವಾಗುತ್ತಿರುವ ಬಗ್ಗೆ ಗೊಂದಲಗಳಿದ್ದು, ಸಮಸ್ಯೆ ನಿವಾರಣೆಗೆ ಪರ್ಯಾಯ ಮಾರ್ಗಗಳನ್ನು ಅನ್ವೇಷಿಸಲಾಗುತ್ತಿದೆ. ದೇವನಹಳ್ಳಿ ಹಾಗೂ ಜಕ್ಕೂರಿನ ನೀರು ಶುದ್ಧೀಕರಣ ಘಟಕಗಳ ಕಾರ್ಯವೈಖರಿ ಅಧ್ಯಯನ ಮಾಡಿ, ಜಿಲ್ಲೆಯಲ್ಲಿ ಅನುಷ್ಠಾನಗೊಳಿಸುವ ಸಾಧ್ಯತೆಗಳನ್ನು ಪರಿಶೀಲಿಸಲಾಗುತ್ತಿದೆ’ ಎಂದು ಹೇಳಿದರು.

ಬಯೋಮ್ ಸಂಸ್ಥೆ ಸಿಎಸ್ಆರ್ ನಿಧಿಯಲ್ಲಿ ಉತ್ತಮ ಕಾರ್ಯ ನಿರ್ವಹಿಸುತ್ತಿದ್ದು, ದೇವನಹಳ್ಳಿಯಲ್ಲಿ ಶುದ್ಧೀಕರಿಸಿದ ನೀರನ್ನು ಸಾರ್ವಜನಿಕರು ಸ್ವೀಕರಿಸಿರುವುದು ಗಮನಾರ್ಹ ಎಂದು ಸಚಿವರು ಮೆಚ್ಚುಗೆ ವ್ಯಕ್ತಪಡಿಸಿದರು.

‘ಚಿಂತಾಮಣಿಯಲ್ಲಿ ಪ್ರಾಯೋಗಿಕವಾಗಿ ಘಟಕ ಆರಂಭಿಸಿ ಯಶಸ್ಸು ಕಂಡರೆ, ಜಿಲ್ಲೆಯ ವಿವಿಧ ಭಾಗಗಳಲ್ಲಿ ನೀರಿನ ಲಭ್ಯತೆ ಆಧರಿಸಿ ಇನ್ನಷ್ಟು ಘಟಕಗಳನ್ನು ಸ್ಥಾಪಿಸಲಾಗುವುದು. ಎಚ್.ಎನ್. ವ್ಯಾಲಿ ಹಾಗೂ ಕೆ.ಸಿ. ವ್ಯಾಲಿ ಯೋಜನೆಗಳಿಂದ ಕೆರೆಗಳಿಗೆ ನೀರು ತುಂಬುತ್ತಿರುವುದರಿಂದ ಮುಂದಿನ ದಿನಗಳಲ್ಲಿ ನಗರ ಮತ್ತು ಗ್ರಾಮೀಣ ಪ್ರದೇಶಗಳಲ್ಲೂ ಇಂತಹ ಘಟಕಗಳನ್ನು ಆರಂಭಿಸಲು ಅವಕಾಶಗಳಿವೆ’ ಎಂದರು.

ಚಿಕ್ಕಬಳ್ಳಾಪುರ ಜಿಲ್ಲಾಧಿಕಾರಿ ಪ್ರಭು, ದೇವನಹಳ್ಳಿ ಪುರಸಭೆ ಮುಖ್ಯಾಧಿಕಾರಿ ಎ. ಶಿವಮೂರ್ತಿ, ಪೌರಸೇವಾ ನೌಕರರ ಸಂಘದ ಅಧ್ಯಕ್ಷ ಮಂಜಪ್ಪ, ಎಂಜಿನಿಯರ್ ಗಂಗಾಧರ್, ರಾಜು, ಮುನಿರಾಜು, ಬಯೋಮ್ ಸಂಸ್ಥೆಯ ಅಧಿಕಾರಿ ಅವಿನಾಶ್ ಹಾಗೂ ಪುರಸಭೆ ಸಿಬ್ಬಂದಿ ಉಪಸ್ಥಿತರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260515-15-700235854

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.