ಚಿಕ್ಕಬಳ್ಳಾಪುರ: ಜಿಲ್ಲೆಯಾದ್ಯಂತ ಕೃಷಿ ಹೊಂಡಗಳ ಸುರಕ್ಷತಾ ಕ್ರಮಗಳ ಕೊರತೆಯಿಂದ ಅನಾಹುತಗಳು ನಡೆಯುತ್ತಿವೆ. ಜನರು, ಜಾನುವಾರುಗಳು ಆಕಸ್ಮಿಕವಾಗಿ ಕೃಷಿ ಹೊಂಡಕ್ಕೆ ಬಿದ್ದು ಪ್ರಾಣ ಕಳೆದುಕೊಳ್ಳುತ್ತಿದ್ದಾರೆ. ಆದ್ದರಿಂದ ರೈತರು ತಕ್ಷಣವೇ ಮುನ್ನೆಚ್ಚರಿಕೆ ಕ್ರಮಗಳನ್ನು ವಹಿಸಬೇಕು ಎಂದು ಕೃಷಿ ಇಲಾಖೆ ಜಂಟಿ ನಿರ್ದೇಶಕರಾದ ಅಬಿದ್ ಎಸ್.ಎಸ್. ಮನವಿ ಮಾಡಿದ್ದಾರೆ.

ತಂತಿಬೇಲಿ ನಿರ್ಮಿಸುವ ಜೊತೆಗೆ ಎಚ್ಚರಿಕೆಯ ಫಲಕಗಳನ್ನೂ ಅಳವಡಿಸಬೇಕು. ಕೃಷಿ ಭಾಗ್ಯ ಯೋಜನೆಯಡಿ ನಿರ್ಮಾಣಗೊಂಡು ಕಾರ್ಯರೂಪದಲ್ಲಿರುವ ಎಲ್ಲ ಹೊಂಡಗಳಿಗೂ ತಂತಿಬೇಲಿ ನಿರ್ಮಿಸಲು ಅವಕಾಶವಿದೆ. 2014–15ರಿಂದ 2019–20ರವರೆಗೆ ಕೃಷಿ ಹೊಂಡ ನಿರ್ಮಾಣ ಮಾಡಿರುವ ರೈತರಿಗೆ ಸರ್ಕಾರದಿಂದ ಸಹಾಯಧನ ಸಹ ನೀಡಲಾಗುತ್ತದೆ. ಸಾಮಾನ್ಯ ರೈತರಿಗೆ ಶೇ 40 ಮತ್ತು ಪರಿಶಿಷ್ಟ ಜಾತಿ ಮತ್ತು ಪಂಗಡದ ರೈತರಿಗೆ ಶೇ 50 ಸಹಾಯ ಧನ ನೀಡಲಾಗುತ್ತದೆ. ಮಾಹಿತಿಗೆ ತಾಲ್ಲೂಕು ಸಹಾಯಕ ಕೃಷಿ ನಿರ್ದೇಶಕರ ಕಚೇರಿ ಮತ್ತು ಹೋಬಳಿ ಮಟ್ಟದ ರೈತ ಸಂಪರ್ಕ ಕೇಂದ್ರಗಳನ್ನು ಸಂಪರ್ಕಿಸಬೇಕು ಎಂದು ಕೋರಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260423-16-860435524

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.