ಚಿಕ್ಕಬಳ್ಳಾಪುರ: ಶಿಡ್ಲಘಟ್ಟ ತಾಲ್ಲೂಕಿನ ಜಂಗಮಕೋಟೆ ಹೋಬಳಿಯ ರೈತರ ಜಮೀನುಗಳನ್ನು ಕಾಂಗ್ರೆಸ್ ಸರ್ಕಾರ ಕೈಗಾರೀಕರಣದ ಹೆಸರಲ್ಲಿ ಲಪಟಾಯಿಸುತ್ತಿದೆ. ಇದನ್ನು ವಿರೋಧಿಸಿ ಜೂನ್ 5ರಂದು ರೈತ ಸಂಘ ಹಾಗೂ ಹಸಿರು ಸೇನೆ ಹಮ್ಮಿಕೊಂಡಿರುವ ವಿಧಾನಸೌಧ ಚಲೋದಲ್ಲಿ ನಾನೂ ಪಾಲ್ಗೊಳ್ಳುವೆ ಎಂದು ಸಂಸದ ಡಾ.ಕೆ.ಸುಧಾಕರ್ ತಿಳಿಸಿದರು.

ನಗರದಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇಲ್ಲಿ ರೈತರು ಅನೇಕ ವರ್ಷಗಳಿಂದ ಕೃಷಿ ಮಾಡಿಕೊಂಡು ಬಂದಿದ್ದಾರೆ. ಜಮೀನು ನೀಡುವುದಿಲ್ಲ ಎಂದು ಹಲವು ತಿಂಗಳಿಂದ ರಾಜ್ಯ ಸರ್ಕಾರದ ವಿರುದ್ಧ ಪ್ರತಿಭಟಿಸುತ್ತಿದ್ದಾರೆ. ರೈತರು ಕೃಷಿ ಮಾಡಲು ಸಾಧ್ಯವಾಗದೆ ರಸ್ತೆಯಲ್ಲಿ ಮಲಗುವ ಸ್ಥಿತಿ ಬಂದಿದೆ. ಇದು ರೈತರಿಗೆ ಮರಣಶಾಸನವಾಗಿದೆ ಎಂದರು.

ಹೋರಾಟಗಾರ ರೈತರಿಗೆ ನಾನು ಹಾಗೂ ಪಕ್ಷದ ಕಾರ್ಯಕರ್ತರಿಂದ ಬೆಂಬಲ ಸೂಚಿಸಲಾಗಿದೆ. ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯಿಂದ ಪ್ರತಿಭಟನೆ ನಡೆಯುತ್ತಿದ್ದು, ಅವರಿಗೆ ನಾನು ಅಭಿನಂದನೆ ಸಲ್ಲಿಸುತ್ತೇನೆ. ರೈತ ಸಂಘದ ಅಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್ ಅವರೊಂದಿಗೆ ಈ ಬಗ್ಗೆ ಚರ್ಚಿಸಿದ್ದೇನೆ ಎಂದು ಹೇಳಿದರು.

ಜೂನ್ 5 ರಂದು ಜಿಲ್ಲಾಧಿಕಾರಿ ಕಚೇರಿಯಿಂದ ಆರಂಭವಾಗಿ ವಿಧಾನಸೌಧ ಚಲೋ ಬೈಕ್ ರ್ಯಾಲಿ ಕಾರ್ಯಕ್ರಮ ನಡೆಯಲಿದೆ. ಇದರಲ್ಲಿ ನಾನು ಕೂಡ ಭಾಗವಹಿಸುತ್ತೇನೆ. ಹತ್ತು ಸಾವಿರಕ್ಕೂ ಅಧಿಕ ಬೈಕ್ ಗಳಲ್ಲಿ ಯುವ ರೈತರು ವಿಧಾನಸೌಧ ಚಲೋ ನಡೆಸುವರು. ಬೇರೆ ಹೋಬಳಿಗಳ ರೈತರು ಹಾಗೂ ಸಾರ್ವಜನಿಕರು ಕೂಡ ಭಾಗವಹಿಸಬೇಕು ಎಂದು ಮನವಿ ಮಾಡಿದರು.

ನಂದಿ ಗಿರಿ ಪ್ರದಕ್ಷಿಣೆ: ಮೇ 31 ರಂದು ಸಂಜೆ 4ಕ್ಕೆ ನಂದಿ ಗಿರಿ ಪ್ರದಕ್ಷಿಣೆ ನಡೆಯಲಿದೆ. ಇದಕ್ಕೆ ಭಾರಿ ಸ್ಪಂದನೆ ವ್ಯಕ್ತವಾಗಿದೆ. ಅನೇಕರು ಮುಂದೆ ಬಂದು ಸಹಕಾರ ನೀಡುತ್ತಿದ್ದಾರೆ. ಕಳೆದ ಬಾರಿ ನಿರ್ಮಲಾನಂದನಾಥ ಸ್ವಾಮೀಜಿ ಭಾಗವಹಿಸಿದ್ದರು. ಈ ಬಾರಿ ಚಿತ್ರದುರ್ಗದ ಮಾದಾರ ಚನ್ನಯ್ಯ ಸ್ವಾಮೀಜಿ ಹಾಗೂ ಆನಂದಮುನಿ ಸ್ವಾಮೀಜಿ ಆಗಮಿಸಲಿದ್ದಾರೆ ಎಂದು ಹೇಳಿದರು.

ಪ್ರತಿ ತಿಂಗಳು ನಡೆಯಲಿರುವ ಕಾರ್ಯಕ್ರಮದಲ್ಲಿ ಸಂತರು ಭಾಗವಹಿಸಲಿದ್ದಾರೆ. ಇದು ಕೇವಲ ದೈಹಿಕ ಚಟುವಟಿಕೆಯಲ್ಲ, ಇದು ಅಧ್ಯಾತ್ಮವಾಗಿ ವಿಕಸನಗೊಳ್ಳುವ ಕಾರ್ಯಕ್ರಮ. ಆದ್ದರಿಂದ ವಿದ್ಯಾರ್ಥಿಗಳು, ಮಹಿಳೆಯರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಬೇಕು. ಈ ಕಾರ್ಯಕ್ರಮದಿಂದ ಅನೇಕರ ಪ್ರಾರ್ಥನೆ ಈಡೇರಿದೆ. ಎಲ್ಲರೂ ಭಾಗವಹಿಸಿ ಶಿವನ ಕೃಪೆಗೆ ಪಾತ್ರರಾಗಿ ಎಂದು ಮನವಿ ಮಾಡಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260530-16-1733118164

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.