ಚಿಕ್ಕಬಳ್ಳಾಪುರ: ರಸಗೊಬ್ಬರ, ಪೆಟ್ರೋಲ್, ಡೀಸೆಲ್ ಬೆಲೆ ಇಳಿಸಬೇಕು. ಸ್ವಾಮಿನಾಥನ್ ವರದಿ ಜಾರಿಗೊಳಿಸಬೇಕು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ನಗರದ ಶಿಡ್ಲಘಟ್ಟ ವೃತ್ತದಲ್ಲಿ ಕರ್ನಾಟಕ ಪ್ರಾಂತ ರೈತ ಸಂಘದಿಂದ ಗುರುವಾರ ಪ್ರತಿಭಟನೆ ನಡೆಯಿತು.

ರೈತರು ತಮಗೆ ಅಗತ್ಯವಾದ ರಸಗೊಬ್ಬರವನ್ನು ಕೇಳಿದಾಗ ವ್ಯಾಪಾರಿಗಳು ಆ ಗೊಬ್ಬರವನ್ನು ನೀಡಬೇಕು. ಆದರೆ ಅದಕ್ಕೆ ಬದಲಾಗಿ ಬೇರೆ ಗೊಬ್ಬರ ನೀಡುತ್ತಿದ್ದಾರೆ. ಜೊತೆಗೆ ಕೀಟನಾಶಕಗಳನ್ನು ಒತ್ತಾಯ ಮಾಡಿ ನೀಡುತ್ತಿದ್ದಾರೆ. ಇದು ನಿಲ್ಲಬೇಕು. ಕೃಷಿ ಚಟುವಟಿಕೆಗಳಿಗೆ ಅನುಕೂಲವಾಗುವಂತೆ ರಿಯಾಯಿತಿ ದರದಲ್ಲಿ ಪರಿಕರಗಳನ್ನು ಹಂಚಿಕೆ ಮಾಡಬೇಕು

ರಸಗೊಬ್ಬರ ಕೃತಕ ಅಭಾವ ಸೃಷ್ಟಿಸಿ ಕಾಳ ಸಂತೆಯಲ್ಲಿ ಮಾರಾಟ ಮಾಡುವವರ ವಿರುದ್ಧ ಕಾನೂನು ಕ್ರಮ ಜರುಗಿಸಬೇಕು. ರೈತರ ಸಾಲ ಮನ್ನಾ ಮಾಡಬೇಕು. ಕೇರಳ ಮಾದರಿಯಲ್ಲಿ ಋಣಮುಕ್ತ ಕಾಯ್ದೆ ಜಾರಿಗೊಳಿಸಬೇಕು ಎಂದು ಪ್ರತಿಭಟನಕಾರರು ಆಗ್ರಹಿಸಿದರು.

ರೈತರು ದೇಶದ ಬೆನ್ನೆಲುಬು ಎಂದು ರಾಜಕೀಯ ಪಕ್ಷಗಳು ಮತ್ತು ನಾಯಕರು ಚುನಾವಣೆ ಪ್ರಚಾರದಲ್ಲಿ ಹೇಳುವರು. ಆದರೆ ಚುನಾವಣೆ ನಂತರ ರೈತರನ್ನು ನಿರ್ಲಕ್ಷಿಸುವರು.

ರಸಗೊಬ್ಬರ ಬೆಲೆ ಹೆಚ್ಚಳದಿಂದ ತೊಂದರೆಯಾಗಿದೆ. ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆಯಿಂದ ದಿನ ಬಳಕೆ ವಸ್ತುಗಳು ಕೂಡ ಬೆಲೆಗಳೂ ಹೆಚ್ಚಿವೆ. ಜನಸಾಮಾನ್ಯರ ಬದುಕು ಕಷ್ಟವಾಗಿದೆ ಎಂದು ದೂರಿದರು.

ಕೆಪಿಆರ್ಎಸ್ ಜಿಲ್ಲಾ ಗೌರವಾಧ್ಯಕ್ಷ ಬಿ.ಎನ್. ಮುನಿಕೃಷ್ಣಪ್ಪ, ಪ್ರಧಾನ ಕಾರ್ಯದರ್ಶಿ ಚನ್ನರಾಯಪ್ಪ, ಪದಾಧಿಕಾರಿಗಳಾದ ಡಿ.ಟಿ. ಮುನಿಸ್ವಾಮಿ, ಡಿ.ಎನ್ ಬಾಬು, ನರಸಿಂಹರೆಡ್ಡಿ, ಎಂ. ರಾಮಕೃಷ್ಣಪ್ಪ, ವೆಂಕಟರಮಣಪ್ಪ, ರಮಣ, ಕೃಷ್ಣಪ್ಪ, ಶ್ರೀನಿವಾಸ ರೆಡ್ಡಿ ನಾರಾಯಣಪ್ಪ, ಕೇಶವಾರದ ಶ್ರೀನಿವಾಸ್ ಮತ್ತಿತರರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260529-16-2137899532

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.