ಚಿಕ್ಕಬಳ್ಳಾಪುರ: ಪಶು ವೈದ್ಯಕೀಯ ತುರ್ತು ಚಿಕಿತ್ಸೆಗಾಗಿ ಉಚಿತ ಸಹಾಯವಾಣಿ 1962ಕ್ಕೆ ರೈತರು ಕರೆ ಮಾಡಿ ಮನೆ ಬಾಗಿಲಿಗೆ ಪಶು ಆರೋಗ್ಯ ಸೇವೆ ಪಡೆಯಬೇಕು ಎಂದು ಜಿಲ್ಲಾಧಿಕಾರಿ ಜಿ.ಪ್ರಭು ಮನವಿ ಮಾಡಿದರು.

ಇಲ್ಲಿನ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ನಡೆದ ಕಾಲುಬಾಯಿ ಜ್ವರ ಲಸಿಕಾ ಕಾರ್ಯಕ್ರಮ ಮತ್ತು ಸಂಚಾರಿ ಪಶುಚಿಕಿತ್ಸಾ ವಾಹನ ಘಟಕಗಳ ಪ್ರಗತಿ ಪರಿಶೀಲನೆ ಸಭೆಯಲ್ಲಿ ಮಾತನಾಡಿದರು.

ಜಾನುವಾರುಗಳ ಹೆರಿಗೆ ಸಮಸ್ಯೆ, ಹೊಟ್ಟೆ ಉಬ್ಬರ, ಕಾಲುಮುರಿತ, ವಿಷ ಪ್ರಾಶನ, ಮೈ ಹೊರ ಬೀಳುವುದು ಸೇರಿದಂತೆ ಆರೋಗ್ಯ ಸಮಸ್ಯೆಗಳಿಗೆ ರೈತರು ಉಚಿತ ಸಹಾಯವಾಣಿಗೆ ಕರೆ ಮಾಡಿ ಚಿಕಿತ್ಸೆ ಪಡೆಯಬಹುದು. ತಜ್ಞ ವೈದ್ಯರು ಮನೆ ಬಾಗಿಲಿಗೆ ಸಂಚಾರಿ ವಾಹನದಲ್ಲಿ ಬಂದು ಚಿಕಿತ್ಸೆ ನೀಡಲಿದ್ದಾರೆ. ಈ ಕಾರ್ಯಕ್ಕಾಗಿ 8 ತಾಲ್ಲೂಕುಗಳಲ್ಲಿ 8 ಸಂಚಾರಿ ಘಟಕಗಳು ಕಾರ್ಯನಿರ್ವಹಿಸುತ್ತಿವೆ ಎಂದರು.

ರಾಷ್ಟ್ರೀಯ ಜಾನುವಾರು ರೋಗ ನಿಯಂತ್ರಣ ಕಾರ್ಯಕ್ರಮದಡಿ 9ನೇ ಹಂತದ ಲಸಿಕಾ ಅಭಿಯಾನ ಜಿಲ್ಲೆಯಲ್ಲಿ ಏ.23 ರಿಂದ ಮೇ 22ರವರೆಗೆ ನಡೆಯಲಿದೆ. ಜಿಲ್ಲೆಯಲ್ಲಿನ ದನ, ಎಮ್ಮೆಗಳಿಗೆ ರೈತರು ಲಸಿಕೆ ಹಾಕಿಸಿಕೊಳ್ಳುವ ಮೂಲಕ ಕಾಲುಬಾಯಿ ರೋಗ ತಡೆಗಟ್ಟಬೇಕು ಎಂದು ಮನವಿ ಮಾಡಿದರು.

ಕಾಲುಬಾಯಿ ರೋಗವು ಸಾಂಕ್ರಾಮಿಕ ರೋಗವಾಗಿದೆ. ಬೇಗನೆ ಒಂದು ರಾಸುವಿನಿಂದ ಇನ್ನೊಂದಕ್ಕೆ ಗಾಳಿಯ ಮೂಲಕ ಹರಡುತ್ತದೆ. ಆದ್ದರಿಂದ ಪ್ರತಿ 6 ತಿಂಗಳಿಗೆ ಒಮ್ಮೆ ಲಸಿಕೆಯನ್ನು ಅನಿವಾರ್ಯವಾಗಿ ಹಾಕಲಾಗುತ್ತಿದೆ. ಈ ಬಗ್ಗೆ ಯಾವ ದಿನಾಂಕ, ಯಾವ ಗ್ರಾಮಗಳಿಗೆ ಲಸಿಕಾಕಾರರು ಬರಲಿದ್ದಾರೆ ಎಂಬುದನ್ನು ಡಂಗೂರು ಮೂಲಕ ಪ್ರಚಾರ ಮಾಡಲು ಹಾಗೂ ಹಾಲಿನ ಡೇರಿಗಳಲ್ಲಿ ರೈತರನ್ನು ಸಂಪರ್ಕಿಸಿ ಜಾಗೃತಿ ಮೂಡಿಸಲು ಪಶುಸಂಗೋಪನಾ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಿದರು.

ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ವೈ.ನವೀನ್ ಭಟ್, ಪಶುಪಾಲನಾ ಇಲಾಖೆ ಉಪನಿರ್ದೇಶಕ ರಂಗಪ್ಪ, ತಾಲ್ಲೂಕು ಪಶು ವೈದ್ಯಾಧಿಕಾರಿಗಳು, ಸಹಾಯಕ ನಿರ್ದೇಶಕರು ಸಭೆಯಲ್ಲಿ ಪಾಲ್ಗೊಂಡಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260418-16-2105053990

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.