ಚಿಕ್ಕಬಳ್ಳಾಪುರ: ರೈತರು ಕಾಲು ಬಾಯಿ ಜ್ವರದಂತಹ ಮಾರಕ ಕಾಯಿಲೆ ನಿಯಂತ್ರಿಸಲು ರಾಸುಗಳಿಗೆ ತಪ್ಪದೆ ಕಾಲುಬಾಯಿ ರೋಗದ ಲಸಿಕೆ ಹಾಕಿಸಬೇಕು ಎಂದು ಚಿಮುಲ್ ನಿರ್ದೇಶಕ ಕೆ.ವಿ.ನಾಗರಾಜ್ ಮನವಿ ಮಾಡಿದರು.

ತಾಲ್ಲೂಕಿನ ಬೋದಗಾನಹಳ್ಳಿಯಲ್ಲಿ ಮಂಗಳವಾರ ಚಿಮುಲ್ ಹಮ್ಮಿಕೊಂಡಿದ್ದ ಕಾಲು ಬಾಯಿ ರೋಗದ ಲಸಿಕಾ ಅಭಿಯಾನಕ್ಕೆ ಚಾಲನೆ ನೀಡಿ ಮಾತನಾಡಿದರು.

ಕಾಲು ಬಾಯಿ ರೋಗ ಮಾರಕವಾದುದು. ಹಸುಗಳಿಗೆ ಬರುವುದರಿಂದ ಹಸುಗಳು ಸಾಯುವ ಆಂತಕವಿದೆ. ಆದ್ದರಿಂದ ಲಸಿಕೆ ಹಾಕಿಸಬೇಕು. ಚಿಮುಲ್ 9ನೇ ಸುತ್ತಿನ ಕಾಲು ಬಾಯಿ ಜ್ವರ ಲಸಿಕಾ ಕಾರ್ಯಕ್ರಮ ಹಮ್ಮಿಕೊಂಡಿದೆ ಎಂದು ಹೇಳಿದರು.

ಕಾಮಧೇನು ಹಸುಗಳಿಗೆ ಯಾವುದೇ ಕಾಯಿಲೆ ಬಾರದಂತೆ ಲಸಿಕೆ ಹಾಕಲಾಗುತ್ತಿದೆ. ದೊಡ್ಡರೋಗದಿಂದ ಈ ಹಿಂದೆ ಅನೇಕ ರಾಸುಗಳು ಮೃತಪಡುತ್ತಿದ್ದವು. ಆದರೆ ಇದೀಗ ದೊಡ್ಡರೋಗ ಸಂಪೂರ್ಣ ನಿರ್ಮೂಲನೆಯಾಗಿದೆ. ಅದೇ ಮಾದರಿಯಲ್ಲಿ ಕಾಲುಬಾಯಿ ರೋಗ ನಿರ್ಮೂಲನೆಗೆ ಲಸಿಕೆಯನ್ನು ತಪ್ಪದೆ ಹಾಕಿಸಬೇಕು. ಲಸಿಕೆ ಹಾಕುವುದರಿಂದ ಹಾಲು ಕಡಿಮೆ ಆಗುವುದಿಲ್ಲ ಎಂದು ಹೇಳಿದರು.

ಚಿಕ್ಕಬಳ್ಳಾಪುರ ತಾಲ್ಲೂಕಿನಲ್ಲಿ ಒಟ್ಟು 28,500 ರಾಸುಗಳಿಗೂ ಲಸಿಕೆ ಹಾಕುವ ಅಭಿಯಾನ ನಡೆಸಲಾಗುತ್ತಿದೆ. ಇದರಲ್ಲಿ 25 ಸಾವಿರ ಹಸುಗಳು ಮತ್ತು 3,500 ಎಮ್ಮೆಗಳು ಸೇರಿವೆ. ಜಿಲ್ಲೆಯಲ್ಲಿ 1.8 ಲಕ್ಷ ರಾಸುಗಳಿದ್ದು ಎಲ್ಲ ರಾಸುಗಳಿಗೆ ಲಸಿಕೆ ಹಾಕುವ ಗುರಿ ಹೊಂದಲಾಗಿದೆ. ರೈತರು ಲಸಿಕೆ ಹಾಕಲು ಪಶುಪಾಲನಾ ಇಲಾಖೆ ಅಧಿಕಾರಿಗಳು ಮನೆ ಬಾಗಿಲಿಗೆ ಬಂದಾಗ ಸಹಕರಿಸಬೇಕು ಎಂದು ಪಶುಪಾಲನಾ ಇಲಾಖೆ ಅಧಿಕಾರಿಗಳು ಮನವಿ ಮಾಡಿದರು.

ಕರ್ನಾಟಕ ಕುರಿ ಮತ್ತು ಉಣ್ಣೆ ಅಭಿವೃದ್ಧಿ ನಿಗಮದ ಅಧಿಕಾರಿ ಜ್ಞಾನೇಂದ್ರ ಮತ್ತಿತರರು ಪಾಲ್ಗೊಂಡಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260513-16-387118291

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.