ಚಿಕ್ಕಬಳ್ಳಾಪುರ: ಜಿಲ್ಲಾಡಳಿತ ಭವನದ ಆವರಣದಲ್ಲಿ ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಹಾಗೂ ಸಂವಿಧಾನ ಶಿಲ್ಪಿ ಬಿ.ಆರ್.ಅಂಬೇಡ್ಕರ್ ಅವರ ಪುತ್ಥಳಿಗಳನ್ನು ಅತಿ ಶೀಘ್ರದಲ್ಲಿ ನಿರ್ಮಿಸಲಾಗುವುದು ಎಂದು ಜಿಲ್ಲಾಧಿಕಾರಿ ಜಿ.ಪ್ರಭು ತಿಳಿಸಿದರು.

ಇಲ್ಲಿನ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಸೋಮವಾರ ನಡೆದ ಬಿ.ಆರ್. ಅಂಬೇಡ್ಕರ್ ಹಾಗೂ ಬಾಬು ಜಗಜೀವನರಾಂ ಅವರ ಜಯಂತಿ ಆಚರಣೆಯ ಪೂರ್ವ ಸಿದ್ಧತಾ ಸಭೆಯಲ್ಲಿ ಮಾತನಾಡಿದರು.

ಜಿಲ್ಲಾಡಳಿತ ಭವನದಲ್ಲಿ ಮಹಾತ್ಮ ಗಾಂಧೀಜಿ ಹಾಗೂ ಬಿ.ಆರ್. ಅಂಬೇಡ್ಕರ್ ಅವರ ಪುತ್ಥಳಿಗಳನ್ನು ನಿರ್ಮಾಣ ಕಾಮಗಾರಿಯನ್ನು ಕೈಗೊಳ್ಳಲು ಈಗಾಗಲೇ ಅನುದಾನ ಕೂಡ ಬಿಡುಗಡೆ ಆಗಿದೆ. ಬೆಂಗಳೂರಿನ ಜ್ಞಾನ ಭಾರತಿ ಕ್ಯಾಂಪಸ್ ಬಳಿ ನಿರ್ಮಾಣ ಮಾಡಿರುವ ಪುತ್ಥಳಿಗಳ ಮಾದರಿಯಲ್ಲಿ ಇಲ್ಲಿಯೂ ನಿರ್ಮಿಸಲು ಕ್ರಮವಹಿಸಲಾಗಿದೆ. ಈ ವಿಚಾರದಲ್ಲಿ ವಿಳಂಬದ ಪ್ರಶ್ನೆಯೇ ಇಲ್ಲ. ಜಿಲ್ಲಾ ಉಸ್ತುವಾರಿ ಸಚಿವರು ಈ ಕುರಿತು ಸೂಚನೆ ನೀಡಿದ್ದಾರೆ. ಶೀಘ್ರವಾಗಿ ಪುತ್ಥಳಿಗಳ ನಿರ್ಮಾಣ ಕಾರ್ಯ ಆಗಲಿದೆ ಎಂದು ಭರವಸೆ ನೀಡಿದರು.

ಪ್ರತಿ ವರ್ಷದಂತೆ ಈ ವರ್ಷವು ಏ.5ರಂದು ಬಾಬು ಜಗಜೀವನರಾಂ ಅವರ ಜಯಂತಿ ಹಾಗೂ ಏ.14 ರಂದು ಬಿ.ಆರ್. ಅಂಬೇಡ್ಕರ್ ಅವರ ಜಯಂತಿಯನ್ನು ಜಿಲ್ಲಾ ಕನ್ನಡ ಭವನದಲ್ಲಿ ಆಯೋಜಿಸಲು ನಿರ್ಧರಿಸಲಾಗಿದೆ. ಈ ಇಬ್ಬರು ಮಹನೀಯರ ಜಯಂತಿಗಳನ್ನು ಅದ್ದೂರಿಯಾಗಿ ಹಾಗೂ ಅರ್ಥಪೂರ್ಣವಾಗಿ ಆಚರಿಸಲು ಜಿಲ್ಲಾ, ತಾಲ್ಲೂಕು ಮಟ್ಟದ ಅಧಿಕಾರಿಗಳು ಹಾಗೂ ಸಮುದಾಯ ಮುಖಂಡರನ್ನು ಒಳಗೊಂಡ ಸಮಿತಿ ಹಾಗೂ ಉಪಸಮಿತಿಗಳನ್ನು ರಚಿಸಲಾಗಿದೆ ಎಂದು ವಿವರಿಸಿದರು.

ಜಯಂತಿಗಳ ಆಚರಣೆಗೆ ವೇದಿಕೆ ಸಿದ್ದತೆ, ಆಹ್ವಾನ ಪತ್ರಿಕೆ ಮುದ್ರಣ, ವಿತರಣೆ, ಸಾಧಕರಿಗೆ ಸನ್ಮಾನ, ಪ್ರತಿಭಾ ಪುರಸ್ಕಾರ, ವೇದಿಕೆ ಸಿದ್ಧತೆ ಹಾಗೂ ಕಾರ್ಯಕ್ರಮ ಆಯೋಜನೆ ಸೇರಿದಂತೆ ಅಗತ್ಯ ಸಕಲ ಸಿದ್ಧತೆಗಳನ್ನು ಮಾಡಿಕೊಳ್ಳಬೇಕು ಎಂದು ಸಂಬಂಧ ಪಟ್ಟ ಇಲಾಖೆಯ ಮುಖ್ಯಸ್ಥರಿಗೆ ತಿಳಿಸಿ ಕಾರ್ಯ ಹಂಚಿಕೆ ಮಾಡಿದರು.

ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ವೈ.ನವೀನ್ ಭಟ್, ಉಪವಿಭಾಗಾಧಿಕಾರಿ ಡಿ.ಎಚ್.ಅಶ್ವಿನ್, ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕ ತೇಜಾನಂದರೆಡ್ಡಿ, ಸಮುದಾಯದ ಮುಖಂಡರು, ದಲಿತ ಸಂಘಟನೆಗಳ ಮುಖಂಡರು ಸಭೆಯಲ್ಲಿ ಪಾಲ್ಗೊಂಡಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260324-16-1538892394

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.