ಮಂಗಳವಾರ, 19 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಚಿಕ್ಕಬಳ್ಳಾಪುರ ಜಿಲೆಟಿನ್‌ ಸ್ಫೋಟ ದುರಂತ: ಐದು ಮಂದಿಯ ‌ಬಂಧನ

Last Updated 24 ಫೆಬ್ರುವರಿ 2021, 10:01 IST
ಅಕ್ಷರ ಗಾತ್ರ

ಚಿಕ್ಕಬಳ್ಳಾಪುರ: ಜಿಲ್ಲೆಯ ಹಿರೇನಾಗವಲ್ಲಿಯಲ್ಲಿ ಸಂಭವಿಸಿದ ಜಿಲೆಟಿನ್‌ ಸ್ಫೋಟ ಪ್ರಕರಣ ಸಂಬಂಧ ಐದು ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ.

ಸೋಮವಾರ ತಡರಾತ್ರಿ ನಡೆದ ಸ್ಫೋಟ ದುರಂತದಲ್ಲಿ 6 ಮಂದಿ ಕಾರ್ಮಿಕರು ಮೃತಪಟ್ಟಿದ್ದರು.

ಪ್ರಕರಣ ಸಂಬಂಧ ತನಿಖೆ ನಡೆಸುತ್ತಿರುವ ಪೊಲೀಸರು ಆಂಧ್ರ ಪ್ರದೇಶದ ಅನಂತಪುರ ಜಿಲ್ಲೆಯ ಗೋರಂಟ್ಲದಲ್ಲಿ ತಲೆಮೆರೆಸಿಕೊಂಡಿದ್ದ ಪ್ರಕರಣದ ಎರಡನೇ ಆರೋಪಿ, ಗಣಿ ಮಾಲೀಕ ರಾಘವೇಂದ್ರ ರೆಡ್ಡಿ, ನಾಲ್ಕನೇ ಆರೋಪಿ ವೆಂಕಟಶಿವಾ ರೆಡ್ಡಿ, ಐದನೇ ಆರೋಪಿ ಪ್ರವೀಣ್, ಏಳನೇ ಆರೋಪಿ ಚಾಲಕ ರಿಯಾಜ್ ಮತ್ತು ಹದಿನಾಲ್ಕನೇ ಆರೋಪಿ ಮಧುಸೂದನ್ ರೆಡ್ಡಿ ಅವರನ್ನು ಬಂಧಿಸಿದ್ದಾರೆ.

ಮತ್ತೊಬ್ಬ ಆರೋಪಿ ಬಿಜೆಪಿ ಮುಖಂಡ ಹಾಗೂ ರೈಲ್ವೆ ಸಮಿತಿ ಸದಸ್ಯ ಗುಡಿಬಂಡೆ ನಾಗರಾಜ್‌ಗಾಗಿ ಪೊಲೀಸರು ತೀವ್ರ ಶೋಧ ನಡೆಸುತ್ತಿದ್ದಾರೆ.

ವೆಂಕಟಶಿವಾ ರೆಡ್ಡಿ
ವೆಂಕಟಶಿವಾ ರೆಡ್ಡಿ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT