ಚಿಕ್ಕಬಳ್ಳಾಪುರ ಸ್ಫೋಟ ದುರಂತ: ಕರ್ತವ್ಯ ಲೋಪ ಎಸಗಿದ ಪಿಐ, ಪಿಎಸ್ಐ ಅಮಾನತು

ಚಿಕ್ಕಬಳ್ಳಾಪುರ: ಕರ್ತವ್ಯಲೋಪ ಎಸಗಿದ ಆರೋಪದ ಮೇಲೆ ಗುಡಿಬಂಡೆ ಪೊಲೀಸ್ ಇನ್ಸ್ಪೆಕ್ಟರ್ ಮಂಜುನಾಥ್ ಹಾಗೂ ಗುಡಿಬಂಡೆ ಗ್ರಾಮೀಣ ಠಾಣೆಯ ಪೊಲೀಸ್ ಸಬ್ ಇನ್ಸ್ಪೆಕ್ಟರ್ ಗೋಪಾಲ ರೆಡ್ಡಿ ಅವರನ್ನು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜಿ.ಕೆ.ಮಿಥುನ್ ಕುಮಾರ್ ಅಮಾನತುಗೊಳಿಸಿದ್ದಾರೆ.
ತಾಲ್ಲೂಕಿನ ಹಿರೇನಾಗವಲ್ಲಿ ಗ್ರಾಮದ ಬಳಿ ಅಕ್ರಮ ಕಲ್ಲು ಗಣಗಾರಿಕೆ ಮತ್ತು ಸ್ಫೋಟಕಗಳ ದಾಸ್ತಾನು ಕುರಿತು ಫೆ.7 ರಂದು ಭ್ರಮರವಾಸಿನಿ ಕಷರ್ ಮೇಲೆ ದಾಳಿ ನಡೆಸಿ ಮಾಲೀಕರ ವಿರುದ್ಧ ದೂರು ದಾಖಲಿಸಿಕೊಳ್ಳಲಾಗಿತ್ತು. ಆದರೆ, ಪ್ರಕರಣ ದಾಖಲು ಮಾಡಿದರೂ ಕೂಡ ಆರೋಪಿಗಳನ್ನು ಬಂಧಿಸುವಲ್ಲಿ ವಿಫಲರಾದ ಕಾರಣಕ್ಕೆ ಅವರನ್ನು ಅಮಾನತುಗೊಳಿಸಲಾಗಿದೆ ಎಂದು ಹೇಳಿದರು.
ಇನ್ನಷ್ಟು ಓದು...
ಚಿಕ್ಕಬಳ್ಳಾಪುರ: 6 ಜೀವ ಬಲಿ ಪಡೆದ ಜಿಲೆಟಿನ್ ಸ್ಫೋಟ
ಚಿಕ್ಕಬಳ್ಳಾಪುರದಲ್ಲಿ ಸ್ಫೋಟ: ದೇಹ ಅಷ್ಟೇ ಅಲ್ಲ; ಬದುಕೂ ಛಿದ್ರ...
ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.