ಚಿಕ್ಕಬಳ್ಳಾಪುರ: ಗ್ರಾಮೀಣಾಭಿವೃದ್ಧಿ ಅಧಿಕಾರಿಗಳು ಒಪ್ಪಿಕೊಂಡಿರುವಂತೆ ಎಲ್ಲ ನೌಕರರಿಗೆ ₹ 5 ಸಾವಿರ ವೇತನ ಹೆಚ್ಚಳ ಮಾಬೇಕು. ನೌಕರರು ನಿವೃತ್ತಿ, ನಿಧನ ಹೊಂದಿದರೆ ಅವರಿಗೆ ₹ 6 ಲಕ್ಷ ಇಡುಗಂಟು ನೀಡಬೇಕು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಗ್ರಾಮ ಪಂಚಾಯಿತಿ ನೌಕರರ ಸಂಘದ ಜಿಲ್ಲಾ ಘಟಕದಿಂದ ನಗರದ ಜಿಲ್ಲಾಧಿಕಾರಿ ಕಚೇರಿ ಎದುರು ಗುರುವಾರ ಪ್ರತಿಭಟಿಸಲಾಯಿತು.

ಪಂಚಾಯಿತಿಗಳಿಗೆ ದ್ವಿತೀಯ ದರ್ಜೆ ಲೆಕ್ಕ ಸಹಾಯಕರನ್ನು ನೇಮಿಸಬೇಕು. 2ನೇ ಡಾಟಾ ಎಂಟ್ರಿ ಆಪರೇಟರ್ ನೇಮಕ ಮಾಡಬೇಕು. ಆದಾಯಕ್ಕೆ ಅನುಗುಣವಾಗಿ ಕರ ವಸೂಲಿಗಾರರ ಹುದ್ದೆಗಳನ್ನು ನಿಗದಿಗೊಳಿಸಬೇಕು. ಎಲ್ಲ ನೌಕರರಿಗೆ ಸೇವಾ ಪುಸ್ತಕ ತೆರೆಯಬೇಕು. ನಿವೃತ್ತಿ, ನಿಧನ ಹೊಂದಿದ ನೌಕರರಿಗೆ ಗ್ರ್ಯಾಚ್ಯುಟಿ ನೀಡಬೇಕು. ಎಸ್ಎಸ್ಎಲ್ಸಿ ಉತ್ತೀರ್ಣರಾದ ಸತತ ಐದು ವರ್ಷ ಕೆಲಸ ಮಾಡಿದ ನೌಕರರಿಗೆ ಬಿಲ್ ಕಲೆಕ್ಟರ್ ಹುದ್ದೆಗೆ ಬಡ್ತಿ ನೀಡಬೇಕು ಎಂದು ಪ್ರತಿಭಟನಕಾರರು ಆಗ್ರಹಿಸಿದರು.

ಗ್ರಾಮ ಪಂಚಾಯಿತಿ ನೌಕರರ ಬಿಪಿಎಲ್ ಪಡಿತರ ಚೀಟಿ ರದ್ದುಪಡಿಸಿರುವುದನ್ನು ಹಿಂತೆಗೆದುಕೊಳ್ಳಬೇಕು. ಮರಣ ಹೊಂದಿದ ನೌಕರರ ಕುಟುಂಬಗಳಿಗೆ ತಕ್ಷಣ ಕೆಲಸ ನೀಡಬೇಕು ಎಂದು ಒತ್ತಾಯಿಸಿದರು.

ಗ್ರಾಮ ಪಂಚಾಯಿತಿ ನೌಕರರ ಸಂಘದ ಜಿಲ್ಲಾ ಅಧ್ಯಕ್ಷ ಪಾಪಣ್ಣ ಮಾತನಾಡಿ, ಮಳೆ, ಚಳಿ,ಬಿಸಿಲನ್ನು ಲೆಕ್ಕಿಸದೆ ಕೆಲಸ ಮಾಡುತ್ತಿರುವ ಗ್ರಾಮ ಪಂಚಾಯಿತಿ ನೌಕರರಿಗೆ ಕನಿಷ್ಠ ₹ 31 ಸಾವಿರ ವೇತನ ನಿಗದಿಪಡಿಸಬೇಕು ಎಂದು ಆಗ್ರಹಿಸಿದರು.

ಕಳೆದ ವರ್ಷ ಡಿಸೆಂಬರ್ನಲ್ಲಿ ಬೆಂಗಳೂರಿನ ಸ್ವಾತಂತ್ರ್ಯ ಉದ್ಯಾನದಲ್ಲಿ ನಡೆದ ಧರಣಿ ವೇಳೆ ಸರ್ಕಾರ ನೀಡಿದ ಭರವಸೆ ಮೂರು ತಿಂಗಳು ಕಳೆದರೂ ಈಡೇರಿಸಿಲ್ಲ. ಈ ಬಗ್ಗೆ ಗಮನವಹಿಸದಿದ್ದರೆ ಬೆಂಗಳೂರು ಚಲೋ ಹೋರಾಟ ನಡೆಸಲಾಗುವುದು ಎಂದು ಎಚ್ಚರಿಸಿದರು.

ಪ್ರತಿಭಟನೆ ಬಳಿಕ ಜಿಲ್ಲಾ ಪಂಚಾಯಿತಿ ಉಪಕಾರ್ಯದರ್ಶಿ ಅತೀಕ್ ಪಾಷ ಅವರಿಗೆ ಮನವಿ ಸಲ್ಲಿಸಲಾಯಿತು. ಸಿಐಟಿಯು ಜಿಲ್ಲಾ ಅಧ್ಯಕ್ಷೆ ಲಕ್ಷ್ಮಿದೇವಮ್ಮ, ಗ್ರಾಮ ಪಂಚಾಯಿತಿ ನೌಕರರ ಸಂಘದ ಪದಾಧಿಕಾರಿಗಳಾದ ಫಯಾಜ್, ಈಶ್ವರಪ್ಪ, ಶ್ರೀನಿವಾಸ್, ಮಂಜುನಾಥ್, ನರಸಿಂಹಪ್ಪ, ನರಸಿಂಹಮೂರ್ತಿ, ಶಿವಣ್ಣ ಮತ್ತಿತರರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260417-16-1201960383

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.