ಚಿಕ್ಕಬಳ್ಳಾಪುರ: ಗ್ರಾಮೀಣ ಬಡವರಿಗೆ ಉದ್ಯೋಗದ ಹಕ್ಕನ್ನು ಕಲ್ಪಿಸಿದ್ದ ಮಹಾತ್ಮ ಗಾಂಧಿ ಗ್ರಾಮೀಣ ಉದ್ಯೋಗ ಖಾತ್ರಿ ಕಾಯ್ದೆ ಪುನರ್ ಸ್ಥಾಪಿಸಬೇಕು. ಈ ಕಾಯ್ದೆ ಅಡಿ ವರ್ಷಕ್ಕೆ ಕನಿಷ್ಠ 200 ದಿನ ಕೆಲಸ ನೀಡಬೇಕು. ₹ 600 ಕೂಲಿ ನೀಡಬೇಕು. ವಿಬಿ-ಜಿ ರಾಮ್ ಜಿ ಕಾಯಿದೆ ರದ್ದುಗೊಳಿಸಬೇಕು ಎಂದು ಆಗ್ರಹಿಸಿ ಮೇ. 15ರಂದು ಜಿಲ್ಲೆಯ 157 ಗ್ರಾಮ ಪಂಚಾಯಿತಿಗಳ ಎದುರು ಧರಣಿ ನಡೆಸಲಾಗುವುದು ಎಂದು ಕರ್ನಾಟಕ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಟನೆ ಜಿಲ್ಲಾ ಅಧ್ಯಕ್ಷ ಎಂ.ಪಿ.ಮುನಿವೆಂಕಟಪ್ಪ ತಿಳಿಸಿದರು.

ಗುರುವಾರ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು, ದೇಶದ ಎಲ್ಲಾ ಗ್ರಾಮ ಪಂಚಾಯಿತಿಗಳ ಮುಂದೆ ಪ್ರತಿಭಟನೆ ನಡೆಸಲು ತೀರ್ಮಾನಿಸಲಾಗಿದೆ ಎಂದರು.

ಜಿಲ್ಲೆಯಲ್ಲಿ ಗ್ರಾಮೀಣ ಬಡವರಿಗೆ ಹಾಗೂ ನಗರ ಪ್ರದೇಶದ ಬಡವರಿಗೂ ಮನೆ, ನಿವೇಶನದ ಸಮಸ್ಯೆ ಗಂಭೀರವಾಗಿದೆ. ರಾಜ್ಯ ಸರ್ಕಾರ ಬಡವರಿಗೆ ಮನೆ ಮತ್ತು ನಿವೇಶನ ನೀಡುತ್ತಿಲ್ಲ. ಜಿಲ್ಲೆಯಲ್ಲಿ ಬಡವರನ್ನು ಸಂಘಟಿಸಿ ಮನೆ ನಿವೇಶನದ ಚಳವಳಿ ನಡೆಸಲಾಗುವುದು ಎಂದರು.

ಕೇಂದ್ರ ಸರ್ಕಾರ ಅಮೆರಿಕದೊಂದಿಗೆ ನಡೆಸಿರುವ ವಾಣಿಜ್ಯ ಒಪ್ಪಂದದಿಂದ ಹೈನುಗಾರಿಕೆ ನಾಶವಾಗಲಿದೆ. ಜಿಲ್ಲೆಯಲ್ಲಿ ಗ್ರಾಮೀಣ ಜನರ ಬದುಕಿಗೆ ಆಸರೆ ಆಗಿರುವ ಹೈನುಗಾರಿಕೆ ನಾಶವಾದರೆ ಬಡವರು ಬೀದಿಗೆ ಬೀಳುವರು. ರೈತರು ಹೆಚ್ಚಾಗಿ ಬೆಳೆಯುವ ಜೋಳವು ಸಹ ಮುಂದಿನ ದಿನಗಳಲ್ಲಿ ನಾಶವಾಗಲಿದೆ. ಕೇಂದ್ರ ಸರ್ಕಾರವು ಅಮೆರಿಕದೊಂದಿನ ನಡೆಸಿರುವ ವಾಣಿಜ್ಯ ಒಪ್ಪಂದವನ್ನು ವಿರೋಧಿಸಿ ಮೇ ನಲ್ಲಿ ಚಳವಳಿ ಸಂಘಟಿಸಲಾಗುವುದು ಎಂದರು.

ಜಿಲ್ಲೆಯ ಜನರಿಗೆ ಶುದ್ಧ ಕುಡಿಯುವ ನೀರು ಒದಗಿಸಬೇಕು. ಶಾಶ್ವತ ನೀರಾವರಿಗಾಗಿ ಕೃಷ್ಣಾ ನದಿ ನೀರನ್ನು ಜಿಲ್ಲೆಗೆ ಹರಿಸಬೇಕು. ಜಿಲ್ಲೆಯಲ್ಲಿರುವ ನೈಸರ್ಗಿಕ ಸಂಪತ್ತನ್ನು ಉಳಿಸಬೇಕು. ಕೊಳಚೆ ನೀರನ್ನು ಹರಿಸುವ ಮೂಲಕ ಜಿಲ್ಲೆಯ ಬಡವರನ್ನು ಅನಾರೋಗ್ಯಕ್ಕೆ ತಳ್ಳಲಾಗುತ್ತಿದೆ. ಗ್ರಾಮೀಣ ಭಾಗಕ್ಕೆ ಸಮರ್ಪಕ ಸಾರಿಗೆ ವ್ಯವಸ್ಥೆಯೂ ಇಲ್ಲ ಎಂದರು.

ಜಿಲ್ಲೆಯಲ್ಲಿ ಕನಿಷ್ಠ 5 ಲಕ್ಷಕ್ಕೂ ಹೆಚ್ಚು ಕೃಷಿ ಮತ್ತು ಗ್ರಾಮೀಣ ಕಾರ್ಮಿಕರು ಇದ್ದಾರೆ. ಹಲವು ಸಮಸ್ಯೆಗಳ ನಡುವೆಯೇ ಜೀವನ ನಡೆಸುತ್ತಿದ್ದಾರೆ. ಸರ್ಕಾರಗಳು ಈ ದುಡಿಯುವ ವರ್ಗವನ್ನು ಸಂಪೂರ್ಣವಾಗಿ ನಿರ್ಲಕ್ಷಿಸಿವೆ ಎಂದು ದೂರಿದರು.

ಜಿಲ್ಲೆಯಲ್ಲಿ ವರ್ಷದಿಂದ ವರ್ಷಕ್ಕೆ ಬಡತನ ಹೆಚ್ಚಾಗುತ್ತಿದೆ. ಭೂಮಿ ಇಲ್ಲದವರ ಸಂಖ್ಯೆ ಬೆಳೆಯುತ್ತಿದೆ. ಸಾವಿರಾರು ಎಕರೆ ಕೃಷಿ ಭೂಮಿಯನ್ನು ಸರ್ಕಾರ ಭೂಸ್ವಾಧೀನಕ್ಕೆ ಪಡೆದು ಕೈಗಾರಿಕೆಗಳನ್ನು ಸ್ಥಾಪಿಸಲು ಮುಂದಾಗಿದೆ. ಆದರೆ ಜಿಲ್ಲೆಯಲ್ಲಿ ಕೈಗಾರಿಕರೀಕರಣ ಮಂದಗತಿಯಲ್ಲಿ ಸಾಗುತ್ತಿದೆ. ಯುವಜನರು ಉದ್ಯೋಗವನ್ನು ಆರಿಸಿ ನಗರ ಪ್ರದೇಶಗಳಿಗೆ ವಲಸೆ ಹೋಗುತ್ತಿದ್ದಾರೆ ಎಂದರು.

ರಾಜಕುಮಾರ್, ಲಕ್ಷ್ಮಿನರಸಮ್ಮ, ಸೋಮಶೇಖರ್ ಗೋಷ್ಠಿಯಲ್ಲಿ ಪಾಲ್ಗೊಂಡಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260417-16-1066580310

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.