ಚಿಕ್ಕಬಳ್ಳಾಪುರ: ನಿವೃತ್ತಿಯವರೆಗೆ ಸೇವಾ ಭದ್ರತೆ ನೀಡುವುದು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ರಾಜ್ಯ ಹಾಸ್ಟೆಲ್ ಮತ್ತು ವಸತಿಶಾಲೆ ಹೊರಗುತ್ತಿಗೆ ನೌಕರರ ಸಂಘದ ಸದಸ್ಯರು ಇಲ್ಲಿನ ಜಿಲ್ಲಾಧಿಕಾರಿ ಕಚೇರಿ ಎದುರು ಮಂಗಳವಾರ ಪ್ರತಿಭಟಿಸಿದರು.

ಕೂಡಲೇ ಕನಿಷ್ಠ ವೇತನ ನೀಡಬೇಕು, ಕಾರ್ಮಿಕರಿಗೆ ಕಡ್ಡಾಯವಾಗಿ ವಾರದ ರಜೆ ನೀಡಬೇಕು. ಕೆಲಸದ ಸಮಯ ನಿಗದಿಗೊಳಿಸಬೇಕು. ಸಂಬಳ ಚೀಟಿ, ನೇಮಕಾತಿ ಆದೇಶ ಪತ್ರ, ಐಡಿ ಕಾರ್ಡ್,ಇಎಸ್ಐ, ಪಿಎಸ್ ಸೌಲಭ್ಯನೀಡಬೇಕು. ಗುಣಮಟ್ಟದ ಆಹಾರ ಪದಾರ್ಥಗಳನ್ನು ನೀಡಬೇಕು. ಏಪ್ರಿಲ್, ಮೇನಲ್ಲಿ ಹಾಸ್ಟೆಲ್ ನೌಕರರಿಗೆ ರಜೆಸಹಿತ ವೇತನ ನೀಡಬೇಕು. ಪ್ರತಿ ತಿಂಗಳ 5ರೊಳಗೆ ವೇತನನೀಡಬೇಕು.

10 ವರ್ಷ ಕೆಲಸ ಮಾಡಿದ ಸಿಬ್ಬಂದಿಯನ್ನು ದಿನಗೂಲಿ ನೌಕರರ ಕ್ಷೇಮಾಭಿವೃದ್ಧಿ ಅಧಿನಿಯಮದ ಅಡಿ ತರಬೇಕು. ನಿವೃತ್ತಿ ನಂತರ ಜೀವನ ನಿರ್ವಹಣೆಗೆ ₹10 ಲಕ್ಷ ನೀಡಬೇಕು. ಮಕ್ಕಳ ಸಂಖ್ಯೆಗೆ ಅನುಗುಣವಾಗಿ ಸಿಬ್ಬಂದಿ ಹೆಚ್ಚಿಸಬೇಕು ಎಂದು ಪ್ರತಿಭಟನಕಾರರು ಆಗ್ರಹಿಸಿದರು.

ಉಪವಿಭಾಗಾಧಿಕಾರಿ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಿದರು. ಸಂಘದ ಜಿಲ್ಲಾ ಉಪಾಧ್ಯಕ್ಷ ಮುನಿಯಪ್ಪ, ಬಿ.ಎನ್.ಮುನಿಕೃಷ್ಣಪ್ಪ, ನಾಗರತ್ನಮ್ಮ, ಲಕ್ಷ್ಮಯ್ಯ, ರಾಮಣ್ಣ, ಭಾಗ್ಯಮ್ಮ ಮತ್ತಿತರರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260422-16-1449109754

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.