ಚಿಕ್ಕಬಳ್ಳಾಪುರ: ಕಂದಾಯ ಗ್ರಾಮ ಅಭಿಯಾನ ಹಾಗೂ ವಿವಿಧ ಆಶ್ರಯ ಯೋಜನೆಗಳಡಿ ಜಿಲ್ಲೆಯ ನಿವೇಶನ ರಹಿತರಿಗೆ ಹಕ್ಕುಪತ್ರಗಳನ್ನು ವಿತರಿಸುವಾಗ ಇ-ಸ್ವತ್ತಿನ ಜೊತೆಗೆ ನೀಡಬೇಕು ಎಂದು ಜಿಲ್ಲಾಧಿಕಾರಿ ಜಿ.ಪ್ರಭು ಅಧಿಕಾರಿಗಳಿಗೆ ಸೂಚಿಸಿದರು.

ಇಲ್ಲಿನ ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ಮಂಗಳವಾರ ನಡೆದ ‘ನಿವೇಶನ ರಹಿತರಿಗೆ ನಿವೇಶನ ಹಂಚಿಕೆ ಹಾಗೂ ಜನಗಣತಿ’ ಕುರಿತು ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದರು.

ಗ್ರಾಮೀಣ ಮತ್ತು ನಗರ ಪ್ರದೇಶದ ವ್ಯಾಪ್ತಿಯಲ್ಲಿ ವಸತಿ, ನಿವೇಶನ ಯೋಜನೆಗಳಡಿ ಜಿಲ್ಲೆಯಲ್ಲಿ 308.47 ಎಕರೆ ಜಮೀನು ಲಭ್ಯವಿದೆ. 8,939 ನಿವೇಶನಗಳನ್ನು ಹಂಚಿಕೆ ಮಾಡಬಹುದು. ಆದ್ದರಿಂದ ಮಂಜೂರಾಗಿರುವ ಜಮೀನುಗಳನ್ನು ಮೇ 15 ರೊಳಗೆ ಬಡಾವಣೆಗಳನ್ನು ನಿರ್ಮಿಸಿ ಅಭಿವೃದ್ಧಿಪಡಿಸಬೇಕು ಎಂದು ತಿಳಿಸಿದರು.

ಆಶ್ರಯ ಯೋಜನೆಗಳಿಗೆ ಫಲಾನುಭವಿಗಳನ್ನು ಗ್ರಾಮಸಭೆಗಳ ಮೂಲಕ ನಿಯಮಾವಳಿ ರೀತಿ ಸಮರ್ಪಕವಾಗಿಯೇ ಆಯ್ಕೆ ಮಾಡಬೇಕು. ಈ ಬಗ್ಗೆ ಈಗಾಗಲೇ ಸೂಚನೆ ನೀಡಲಾಗಿದೆ. ಮಂಜೂರಾತಿ ಆಗಿರುವ ಜಮೀನಿನಲ್ಲಿ ನಿವೇಶನಗಳು ಅರ್ಹ ಫಲಾನುಭವಿಗಳಿಗೆ ಸಿಗುವಂತೆ ಮಾಡಲು ಸಂಬಂಧಪಟ್ಟ ಅಧಿಕಾರಿಗಳು ತ್ವರಿತ ಕ್ರಮಕೈಗೊಳ್ಳಬೇಕು ಎಂದರು.

ಗ್ರಾಮಸಭೆಗಳು ಜಿಲ್ಲೆಯಲ್ಲಿ ಇನ್ನು ಮುಂದೆ ಕಟ್ಟುನಿಟ್ಟಾಗಿ ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಣಾಧಿಕಾರಿ ಹಾಗೂ ಜಿಲ್ಲಾ ಮಟ್ಟದ ಅಧಿಕಾರಿ ಹಾಜರಾತಿಯಲ್ಲಿ ಸ್ಥಳೀಯ ಜನಪ್ರತಿನಿಧಿಗಳ ಸಮ್ಮುಖದಲ್ಲಿ ನಡೆಯಬೇಕು. ಈ ಬಗ್ಗೆ ಅಧಿಕೃತ ದಾಖಲೆಗಳು, ಛಾಯಾಚಿತ್ರಗಳನ್ನು ಹಾಗೂ ವಿಡಿಯೊ ಮಾಡಿಸಿಡಬೇಕು. ಯಾವುದೇ ಒತ್ತಡ, ಶಿಫಾರಸ್ಸುಗಳಿಗೆ ಮಣಿಯಬಾರದು ಎಂದು ಹೇಳಿದರು.

ಆಶ್ರಯ ವಸತಿ ಯೋಜನೆಗಳಿಗೆ ಫಲಾನುಭವಿಗಳನ್ನು ಆಯ್ಕೆ ಮಾಡುವಾಗ ಈಗಾಗಲೇ 2018ರಲ್ಲಿ ಸಮೀಕ್ಷೆ ಮಾಡಿ ಅರ್ಜಿ ಸ್ವೀಕರಿಸಿರುವ ಪಟ್ಟಿಯಲ್ಲಿನ ಅರ್ಹ ಫಲಾನುಭವಿಗಳಿಗೆ ಆದ್ಯತೆ ನೀಡಬೇಕು. ಮೊದಲು ಅರ್ಜಿ ಹಾಕಿದವರಿಗೆ ಪ್ರಥಮ ಆದ್ಯತೆ ನೀಡಬೇಕು ಎಂದರು.

ಸರ್ಕಾರದ ಆದೇಶ ಹಾಗೂ ಸುತ್ತೋಲೆಗಳಲ್ಲಿ ಏನೆಲ್ಲ ಮಾನದಂಡಗಳಿವೆಯೋ ಅವುಗಳನ್ನು ಪಾಲಿಸಿದರೆ ಯಾವುದೇ ಸಮಸ್ಯೆಗಳು ಎದುರಾಗುವುದಿಲ್ಲ. ಒಂದು ವೇಳೆ ಅರ್ಹರಲ್ಲದ ಒಬ್ಬ ಫಲಾನುಭವಿಗೆ ನಿವೇಶನ ವಿತರಣೆ ಆದರೂ ಇಡೀ ಆಡಳಿತ ವ್ಯವಸ್ಥೆಯ ಮೇಲೆ ಅತಿಕೆಟ್ಟ ಪರಿಣಾಮ ಬೀರುತ್ತದೆ. ಆ ರೀತಿಯ ಲೋಪಗಳಿಗೆ ಅವಕಾಶ ನೀಡಿದರೆ ಸಹಿಸುವುದಿಲ್ಲ. ಈ ಬಗ್ಗೆ ನಿಗಾ ವಹಿಸಲು ಜಿಲ್ಲಾ ಮಟ್ಟದ ಅಧಿಕಾರಿಗಳನ್ನು ಗ್ರಾಮ ಪಂಚಾಯಿತಿವಾರು ನಿಯೋಜಿಸಲಾಗಿದೆ ಎಂದು ತಿಳಿಸಿದರು.

ಜನಗಣತಿ ಸಂವಿಧಾನದತ್ತ ಕಾರ್ಯ: ಜನಗಣತಿ ಕಾರ್ಯಕ್ಕೆ ನಿಯೋಜನೆ ಆಗಿರುವ ಅಧಿಕಾರಿಗಳು ಮತ್ತು ಸಿಬ್ಬಂದಿಗೆ ಜನಗಣತಿಯ ಅವಧಿಯಲ್ಲಿ ರಜೆಯ ಅವಕಾಶವೇ ಇರುವುದಿಲ್ಲ. ಜನಗಣತಿಯು ಸಂವಿಧಾನದತ್ತವಾದ ಕಾರ್ಯವಾಗಿದೆ. ಇದರ ಮಹತ್ವ ಅರಿತು ನಿಯೋಜಿತರೆಲ್ಲರೂ ಕರ್ತವ್ಯ ನಿರ್ವಹಿಸಬೇಕು ಎಂದು ಸಲಹೆ ನೀಡಿದರು.

ತಮಗೆ ನಿಯೋಜನೆ ಆಗಿರುವ ಕೆಲಸವನ್ನು ಕಾಲಮಿತಿಯಲ್ಲಿ ಪರಿಣಾಮಕಾರಿಯಾಗಿ ಹಾಗೂ ಸಮರ್ಪಕವಾಗಿ ಪೂರ್ಣಗೊಳಿಸಬೇಕು. ಇಲ್ಲವಾದಲ್ಲಿ ಮುಲಾಜಿಲ್ಲದೆ ಶಿಸ್ತುಕ್ರಮಕ್ಕೆ ಶಿಫಾರಸು ಮಾಡಲಾಗು ವುದು. ಚಿಂತಾಮಣಿ ನಗರ ವ್ಯಾಪ್ತಿಯಲ್ಲಿ ಜನಗಣತಿ ಕಾರ್ಯ ಕುಂಠಿತವಾಗಿದೆ. ಜಿಲ್ಲೆಯ ಯಾವ ಬ್ಲಾಕ್ ಗಳಲ್ಲಿ ಜನಗಣತಿ ಕಾರ್ಯ ಕುಂಠಿ ವಾಗಿದೆ, ಆ ಬಗ್ಗೆ ಸಮಗ್ರ ಮಾಹಿತಿ ಪಡೆದು ಪರಿಶೀಲಿಸಿ ಸಂಬಂಧಪಟ್ಟವರ ಮೇಲೆ ಕಾನೂನು ಕ್ರಮಕ್ಕೆ ವರದಿ ಮಾಡುವಂತೆ ಉಪವಿಭಾಗಾಧಿಕಾರಿಗೆ ಸೂಚಿಸಿದರು.

ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ವೈ.ನವೀನ್ ಭಟ್, ಉಪವಿಭಾಗಾಧಿಕಾರಿ ಡಿ.ಎಚ್.ಅಶ್ವಿನ್, ನಗರಾಭಿವೃದ್ಧಿ ಕೋಶದ ನಿರ್ದೇಶಕ ಮಂಜುನಾಥ್, ತಹಶೀಲ್ದಾರರು, ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿಗಳು, ಪೌರಾಯುಕ್ತರು ಸಭೆಯಲ್ಲಿ ಪಾಲ್ಗೊಂಡಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260423-16-1781738765

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.