ಚಿಕ್ಕಬಳ್ಳಾಪುರ: ಅನಧಿಕೃತ ಕ್ಲಿನಿಕ್ಗಳ ಮೇಲೆ ಆರೋಗ್ಯ ಇಲಾಖೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

ಜಿಲ್ಲೆಯಾದ್ಯಂತ 15ಕ್ಕೂ ಅಧಿಕ ನಕಲಿ ವೈದ್ಯರನ್ನು ಗುರುತಿಸಲಾಗಿದೆ. ನಕಲಿ ವೈದ್ಯರು ಸಾರ್ವಜನಿಕರ ಆರೋಗ್ಯದೊಂದಿಗೆ ಚೆಲ್ಲಾಟವಾಡುತ್ತಿರುವುದು ಆರೋಗ್ಯ ಇಲಾಖೆಯ ಗಮನಕ್ಕೆ ಬಂದಿದೆ. ಈ ಹಿನ್ನೆಲೆಯಲ್ಲಿ ಇಲಾಖೆಯ ಅಧಿಕಾರಿಗಳು ಕಾರ್ಯಪ್ರವೃತ್ತರಾಗಿ ಖಚಿತ ಮಾಹಿತಿಯ ಮೇರೆಗೆ ಅನಿರೀಕ್ಷಿತ ದಾಳಿ ಕೈಗೊಂಡು ಚಿಂತಾಮಣಿ ಮತ್ತು ಶಿಡ್ಲಘಟ್ಟ ತಾಲ್ಲೂಕು ಮಟ್ಟದಲ್ಲಿ 4 ನಕಲಿ ಕ್ಲಿನಿಕ್ಗಳನ್ನು ಸೀಜ್ ಮಾಡಿದ್ದಾರೆ.

ಸೂಕ್ತ ವೈದ್ಯ ವಿದ್ಯಾರ್ಹತೆ ಹೊಂದಿಲ್ಲದಿದ್ದರೂ ಚಿಂತಾಮಣಿ ತಾಲ್ಲೂಕಿನ ಕೈವಾರ ಕ್ರಾಸ್ನಲ್ಲಿ ಸಂಜೀವಿನಿ ಕ್ಲಿನಿಕ್ ಎಂಬ ಹೆಸರಿನಲ್ಲಿ ಅನಧಿಕೃತವಾಗಿ ಕ್ಲಿನಿಕ್ ನಡೆಸುತ್ತಿದ್ದ ವ್ಯಕ್ತಿಗೆ ₹ 25,000 ದಂಡ, ಕೆಂಚಾರ್ಲಾಹಳ್ಳಿ ಗ್ರಾಮದಲ್ಲಿ ಎಸ್.ಆರ್.ಎನ್ ಕ್ಲಿನಿಕ್ ಹೆಸರಿನಲ್ಲಿ ಅನಧಿಕೃತವಾಗಿ ಕ್ಲಿನಿಕ್ ನಡೆಸುತ್ತಿದ್ದ ಮಹಿಳೆಗೆ ₹ 50,000 ದಂಡ ವಿಧಿಸಲಾಗಿದೆ.

ಚಿಂತಾಮಣಿ ತಾಲ್ಲೂಕಿನ ಚಿಲಕಲ ನೇರ್ಪು ಹೋಬಳಿ, ಕೊರ್ಲಪರ್ತಿ ಗ್ರಾಮದಲ್ಲಿ ಅನಧಿಕೃತವಾಗಿ ಸಾರ್ವಜನಿಕರಿಗೆ ಚಿಕಿತ್ಸೆ ನೀಡುತ್ತಿದ್ದ ಶ್ರೀರಾಮರೆಡ್ಡಿಗೆ ₹75,000 ಮತ್ತು ಶಿಡ್ಲಘಟ್ಟ ತಾಲ್ಲೂಕಿನ ಚೊಕ್ಕನಹಳ್ಳಿ ಗ್ರಾಮದಲ್ಲಿ ಅನಧಿಕೃತವಾಗಿ ಸಾರ್ವಜನಿಕರಿಗೆ ಚಿಕಿತ್ಸೆ ನೀಡುತ್ತಿದ್ದ ಮಹಿಳೆಗೆ ₹15,000 ದಂಡ ವಿಧಿಸಿ ಕಾನೂನು ಕ್ರಮಕ್ಕೆ ಒಳಪಡಿಸಲಾಗಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಮಹೇಶ್ ಕುಮಾರ್ ತಿಳಿಸಿದ್ದಾರೆ.

ಜಿಲ್ಲೆಯಲ್ಲಿನ ಎಲ್ಲಾ ಖಾಸಗಿ ಆರೋಗ್ಯ ಸಂಸ್ಥೆಗಳು ಕೆಪಿಎಂಇ ಅಧಿನಿಯಮದಡಿ ನೋಂದಣಿಯಾಗಿ ಕಾರ್ಯನಿರ್ವಹಿಸಬೇಕಾಗಿರುವುದು ಕಡ್ಡಾಯವಾಗಿದೆ. ಪ್ರಸ್ತುತ ಜಿಲ್ಲೆಯಲ್ಲಿ ಅಲೋಪಥಿಕ್ 314, ಆಯುರ್ವೇದ 18, ಹೋಮಿಯೋಪಥಿ 8, ಯುನಾನಿ 5, ಯೋಗ ಮತ್ತು ನ್ಯಾಚುರೋಪಥಿ 1 ಒಳಗೊಂಡಂತೆ ಒಟ್ಟು 347 ಆರೋಗ್ಯ ಸಂಸ್ಥೆಗಳು ನೋಂದಣಿಗೊಂಡು ಕಾರ್ಯನಿರ್ವಹಿಸುತ್ತಿವೆ ಎಂದಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260515-16-1872488529

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.