ಚಿಕ್ಕಬಳ್ಳಾಪುರ: ನಗರ ಹೊರವಲಯದ ಅಗಲಗುರ್ಕಿ ಕೈಗಾರಿಕಾ ಪ್ರದೇಶದ ಟೈಟಾನ್ ಕಂಪನಿಯ ಎಸ್ಟಿಪಿ ಘಟಕದಲ್ಲಿ ಸ್ವಚ್ಛತಾ ಕಾರ್ಯ ನಡೆಸುವಾಗ ಉಸಿರುಗಟ್ಟಿ ಮೂವರು ಕಾರ್ಮಿಕರು ಭಾನುವಾರ ಅಸ್ವಸ್ಥರಾಗಿದ್ದಾರೆ.

ಚಿಕ್ಕಬಳ್ಳಾಪುರ ತಾಲ್ಲೂಕಿನ ಕವರನಹಳ್ಳಿಯ ಜಯಪ್ರಕಾಶ್, ಶಿಡ್ಲಘಟ್ಟದ ಮದನ್ ಮತ್ತು ಗುಡಿಬಂಡೆಯ ನವೀನ್ ಅಸ್ವಸ್ಥ ಕಾರ್ಮಿಕರು. ಇವರು ಈ ಹಿಂದಿನಿಂದಲೂ ಈ ಘಟಕದ ಸ್ವಚ್ಛತಾ ಕಾರ್ಯ ನಿರ್ವಹಿಸುತ್ತಿದ್ದರು.

ಭಾನುವಾರ ಸ್ವಚ್ಛತೆಗೆ ಮುಂದಾಗಿದ್ದು, ಘಟಕದೊಳಗೆ ಇಳಿದಿದ್ದಾರೆ. ಈ ವೇಳೆ ಆಮ್ಲಜನಕದ ಕೊರತೆ ಉಂಟಾಗಿದೆ. ಉಸಿರಾಟದ ಸಮಸ್ಯೆಗೆ ಸಿಲುಕಿದ್ದಾರೆ. ತಕ್ಷಣವೇ ಅವರನ್ನು ಘಟಕದಿಂದ ಮೇಲೆತ್ತಲಾಯಿತು.

ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ಚಿಕಿತ್ಸೆಗೆ ದಾಖಲಿಸಲಾಗಿದೆ. ಎಲ್ಲರೂ ಸುರಕ್ಷಿತವಾಗಿದ್ದಾರೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ. ನಂದಿ ಗಿರಿಧಾಮ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260421-16-1770237196

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.