ಚಿಕ್ಕಬಳ್ಳಾಪುರ: ನಗರದಲ್ಲಿ ಶನಿವಾರ ರಾತ್ರಿ 9ರ ಸುಮಾರಿನಲ್ಲಿ ಆರಂಭಗೊಂಡ ಜಾಲಾರಿ ಗಂಗಮಾಂಭ ದೇವಾಲಯದ 64ನೇ ವರ್ಷದ ಧರ್ಮರಾಯ ಹೂವಿನ ಕರಗವು ಭಾನುವಾರವೂ ನಗರದ ವಿವಿಧ ಬಡಾವಣೆಗಳಲ್ಲಿ ಸಾಗಿತು.

ದೇವಾಲಯದ ಬಳಿ ಅಪಾರಸಂಖ್ಯೆಯ ಭಕ್ತರು ನೆರೆದಿದ್ದರು. ಯಕ್ಷಗಾನ ಸೇರಿದಂತೆ ವಿವಿಧ ಕಲಾ ತಂಡಗಳು ಕಲಾ ಪ್ರದರ್ಶನ ನೀಡಿದವು.

ಶನಿವಾರ ರಾತ್ರಿ ಕರಗಕ್ಕೆ ಚಾಲನೆ ನೀಡಲಾಯಿತು. ರಾತ್ರಿ ಶ್ರದ್ಧಾಭಕ್ತಿ, ಸಂಭ್ರಮದಿಂದ ಆರಂಭವಾದ ಕರಗ ಭಾನುವಾರ ಸಂಜೆಯವರೆಗೂ ನಗರದಲ್ಲಿ ಪ್ರದಕ್ಷಿಣೆ ಹಾಕಿತು.

ದ್ರೌಪದಿಯಂತೆ ಸರ್ವಾಲಂಕಾರ ಭೂಷಿತರಾಗಿದ್ದ ಕರಗದ ಪೂಜಾರಿ ಮೇಲೂರಿನ ಕೆ.ಧರ್ಮೇಂದ್ರ ಅವರು ಹೂವಿನ ಕರಗ ಹೊತ್ತು ಒಂದು ಕೈಯಲ್ಲಿ ಕತ್ತಿ ಮತ್ತೊಂದು ಕೈಯಲ್ಲಿ ಮಂತ್ರದಂಡ ಹಿಡಿದು ಜಾಲಾರಿ ಗಂಗಮಾಂಭ ದೇಗುಲದಿಂದ ಹೊರ ಬಂದಾಗ ಸಂಭ್ರಮ ಮುಗಿಲು ಮುಟ್ಟಿತ್ತು. ದೇಗುಲದ ಬಳಿಯ ವೇದಿಕೆಯ ಮೇಲೆ ಕೆಲವು ಕಾಲ ಕರಗದ ಪೂಜಾರಿ ನಡೆಸಿದ ನೃತ್ಯ ಎಲ್ಲರ ಗಮನ ಸೆಳೆಯಿತು.

ಕರಗದ ಪೂಜಾರಿಯ ಕುಣಿತಕ್ಕೆ ನೆರೆದಿದ್ದ ಭಕ್ತರು ಚಪ್ಪಾಳೆ ತಟ್ಟಿ ಪ್ರೋತ್ಸಾಹಿಸಿದರು. ಸೆಲ್ಪೀ ಹಿಡಿದು ಸಂಭ್ರಮಿಸಿದರು. ಪೂಜಾರಿಯ ಹಿಂದೆ ಖಡ್ಗ ಹಿಡಿದಿದ್ದ ವೀರಕುಮಾರರು ‘ಗೋವಿಂದಾ. ಗೋವಿಂದಾ..’ ಎಂದು ನಾಮಸ್ಮರಣೆ ಮಾಡುತ್ತ ಅವರ ಹಿಂದೆ ಹೆಜ್ಜೆ ಹಾಕಿದರು.

ಮಲ್ಲಿಗೆ, ಕನಕಾಂಬರ ಹೂವುಗಳು, ಮೇಲ್ತುದಿಯಲ್ಲಿ ಬೆಳ್ಳಿ ಛತ್ರಿಯಿಂದ ಆಕರ್ಷಕವಾಗಿ ಕಂಗೊಳಿಸುತ್ತಿದ್ದ ‘ಕರಗ’ ಸಾಗಿದ ದಾರಿಯುದ್ದಕ್ಕೂ ಮಲ್ಲಿಗೆಯ ಪರಿಮಳ ಸೂಸುತ್ತಿತ್ತು. ನಗರದ ವಿವಿಧೆಡೆ ಭಕ್ತರು ಕರಗಧಾರಿಗಳ ಸ್ವಾಗತಕ್ಕೆ ಮನೆಗಳ ಮುಂದೆ ರಂಗೋಲಿ ಬಿಡಿಸಿ, ತಳಿರು ತೋರಣಗಳಿಂದ ಅಲಂಕಾರ ಮಾಡಿದ್ದರು. ಶನಿವಾರ ರಾತ್ರಿ ಯಾವ ರೀತಿ ಕಂಪಿನಿಂದ ಕರಗವು ಆರಂಭವಾಯಿತೊ ಭಾನುವಾರ ಸಮಾಪ್ತಿಗೊಳ್ಳುವವರೆಗೂ ಆ ಕರಗದ ಕಂಪು ಕರಗಲಿಲ್ಲ.

ಚಿಕ್ಕಬಳ್ಳಾಪುರದ ಬಿಬಿ ರಸ್ತೆ, ಎಂ.ಜಿ ರಸ್ತೆ ಸೇರಿದಂತೆ ವಿವಿಧ ನಗರದ ಪ್ರಮುಖ ಬಡಾವಣೆಗಳಲ್ಲಿ ಕರಗದ ಹಿನ್ನೆಲೆಯಲ್ಲಿ ವಿದ್ಯುತ್ ದೀಪಾಲಂಕಾರ ಮಾಡಲಾಗಿತ್ತು. ಬಿಬಿ ರಸ್ತೆ ಸೇರಿದಂತೆ ವಿವಿಧ ಕಡೆಗಳಲ್ಲಿ ರಸಮಂಜರಿ ಕಾರ್ಯಕ್ರಮಗಳು ನಡೆದವು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260412-16-1407381785

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.