ಚಿಕ್ಕಬಳ್ಳಾಪುರ: ವಿಶ್ವ ಪರಿಸರ ದಿನಾಚರಣೆಯ ಅಂಗವಾಗಿ ‘ನಮ್ಮ ಗುಡಿಗಳು ನಮ್ಮ ಹೆಮ್ಮೆ’ ಅಭಿಯಾನದಡಿ, ಈಶಾ ಫೌಂಡೇಶನ್ ಸಹಯೋಗದೊಂದಿಗೆ ಹಸಿರು ಸ್ವಯಂ ಸೇವಾ ಸಂಸ್ಥೆಯು ತಾಲ್ಲೂಕಿನ ಜಾಲಾರಿ ನರಸಿಂಹಸ್ವಾಮಿ ದೇವಾಲಯ ಆವರಣ ಹಾಗೂ ಬೆಟ್ಟ ಪ್ರದೇಶದಲ್ಲಿ ಭಾನುವಾರ ಸ್ವಚ್ಛತಾ ಕಾರ್ಯಕ್ರಮ ನಡೆಸಿತು.

ದೇವಾಲಯದ ಸುತ್ತಮುತ್ತ ಹಾಗೂ ಬೆಟ್ಟ ಪ್ರದೇಶದಲ್ಲಿನ ಪ್ಲಾಸ್ಟಿಕ್ ಮತ್ತು ಇತರೆ ಕಸವನ್ನು ತೆರವುಗೊಳಿಸಲಾಯಿತು. ಈಶಾ ಹಾಗೂ ಹಸಿರು ಸ್ವಯಂ ಸೇವಾ ಸಂಸ್ಥೆಯ ಯುವಕರು ಉತ್ಸಾಹದಿಂದ ಪಾಲ್ಗೊಂಡು ಪರಿಸರ ಜಾಗೃತಿ ಮೂಡಿಸಿದರು.

50ಕ್ಕೂ ಹೆಚ್ಚು ಚೀಲಗಳಷ್ಟು ಪ್ಲಾಸ್ಟಿಕ್ ತ್ಯಾಜ್ಯ ಸಂಗ್ರಹಿಸಲಾಯಿತು. ಹಸಿರು ಸಂಸ್ಥೆಯ ಪದಾಧಿಕಾರಿಗಳು, ಧಾರ್ಮಿಕ ಮತ್ತು ಪ್ರವಾಸಿ ತಾಣಗಳನ್ನು ಸ್ವಚ್ಛವಾಗಿಡುವುದು ನಮ್ಮೆಲ್ಲರ ಕರ್ತವ್ಯ. ಸಾರ್ವಜನಿಕರು ಪ್ಲಾಸ್ಟಿಕ್ ಬಳಕೆ ಕಡಿಮೆ ಮಾಡಿ ಪರಿಸರ ಸ್ನೇಹಿ ಜೀವನಶೈಲಿ ಅಳವಡಿಸಿಕೊಳ್ಳಬೇಕು ಎಂದು ಮನವಿ ಮಾಡಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260602-16-1254350505

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.