ಚಿಕ್ಕಬಳ್ಳಾಪುರ: ಜಿಲ್ಲೆಯ ಶಿಡ್ಲಘಟ್ಟ ತಾಲೂಕಿನ ಜಂಗಮಕೋಟೆ ಹೋಬಳಿಯ 13 ಹಳ್ಳಿಗಳ ರೈತರು ಕೆಐಎಡಿಬಿ ಭೂ ಸ್ವಾಧೀನದ ವಿರುದ್ಧ ಜಿಲ್ಲಾಡಳಿತ ಭವನದ ಎದುರು ಹಮ್ಮಿಕೊಂಡಿರುವ ಅನಿರ್ದಿಷ್ಟಾವಧಿ ಧರಣಿ ಭಾನುವಾರ 64 ದಿನ ಪೂರ್ಣಗೊಳಿಸಿದೆ.

ಕೈಗಾರಿಕೆಗಳಿಗೆ ಕೃಷಿ ಭೂಮಿ ಸ್ವಾಧೀನ ಕೈ ಬಿಡುವರೆಗೂ ಹೋರಾಟ ಕೈ ಬಿಡುವುದಿಲ್ಲ ಎಂದು ಪಟ್ಟು ಹಿಡಿದಿರುವ ರೈತರು ಆದಿಚುಂಚನಗಿರಿ ಮಠದ ನಿರ್ಮಲಾನಂದನಾಥ ಸ್ವಾಮೀಜಿ ಅವರನ್ನು ಭೇಟಿ ಮಾಡಿ ಬೆಂಬಲ ಕೋರಿದ್ದಾರೆ.

ನಗರದ ಹೊರ ವಲಯದ ವೀರಾಂಜನೇಯಸ್ವಾಮಿ ದೇವಾಲಯದಲ್ಲಿ ಹಮ್ಮಿಕೊಂಡಿದ್ದ ವಿಶೇಷ ಪೂಜೆಯಲ್ಲಿ ಭಾಗವಹಿಸಿದ್ದ ನಿರ್ಮಲಾನಂದನಾಥ ಸ್ವಾಮೀಜಿ ಅವರನ್ನು ಭೂಮಿ ಕಳೆದುಕೊಳ್ಳುವ ರೈತ ಕುಟುಂಬಗಳು ಭೇಟಿ ಮಾಡಿದವು.

‘ಕುಟುಂಬಗಳಿಗೆ ಭೂಮಿಯೊಂದೇ ಆಧಾರ. ಆದ್ದರಿಂದ ನಮ್ಮ ಭೂಮಿ ನಮಗೆ ಉಳಿಸಿಕೊಡಿ’ ಎಂದು ಭಕ್ತರಹಳ್ಳಿ ಬೈರೇಗೌಡ ನೇತೃತ್ವದಲ್ಲಿ ತೆರಳಿದ್ದ ರೈತ ಕುಟುಂಬಗಳು ಮನವಿ ಮಾಡಿದವು.

ಭೂ ಸ್ವಾಧೀನದ ಹಿಂದೆ ಷಡ್ಯಂತ್ರ ಇದೆ. ಬಡ ರೈತರ ಭೂಮಿ ಕಬಳಕೆ ಮಾಡಲಾಗುತ್ತಿದೆ. 800ಕ್ಕೂ ಹೆಚ್ಚು ರೈತರು ಭೂ ಸ್ವಾಧೀನಕ್ಕೆ ಒಪ್ಪದೆ ಇದ್ದರೂ ಸರ್ಕಾರ ಬಲವಂತದಿಂದ ಭೂ ಸ್ವಾಧೀನ ಪ್ರಕ್ರಿಯೆಗಳನ್ನು ಆರಂಭಿಸಿದೆ ಎಂದು ಅಳಲು ತೋಡಿಕೊಂಡರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260518-18-456093002

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.