ಚಿಂತಾಮಣಿ: ಶಿಡ್ಲಘಟ್ಟ ತಾಲ್ಲೂಕಿನ ಜಂಗಮಕೋಟೆ ಕೈಗಾರಿಕಾ ಪ್ರದೇಶ ಸ್ಥಾಪನೆಗೆ ಒತ್ತಾಯಿಸಿ ಕರ್ನಾಟಕ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ ತಾಲ್ಲೂಕು ಘಟಕದ ನಾಯಕತ್ವದಲ್ಲಿ ಚಿಕ್ಕಬಳ್ಳಾಪುರ ಜಿಲ್ಲಾಧಿಕಾರಿ ಕಚೇರಿ ಬಳಿ ನಡೆಯುತ್ತಿರುವ ಪ್ರತಿಭಟನೆಗೆ ಚಿಂತಾಮಣಿ ರೈತರು ಬೆಂಬಲ ವ್ಯಕ್ತಪಡಿಸಿದ್ದಾರೆ.

ರೈತ ಸಂಘದ ತಾಲ್ಲೂಕು ಅಧ್ಯಕ್ಷ ಕದಿರೇಗೌಡ ಮಾತನಾಡಿ, ಸರ್ಕಾರವು ರೈತರ ಬೇಡಿಕೆಯಂತೆ ನೀರಾವರಿ ಪ್ರದೇಶವಾಗಿರುವ 491 ಎಕರೆ ಜಮೀನು ಹೊರತುಪಡಿಸಿ ಕೈಗಾರಿಕಾ ಪ್ರಾಂಗಣ ಸ್ಥಾಪಿಸುತ್ತಿದೆ. ಜಗಮಕೋಟೆ ಬಳಿ ಸಾವಿರಾರು ಎಕರೆ ಜಮೀನಿನಲ್ಲಿ ಕೈಗಾರಿಕೆ ಸ್ಥಾಪನೆ ಮಾಡುವ ಸರ್ಕಾರದ ನಿಲುವಿಗೆ ನಮ್ಮ ಬೆಂಬಲವಿದೆ ಎಂದರು.

ಅಲ್ಲಿ 1,700 ಎಕರೆ ಸರ್ಕಾರಿ ಜಮೀನು ಇದೆ. ಕೆಲ ಬಲಾಢ್ಯರು ರೈತರ ಹೆಸರಿನಲ್ಲಿ ಕೈಗಾರಿಕೆಗಳು ಸ್ಥಾಪನೆಗೆ ವಿರೋಧ ಮಾಡುತ್ತಿದ್ದಾರೆ. ಯಾವುದೇ ನೀರಾವರಿ ಯೋಜನೆಗಳಿಲ್ಲದ, ಸದಾ ಬರಗಾಲಕ್ಕೆ ತುತ್ತಾಗುವ ಜಿಲ್ಲೆಯಲ್ಲಿ ಕೈಗಾರಿಕೆಗಳು ಸ್ಥಾಪನೆಯಾಗಬೇಕು. ಇದರಿಂದ ಯುವಕರಿಗೆ ಉದ್ಯೋಗ ಸಿಗುತ್ತದೆ ಎಂದರು.

ರೈತ ಸಂಘದ ರಾಜ್ಯ ವಲಯ ಸದಸ್ಯ ರಘುನಾಥರೆಡ್ಡಿ ಮಾತನಾಡಿ, ರೈತರ ಮಕ್ಕಳ ಮುಂದಿನ ಭವಿಷ್ಯದ ದೃಷ್ಟಿಯಿಂದ ಕೈಗಾರಿಕಾ ಪ್ರಾಂಗಣ ಸ್ಥಾಪನೆಗೆ ಬೆಂಬಲ ನೀಡಬೇಕು. ಕಂಪನಿಗಳು ಪ್ರಾರಂಭವಾದರೆ ಅಕ್ಕಪಕ್ಕದ ಜಮೀನುಗಳ ರೈತರು, ವ್ಯಾಪಾರಿಗಳು ಬದುಕು ಕಟ್ಟಿಕೊಳ್ಳಬಹುದು ಎಂದರು.

ರೈತ ಸಂಘದ ಪದಾಧಿಕಾರಿಗಳಾದ ಭೀಮಣ್ಣ, ಅಂಜಿನಪ್ಪ, ವೆಂಕಟರವಣಪ್ಪ, ನಾರಾಯಣಸ್ವಾಮಿ, ರಾಮಯ್ಯ, ವೆಂಕಟರಾಮಯ್ಯ, ಡಿ.ಎಂ. ಮುನಿವೆಂಕಟಪ್ಪ, ವೆಂಕಟೇಶಪ್ಪ, ಮುರಳಿ, ಮುನಿಯಪ್ಪ, ಪಟೇಲ್ ನಾರಾಯಣಸ್ವಾಮಿ, ಎಲ್ಲಪ್ಪ ಸೇರಿದಂತೆ ನೂರಾರು ರೈತರು ಭಾಗವಹಿಸಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260327-16-368362184

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.