ಚಿಕ್ಕಬಳ್ಳಾಪುರ: ನಗರದ ಕಂದವಾರ ಬಾಗಿಲ ಸಿವಿವಿ ಸರ್ಕಲ್ ಬಳಿಯ ಕಾಳಿಕಾಂಬ ಕಮಠೇಶ್ವರ ದೇವಾಲಯದ 11ನೇ ವರ್ಷದ ಹೂವಿನ ಕರಗ ಮಹೋತ್ಸವ ಶನಿವಾರ ರಾತ್ರಿಯಿಂದ ಭಾನುವಾರ ಬೆಳಿಗ್ಗೆಯವರೆಗೆ ಅದ್ದೂರಿಯಾಗಿ ನಡೆಯಿತು.

ಕರಗದ ಪ್ರಯುಕ್ತ ನಗರದ ಪ್ರಮುಖ ರಸ್ತೆಗಳಿಗೆ ದೀಪಾಲಂಕಾರ ಮಾಡಲಾಗಿತ್ತು. ದೇವಸ್ಥಾನದಲ್ಲಿ ಶನಿವಾರ ರಾತ್ರಿ ಕರಗದ ಪ್ರಯುಕ್ತ ವಿವಿಧ ಧಾರ್ಮಿಕ ಕೈಂಕರ್ಯಗಳು ಜರುಗಿದವು.

ವಾಪಸಂದ್ರದ ಎಂ.ಅಂಜಿತ್ ಕುಮಾರ್ ಕರಗದ ಪೂಜಾರಿಯಾಗಿದ್ದರು. ಅವರು ಹೂವಿನ ಕರಗ ಹೊತ್ತು ರಾತ್ರಿ 10ರ ಸುಮಾರಿಗೆ ಒಂದು ಕೈಯಲ್ಲಿ ಕತ್ತಿ ಮತ್ತೊಂದು ಕೈಯಲ್ಲಿ ಮಂತ್ರದಂಡ ಹಿಡಿದು ದೇವಾಲಯದ ಗರ್ಭಗುಡಿಯಿಂದ ಹೊರಕ್ಕೆ ಬರುತ್ತಿದ್ದಂತೆ ತಮಟೆ ವಾದನ, ಮಂಗಳ ವಾದ್ಯಗಳು ಮೊಳಗಿದವು.

ಮಲ್ಲಿಗೆ, ಕನಕಾಂಬರ ಹೂವುಗಳಿಂದ ಆಕರ್ಷಕವಾಗಿ ಕಂಗೊಳಿಸುತ್ತಿದ್ದ ‘ಕರಗ’ ಸೂಸುತ್ತಿದ್ದ ಮಲ್ಲಿಗೆಯ ಪರಿಮಳ ಕರಗದ ಮೆರವಣಿಗೆ ಸಾಗಿದ ದಾರಿಯುದ್ದಕ್ಕೂ ಮನೆ ಮಾಡಿತ್ತು. ನಗರದ ವಿವಿಧೆಡೆ ಕರಗಧಾರಿಗಳ ಸ್ವಾಗತಕ್ಕೆ ಮನೆಗಳ ಮುಂದೆ ರಂಗೋಲಿ ಬಿಡಿಸಿ, ತಳಿರು ತೋರಣಗಳಿಂದ ಅಲಂಕಾರ ಮಾಡಲಾಗಿತ್ತು.

ದೇವಾಲಯದ ಬಳಿ ನಿರ್ಮಿಸಿದ್ದ ವೇದಿಕೆಯಲ್ಲಿ ನಡೆದ ಕರಗದ ಪೂಜಾರಿ ನೃತ್ಯವನ್ನು ಅಪಾರ ಭಕ್ತರು ಕಣ್ತುಂಬಿಕೊಂಡರು.

ಕೆ.ವಿ ಮತ್ತು ಪಂಚಗಿರಿ ಶಿಕ್ಷಣ ಸಂಸ್ಥೆ ಅಧ್ಯಕ್ಷ ಕೆ.ವಿ.ನವೀನ್ ಕಿರಣ್ ಹಾಗೂ ಮುಖಂಡರು ಈ ವೇಳೆ ಹಾಜರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260511-16-35101168

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.