ಚಿಕ್ಕಬಳ್ಳಾಪುರ: ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ವೈ.ನವೀನ್ ಭಟ್ ಅವರ ಆಸಕ್ತಿಯ ಫಲವಾಗಿ ನಡೆದ ಕಲ್ಯಾಣಿ ಸ್ವಚ್ಛತಾ ಅಭಿಯಾನ ಪೂರ್ಣವಾಗಿದೆ.

ಮಾ.23ರಂದು ಜಿಲ್ಲೆಯಲ್ಲಿ ಈ ಅಭಿಯಾನ ನಡೆದಿತ್ತು. ಮಳೆಗಾಲ ಪ್ರಾರಂಭಕ್ಕೂ ಮುನ್ನ ಜಿಲ್ಲೆಯಲ್ಲಿರುವ ಎಲ್ಲ ಗ್ರಾಮ ಪಂಚಾಯಿತಿಗಳಲ್ಲಿನ ಪುರಾತನ ಕಲ್ಯಾಣಿಗಳನ್ನು ಗುರುತಿಸಿ ಅವುಗಳನ್ನು ಸ್ವಚ್ಛ ಮಾಡುವ ಸಲುವಾಗಿ ಯೋಜನೆಯನ್ನು ಜಿಲ್ಲಾ ಪಂಚಾಯಿತಿ ರೂಪಿಸಿತ್ತು. ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ ಮೂಲಕ ಜಿಲ್ಲೆಯಲ್ಲಿ 137 ಕಲ್ಯಾಣಿಗಳನ್ನು ಗುರುತಿಸಲಾಗಿತ್ತು.

ನಂತರ ಅವುಗಳನ್ನು ಸ್ವಚ್ಛತೆ ಮಾಡುವ ಉದ್ದೇಶದಿಂದ ಐತಿಹಾಸಿಕ ಕಲ್ಯಾಣಿಗಳ ಸ್ವಚ್ಛತೆ, ಜಲ ಸಂರಕ್ಷಣೆಗೆ ಆದ್ಯತೆಗೆ ವಿಶೇಷ ಆಂದೋಲನವನ್ನು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಿಂದ ನಡೆಸಲಾಗಿತ್ತು.

ಈಗ ಜಿಲ್ಲೆಯಾದ್ಯಂತ 83 ಕಲ್ಯಾಣಿಗಳನ್ನು ವಿಶೇಷ ಆಂದೋಲನ, ಶ್ರಮದಾನದ ಮೂಲಕ ಸ್ವಚ್ಛಗೊಳಿಸಲಾಗಿದೆ. 53 ಕಲ್ಯಾಣಿಗಳನ್ನು ಹಿಂದಿನ ವರ್ಷ ಸ್ವಚ್ಛಗೊಳಿಸಲಾಗಿತ್ತು. ಇಲ್ಲಿಯವರೆಗೆ ಜಿಲ್ಲೆಯಾದ್ಯಂತ 136 ಕಲ್ಯಾಣಿಗಳು ಸ್ವಚ್ಛವಾಗಿವೆ.

ಉಳಿದಂತೆ ಚಿಂತಾಮಣಿ ತಾಲ್ಲೂಕಿನ ಆನೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಒಂದು ಕಲ್ಯಾಣಿಯನ್ನು ಜೂ.9ರಂದು ಸ್ವಚ್ಛಗೊಳಿಸಲು ತೀರ್ಮಾನಿಸಲಾಗಿದೆ.

ಈ ಸ್ವಚ್ಛತಾ ಅಭಿಯಾನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಂ.ಸಿ.ಸುಧಾಕರ್, ಶಾಸಕರು, ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ಅಧಿಕಾರಿಗಳು, ಸಿಬ್ಬಂದಿ ಸಹ ಪಾಲ್ಗೊಂಡಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260601-16-1958732136

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.