ಚಿಕ್ಕಬಳ್ಳಾಪುರ: ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಂ.ಸಿ.ಸುಧಾಕರ್ ಅಧ್ಯಕ್ಷತೆಯಲ್ಲಿ ಏ.29 ರಂದು ಬೆಳಿಗ್ಗೆ 11ಕ್ಕೆ ನಗರದ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ತ್ರೈಮಾಸಿಕ ಕೆಡಿಪಿ ಸಭೆ ಆಯೋಜಿಸಲಾಗಿದೆ ಎಂದು ಜಿಲ್ಲಾ ಪಂಚಾಯಿತಿ ಸಿಇಒ ಡಾ. ವೈ.ನವೀನ್ ಭಟ್ ತಿಳಿಸಿದ್ದಾರೆ.

ಚಿಕ್ಕಬಳ್ಳಾಪುರ: ಚಿಕ್ಕಬಳ್ಳಾಪುರ ರೈಲ್ವೆ ನಿಲ್ದಾಣದ ಟ್ರ್ಯಾಕ್ ಮನ್ ವಿಶ್ರಾಂತಿ ಗೃಹದ ಹಿಂಭಾಗದಲ್ಲಿ ವ್ಯಕ್ತಿಯೊಬ್ಬರು ಸ್ವಾಭಾವಿಕವಾಗಿ ಮೃತಪಟ್ಟಿದ್ದಾರೆ.

45 ವರ್ಷ ವ್ಯಕ್ತಿಯು ಇತ್ತೀಚೆಗೆ ಮೃತಪಟ್ಟಿದ್ದರು. 5ರಿಂದ 6 ಅಡಿ ಎತ್ತರ, ಕೃಷ ಶರೀರ, ಕಪ್ಪು ಮೈಬಣ್ಣ, ಕೋಲು ಮುಖ, ಉದ್ದನೆ ಮೂಗು, ಹುಬ್ಬಲ್ಲು, ಕಪ್ಪು ಕೂದಲು, ಗಡ್ಡ, ಮೀಸೆ ಬಿಟ್ಟಿದ್ದಾರೆ. ಬಿಳಿ ಬಣ್ಣದ ಶರಟು ಮತ್ತು ತಿಳಿ ಹಸಿರು ಬಣ್ಣದ ಹೂ ಡಿಸೈನ್ ಇರುವ ಶರಟು ಧರಿಸಿದ್ದಾರೆ. ಖಾಕಿ ಬಣ್ಣದ ನಿಕ್ಕರ್ ಧರಿಸಿದ್ದಾರೆ. ಮೃತರ ವಾರಸುದಾರರ ಬಗ್ಗೆ ಮಾಹಿತಿ ಲಭ್ಯವಾದಲ್ಲಿ ಬೈಯಪ್ಪನಹಳ್ಳಿ ರೈಲ್ವೆ 08025460851, 9480802119, 08022208908, 08022266260, 08022942483 ಸಂಪರ್ಕಿಸಬಹುದು.

ಚಿಕ್ಕಬಳ್ಳಾಪುರ: ಸಂತಕವಿ ಕನಕದಾಸ ಮತ್ತು ತತ್ವಪದಕಾರರ ಅಧ್ಯಯನ ಕೇಂದ್ರವು ರಾಜ್ಯ ಮಟ್ಟದ ‘ಕನಕ ಕವನ ಸ್ಪರ್ಧೆ’ ಏರ್ಪಡಿಸಲು ಉದ್ದೇಶಿಸಿದೆ. 18 ರಿಂದ 30 ವರ್ಷ ವಯೋಮಿತಿಯುಳ್ಳವರು ಸ್ಪರ್ಧೆಯಲ್ಲಿ ಭಾಗವಹಿಸಬಹುದು. ಸ್ವರಚಿತ ಕವನವನ್ನು ಆಹ್ವಾನ ನೀಡಿದ ದಿನಾಂಕದಿಂದ ಎರಡು ತಿಂಗಳ ಒಳಗೆ ಅಂದರೆ ಜೂ.22 ರೊಳಗೆ ಸ್ಪರ್ಧೆಗೆ ಒಂದು ಕವನ ಕಳುಹಿಸಬೇಕು.

ಭಾಗವಹಿಸುವ ಸ್ಪರ್ಧಿಯು ಅರ್ಜಿ ಮತ್ತು ಕವನವನ್ನು ಸಂತಕವಿ ಕನಕದಾಸ ಮತ್ತು ತತ್ವಪದಕಾರರ ಅಧ್ಯಯನ ಕೇಂದ್ರ, ಕಲಾಗ್ರಾಮ, ಮಲ್ಲತ್ತಹಳ್ಳಿ, ಬೆಂಗಳೂರು-560056 ಇಲ್ಲಿಗೆ ಅರ್ಜಿಯನ್ನು ಅಂಚೆ, ಕೊರಿಯರ್, ಇಮೇಲ್ ಅಥವಾ ಖುದ್ದಾಗಿ ಸಲ್ಲಿಸಬಹುದು.

ಅರ್ಜಿಯನ್ನು https://kanakadasaresearchcenter.karnataka.gov.in/ ನಲ್ಲಿ ಡೌನ್ಲೋಡ್ ಮಾಡಿಕೊಳ್ಳಬಹುದು. ಮಾಹಿತಿಗೆ 9743545865 ಸಂಪರ್ಕಿಸಬಹುದು ಎಂದು ಸಂತಕವಿ ಕನಕದಾಸ ಮತ್ತು ತತ್ವಪದಕಾರರ ಅಧ್ಯಯನ ಕೇಂದ್ರದ ಸದಸ್ಯ ಕಾರ್ಯದರ್ಶಿ ತಿಳಿಸಿದ್ದಾರೆ.

ಗೌರಿಬಿದನೂರು: ನಗರದಲ್ಲಿ ವಿಶ್ವಸಿರಿ ಸೇವಾ ಟ್ರಸ್ಟ್ ವತಿಯಿಂದ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮವನ್ನು ಸೋಮವಾರ ಹಮ್ಮಿಕೊಳ್ಳಲಾಯಿತು.

ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ವೃತ್ತ ನಿರೀಕ್ಷಕ ಅಂಜನ್ ಕುಮಾರ್, ಶೈಕ್ಷಣಿಕ ಸಾಧನೆ ಮಾಡುವ ವಿದ್ಯಾರ್ಥಿಗಳನ್ನು ಗುರುತಿಸಿ ಪ್ರೋತ್ಸಾಹಿಸುವುದು ಸಮಾಜದ ಕರ್ತವ್ಯ. ಇಂತಹ ಕಾರ್ಯಕ್ರಮಗಳಿಂದ ಗ್ರಾಮೀಣ ಭಾಗದ ವಿದ್ಯಾರ್ಥಿಗಳು ಸಹ ಸ್ಫೂರ್ತಿ ಪಡೆದು ಉತ್ತಮ ಶೈಕ್ಷಣಿಕ ಸಾಧನೆ ಮಾಡಲು ಸಾಧ್ಯವಾಗುತ್ತದೆ ಎಂದರು.

ಸಾಧನೆ ಮಾಡಿದ 25 ವಿದ್ಯಾರ್ಥಿಗಳಿಗೆ ತಲಾ ₹5,000 ನಗದು ಪುರಸ್ಕಾರ ನೀಡಿ, ಸನ್ಮಾನಿಸಲಾಯಿತು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260428-16-316443804

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.