ಚಿಕ್ಕಬಳ್ಳಾಪುರ: ಇಲ್ಲಿನ ಒಕ್ಕಲಿಗರ ಸಂಘದಿಂದ ₹7.5 ಕೋಟಿ ವೆಚ್ಚದಲ್ಲಿ ನಿರ್ಮಿಸಿರುವ ಕೆಂಪೇಗೌಡ ವಾಣಿಜ್ಯ ಸಂಕೀರ್ಣದ ಉದ್ಘಾಟನೆ 13ರಂದು ನಡೆಯಲಿದೆ ಎಂದು ಒಕ್ಕಲಿಗರ ಸಂಘದ ಅಧ್ಯಕ್ಷ ಪಿ.ಎನ್.ಕೇಶವರೆಡ್ಡಿ ತಿಳಿಸಿದರು.

ನಗರದಲ್ಲಿ ಮಂಗಳವಾರ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು, ಆದಿಚುಂಚನಗಿರಿ ಮಠದ ನಿರ್ಮಲಾನಂದನಾಥ ಸ್ವಾಮೀಜಿ ಸಂಕೀರ್ಣ ಉದ್ಘಾಟಿಸುವರು. ಸಮುದಾಯದವರಿಗೆ ಸಂಕೀರ್ಣದಲ್ಲಿನ ಮಳಿಗೆಗಳನ್ನು ಬಾಡಿಗೆಗೆ ನೀಡಲು ನಿರ್ಧರಿಸಲಾಗಿದೆ ಎಂದರು.

ಚಿಕ್ಕಬಳ್ಳಾಪುರ ಶಾಖಾ ಮಠದ ಮಂಗಳಾನಾಥ ಸ್ವಾಮೀಜಿ, ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಂ.ಸಿ.ಸುಧಾಕರ್, ಸಂಸದ ಡಾ.ಕೆ.ಸುಧಾಕರ್ ಸೇರಿದಂತೆ ಹಲವು ಗಣ್ಯರು ಭಾಗವಹಿಸಲಿದ್ದಾರೆ ಎಂದು ಹೇಳಿದರು.

ಸಂಘದ ಪ್ರಧಾನ ಕಾರ್ಯದರ್ಶಿ ಬಿ.ಎನ್.ಚನ್ನಕೃಷ್ಣಪ್ಪ ರೆಡ್ಡಿ, ಸಹ ಕಾರ್ಯದರ್ಶಿ ಎಂ.ಪ್ರಕಾಶ್, ಉಪಾಧ್ಯಕ್ಷ ಬಿ.ಎಂ.ರಾಮಸ್ವಾಮಿ, ಖಜಾಂಚಿ ಬಿ.ಕೆ.ಮಂಜುನಾಥ್, ಒಕ್ಕಲಿಗರ ಕಲ್ಯಾಣ ಮಂಟಪದ ಅಧ್ಯಕ್ಷ ನಾರಾಯಣಸ್ವಾಮಿ, ಕಾರ್ಯದರ್ಶಿ ಬೈರೇಗೌಡ, ವಿದ್ಯಾರ್ಥಿ ನಿಲಯದ ಅಧ್ಯಕ್ಷ ನಾರಾಯಣಸ್ವಾಮಿ, ರಾಜಣ್ಣ, ಧನಂಜಯ ಗೋಷ್ಠಿಯಲ್ಲಿ ಪಾಲ್ಗೊಂಡಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260513-16-1329243676

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.