ಚಿಕ್ಕಬಳ್ಳಾಪುರ: ಕೆ.ಎಚ್.ಮುನಿಯಪ್ಪ ಅವರಿಗೆ ಉಪಮುಖ್ಯಮಂತ್ರಿ ಸ್ಥಾನ ನೀಡಬೇಕು ಎಂದು ಆಗ್ರಹಿಸಿ ನಗರದ ಅಂಬೇಡ್ಕರ್ ವೃತ್ತದಲ್ಲಿ ‘ಭೀಮ ಜ್ಯೋತಿ’ ಮೂಲಕ ಕಾಂಗ್ರೆಸ್ ಹೈಕಮಾಂಡ್ಗೆ ಮನವಿ ಸಲ್ಲಿಸಲಾಯಿತು.

ವೃತ್ತದಲ್ಲಿರುವ ಅಂಬೇಡ್ಕರ್ ಅವರ ಪುತ್ಥಳಿ ಬಳಿ ಸೇರಿದ ಜಿಲ್ಲಾ ಮಾದರ ಮಹಾಸಭಾ ಸದಸ್ಯರು, ಪಂಜಿನ ಮೆರವಣಿಗೆ ಸಹ ನಡೆಸಿದರು.

ಜಿಲ್ಲಾ ಮಾದರ ಮಹಾಸಭಾ ಅಧ್ಯಕ್ಷ ಪಟ್ರೇನಹಳ್ಳಿ ಕೃಷ್ಣಪ್ಪ ಮಾತನಾಡಿ, 7 ಬಾರಿ ಸಂಸದರಾಗಿ ಎರಡು ಬಾರಿ ಕೇಂದ್ರ ಸಚಿವರಾಗಿ ಮತ್ತು ರಾಜ್ಯದಲ್ಲಿ ಆಹಾರ ಸಚಿವರಾಗಿ ಮುನಿಯಪ್ಪ ಅವರು ಉತ್ತಮ ಕೆಲಸ ಮಾಡಿದ್ದಾರೆ. ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರಲು ಮಾದಾರ ಸಮುದಾಯದ ಪಾತ್ರ ಹಿರಿದು. ಈ ಹಿನ್ನೆಲೆಯಲ್ಲಿ ಸಮುದಾಯದ ಅಗ್ರ ನಾಯಕ ಕೆ.ಎಚ್.ಮುನಿಯಪ್ಪ ಅವರಿಗೆ ಉಪಮುಖ್ಯಮಂತ್ರಿ ಸ್ಥಾನ ನೀಡಬೇಕು ಎಂದು ಆಗ್ರಹಿಸಿದರು.

ಮಾದಾರ ಸಮುದಾಯವು ಕಾಂಗ್ರೆಸ್ ಪಕ್ಷ ಬೆಂಬಲಿಸಿದ ಕಾರಣದಿಂದಲೇ ಪಕ್ಷವು ಅಧಿಕಾರ ಹಿಡಿದಿದೆ. ಪಕ್ಷಕ್ಕೆ ಮುಂದಿನ ದಿನಗಳಲ್ಲಿ ಅನುಕೂಲವಾಗಬೇಕಾದರೆ ಮುನಿಯಪ್ಪ ಅವರಿಗೆ ಡಿಸಿಎಂ ಹುದ್ದೆ ನೀಡಬೇಕು ಎಂದು ಕೋರಿದರು.

ಬಿಜೆಪಿ ಸರ್ಕಾರದಲ್ಲಿ ಸಮುದಾಯದ ಗೋವಿಂದ ಕಾರಜೋಳ ಅವರನ್ನು ಉಪಮುಖ್ಯ ಮಂತ್ರಿ ಮಾಡಲಾಗಿತ್ತು. ಡಾ.ಜಿ. ಪರಮೇಶ್ವರ ಅವರನ್ನು ಉಪಮುಖ್ಯ ಮಂತ್ರಿ ಮಾಡಲಾಗಿತ್ತು. ಕಾಂಗ್ರೆಸ್ ಸರ್ಕಾರ ಮಾದಿಗ ಸಮುದಾಯದವರನ್ನು ಉಪಮುಖ್ಯಮಂತ್ರಿ ಮಾಡಿಲ್ಲ ಎಂದರು.

ಮಾದಾರ ಮಹಾಸಭಾ ವಿವಿಧ ತಾಲ್ಲೂಕು ಘಟಕಗಳ ಅಧ್ಯಕ್ಷರಾದ ಕೊತ್ತನೂರು ಮುನಿಯಪ್ಪ, ನಾಗಾರ್ಜುನ್, ಅ.ನ.ಮೂರ್ತಿ, ಪಿಎಲ್ಡಿ ಬ್ಯಾಂಕ್ ಮಾಜಿ ಉಪಾಧ್ಯಕ್ಷ ತಿರುಮಳಪ್ಪ, ನರಸಿಂಹಯಪ್ಪ, ಎಸ್ಟಿಡಿ ವೆಂಕಟೇಶ್, ಗೌರಿಬಿದನೂರು ಮುನಿಯಪ್ಪ, ಸಿ.ಎನ್. ಮುರಳಿ ಮೋಹನ್, ಮಂಚನಬಲೆ ಪ್ರಕಾಶ್, ದಿಬ್ಬೂರು ಶ್ರೀನಿವಾಸ್, ವೇಣು, ಮಂಜುನಾಥ್ ಮತ್ತಿತರರು ಪಾಲ್ಗೊಂಡಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260530-16-394927005

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.