ಚಿಕ್ಕಬಳ್ಳಾಪುರ: ಚಿಕ್ಕಬಳ್ಳಾಪುರದ ಕನ್ನಡ ಭವನದಲ್ಲಿ 31 ರಂದು ರಾಜ್ಯ ಮಟ್ಟದ ಕೆಯುಡಬ್ಲ್ಯೂಜೆ ಪತ್ರಕರ್ತರ ಮಕ್ಕಳ ಪ್ರತಿಭಾ ಪುರಸ್ಕಾರ ವಿತರಣಾ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಎಂ.ಶಿವಾನಂದ ತಗಡೂರು ಹೇಳಿದರು.

ನಗರದಲ್ಲಿ ಶುಕ್ರವಾರ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯ ಮಟ್ಟದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮದ ಅತಿಥ್ಯವನ್ನು ಮೊದಲ ಬಾರಿಗೆ ಚಿಕ್ಕಬಳ್ಳಾಪುರ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ವಹಿಸಿಕೊಂಡಿದೆ. ರಾಜ್ಯದ 200 ಕ್ಕೂ ಹೆಚ್ಚು ಪತ್ರಕರ್ತರ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ವಿತರಿಸಲಾಗುವುದು ಎಂದು ಹೇಳಿದರು.

ಜಿಲ್ಲಾ ಕಾರ್ಯನಿರತ ಪತ್ರಕರ್ತ ಸಂಘವೂ ಅರ್ಥಪೂರ್ಣವಾಗಿ ಕಾರ್ಯಕ್ರಮದ ಯಶಸ್ವಿಗೆ ಸಿದ್ದತೆ ಮಾಡಿಕೊಂಡಿದೆ. ಊಟ, ವಸತಿ, ಸಾರಿಗೆ, ನೋಂದಣಿ, ಸಾಂಸ್ಕೃತಿಕ ಚಟುವಟಿಕೆಗಳ ಆಯೋಜನೆಗೆ ಸಂಬಂದಿಸಿದಂತೆ ಉಪ ಸಮಿತಿಗಳನ್ನು ರಚಿಸಲಾಗಿದೆ. ಪ್ರತಿಭಾವಂತ ಮಕ್ಕಳ ಜೊತೆಗೆ ಪೋಷಕರು ಹಾಗೂ ಸಂಘದ ವಿವಿಧ ಜಿಲ್ಲೆಗಳ ಹಾಗೂ ರಾಜ್ಯ ಪದಾಧಿಕಾರಿಗಳು ಸೇರಿ 500 ಕ್ಕೂ ಹೆಚ್ಚು ಮಂದಿ ಭಾಗವಹಿಸುವ ನಿರೀಕ್ಷೆ ಇದೆ ಎಂದರು.

ಎಸ್ಎಸ್ಎಲ್ಸಿ ಹಾಗೂ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಶೇ 90ಕ್ಕಿಂತ ಹೆಚ್ಚು ಅಂಕ ಪಡೆದ ರಾಜ್ಯದ ಎಲ್ಲಾ ಜಿಲ್ಲೆಗಳ ಪತ್ರಕರ್ತರ ಮಕ್ಕಳಿಗೆ ರಾಜ್ಯ ಸಂಘದಿಂದ ಪ್ರತಿಭಾ ಪುರಸ್ಕಾರ ವಿತರಣೆ ಮಾಡಲಾಗುತ್ತಿದೆ. ಇದೇ ಮೊದಲ ಬಾರಿಗೆ ₹ 3,000 ಸಾವಿರ ನಗದು, ಸ್ಮರಣಿಕೆ, ಅಭಿನಂದನಾ ಪತ್ರ ವಿತರಿಸಲಾಗುತ್ತಿದೆ ಎಂದರು.

ಸಂಘದ ಜಿಲ್ಲಾ ಅಧ್ಯಕ್ಷ ವಿ.ರವಿಕುಮಾರ್ ಮಾತನಾಡಿ, ಕಾರ್ಯಕ್ರಮದಲ್ಲಿ ಮಾಧ್ಯಮ ಹಾಗೂ ಸ್ತ್ರೀಶಕ್ತಿ ಸಂಘಗಳು ತಯಾರಿಸಿದ ಉತ್ಪನ್ನಗಳ ಮಾರಾಟ ಹಾಗೂ ವಸ್ತು ಪ್ರದರ್ಶನ ವ್ಯವಸ್ಥೆ ಮಾಡಲಾಗಿದೆ. ನೋಂದಣಿ ಮಾಡಿಕೊಂಡ ದೂರದ ಜಿಲ್ಲೆಗಳವರಿಗೆ ಮಾತ್ರ ವಸತಿ ಸೌಕರ್ಯ ಕಲ್ಪಿಸಲಾಗುತ್ತಿದೆ ಎಂದರು.

ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯ ಪ್ರಧಾನ ಕಾರ್ಯದರ್ಶಿ ಜಿ.ಸಿ.ಲೋಕೇಶ್, ಖಜಾಂಚಿ ವಾಸುದೇವ ಹೊಳ್ಳ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಕಾಗತಿ ನಾಗರಾಜಪ್ಪ, ರಾಜ್ಯ ಸಮಿತಿ ಸದಸ್ಯ ಎನ್.ಚಂದ್ರಶೇಖರ್ ಮತ್ತಿತರರು ಪಾಲ್ಗೊಂಡಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260530-16-1322148009

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.