ಚಿಕ್ಕಬಳ್ಳಾಪುರ: ನಿವೇಶನ ಅಥವಾ ವಸತಿ ಇಲ್ಲದಿರುವುದರ ಬಗ್ಗೆ ಖಚಿತಪಡಿಸಿಕೊಂಡು ಅರ್ಹ ಫಲಾನುಭವಿಗಳನ್ನು ಗ್ರಾಮ ಸಭೆಗಳಲ್ಲಿ ಆಯ್ಕೆ ಮಾಡಬೇಕು ಎಂದು ಜಿಲ್ಲಾಧಿಕಾರಿ ಜಿ.ಪ್ರಭು ಅಧಿಕಾರಿಗಳಿಗೆ ಸೂಚಿಸಿದರು.

ಇಲ್ಲಿನ ಜಿಲ್ಲಾಧಿಕಾರಿ ಕಚೇರಿಯಲ್ಲಿ ಮಂಗಳವಾರ ನಡೆದ ವಸತಿ, ನಿವೇಶನ ಯೋಜನೆಗಳ ಪರಿಣಾಮಕಾರಿ ಅನುಷ್ಠಾನ ಕುರಿತ ಪ್ರಗತಿ ಪರಿಶೀಲನೆ ನಡೆಸಿ ಮಾತನಾಡಿದರು.

ಪಾರದರ್ಶಕವಾಗಿ ನಿವೇಶನಗಳನ್ನುನಿವೇಶನ ರಹಿತರಿಗೆ ನೀಡುವ ಉದ್ದೇಶದಿಂದ ಜಿಲ್ಲಾ ಮಟ್ಟದ ಅಧಿಕಾರಿಗಳನ್ನು ಗ್ರಾಮ ಪಂಚಾಯಿತಿಗಳಿಗೆ ನೋಡಲ್ ಅಧಿಕಾರಿಗಳನ್ನಾಗಿ ನೇಮಿಸಲಾಗಿದೆ. ಈ ಅಧಿಕಾರಿಗಳು ಸಂಬಂಧಪಟ್ಟ ಗ್ರಾಮಸಭೆಗೆ ಹಾಜರಾಗಿ ಸರ್ಕಾರದ ನಿಯಮಾವಳಿ ರೀತಿ ಫಲನುಭವಿಗಳನ್ನು ಆಯ್ಕೆ ಮಾಡಬೇಕು ಎಂದರು.

ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿಗಳು ಸಹ ಕಡ್ಡಾಯವಾಗಿ ಗ್ರಾಮಸಭೆಗಳಿಗೆಹಾಜರಾಗಬೇಕು. ನಿವೇಶನ ರಹಿತರನ್ನು ಆಯ್ಕೆ ಮಾಡಬೇಕು. ಆಯ್ಕೆ ಮಾಡುವ ಸಂದರ್ಭದಲ್ಲಿ ಸರ್ಕಾದ ಮಾನದಂಡಗಳನ್ನು ಪಾಲಿಸಬೇಕು ಎಂದು ನಿರ್ದೇಶನ ನೀಡಿದರು.

2018ರಲ್ಲಿ ಸಮೀಕ್ಷೆ ಮಾಡಿ ಪಟ್ಟಿ ಮಾಡಿರುವ ನಿವೇಶನರಹಿತರಿಗೆ ಮೊದಲ ಆದ್ಯತೆ ನೀಡಬೇಕು. ಪಟ್ಟಿಯಲ್ಲಿ ಇರುವವರ ಹೆಸರಲ್ಲಿ ನಿವೇಶನ, ವಸತಿ ಇದೆಯೇ, ಇಲ್ಲವೇ ಎನ್ನುವ ಬಗ್ಗೆ ಸ್ಥಳೀಯ ಅಧಿಕಾರಿಗಳು ಮತ್ತು ಸಿಬ್ಬಂದಿ ಕ್ಷೇತ್ರ ವೀಕ್ಷಣೆ ಮಾಡಿ ಖಚಿತ ಪಡಿಸಿಕೊಳ್ಳಬೇಕು ಎಂದರು.

ನಿವೇಶನ ಇಲ್ಲದವರಿಗೆ ವಸತಿ ರಹಿತರು ಎಂದು ಸಂಬಂಧಪಟ್ಟ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಮತ್ತು ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ದೃಢೀಕರಣ ಪತ್ರ ನೀಡಬೇಕು. ಅಂತಹವರಿಗೆ ನಿವೇಶನ ಸಿಗಬೇಕು. ಯಾವುದೇ ಗ್ರಾಮ ಸಭೆ ನಡೆಯಬೇಕಾದರೆ ನಿವೇಶನ ರಹಿತರ ಹೆಸರನ್ನು ಜೋರಾಗಿ ಓದಿ ವೇದಿಕೆಯ ಮೇಲೆ ಕರೆಯಬೇಕು ಎಂದು ಹೇಳಿದರು.

ಗ್ರಾಮ ಸಭೆಯಲ್ಲಿ ಭಾಗವಹಿಸಿರುವವರು ಸಹ ವೇದಿಕೆ ಮೇಲೆ ಬಂದವರಿಗೆ ನಿವೇಶನ ಇಲ್ಲ ಎಂದು ಖಾತ್ರಿಪಡಿಸಬೇಕು. ಅಂತಹವರಿಗೆ ನಿವೇಶನಗಳನ್ನು ನೀಡಲು ತ್ವರಿತ ಕ್ರಮ ತೆಗೆದುಕೊಳ್ಳಬೇಕು ಎಂದು ತಾಲ್ಲೂಕು ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಹೆಚ್ಚುವರಿ ಜಿಲ್ಲಾಧಿಕಾರಿ ಡಾ.ಎನ್.ಭಾಸ್ಕರ್, ಉಪವಿಭಾಗಾಧಿಕಾರಿ ಡಿ.ಎಚ್.ಅಶ್ವಿನ್, ಜಿಲ್ಲಾ ಪಂಚಾಯಿತಿ ಉಪಕಾರ್ಯದರ್ಶಿ ಅತಿಕ್ ಪಾಷಾ, ಯೋಜನಾ ನಿರ್ದೇಶಕ ಮಂಜುನಾಥ್, ತಹಶೀಲ್ದಾರರು, ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ, ನಗರಾಡಳಿತ ಸಂಸ್ಥೆಗಳ ಪೌರಾಯುಕ್ತರು, ಮುಖ್ಯಾಧಿಕಾರಿಗಳು, ನೋಡಲ್ ಅಧಿಕಾರಿಗಳು ಸಭೆಯಲ್ಲಿ ಭಾಗವಹಿಸಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260513-16-1953215658

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.