ಚಿಕ್ಕಬಳ್ಳಾಪುರ: ಶಿಡ್ಲಘಟ್ಟ ತಾಲ್ಲೂಕಿನ ಸಾದಲಿ ಹೋಬಳಿಯ ಪುರಬೈರೇನಹಳ್ಳಿ ಗ್ರಾಮದಲ್ಲಿ ಸರ್ಕಾರಿ ಹಾಗೂ ಪಿಟಿಸಿಎಲ್ ವ್ಯಾಪ್ತಿಗೆ ಬರುವ ಕೋಟ್ಯಂತರ ರೂಪಾಯಿ ಬೆಲೆಬಾಳುವ ಜಮೀನನ್ನು ನಿಯಮಬಾಹಿರವಾಗಿ ಕೃಷಿಯೇತರ ಉದ್ದೇಶಕ್ಕೆ ಭೂ ಪರಿವರ್ತನೆ ಮಾಡಿಕೊಟ್ಟಿರುವ ಜಿಲ್ಲಾಡಳಿತದ ಕ್ರಮವನ್ನು ಕರ್ನಾಟಕ ರಾಷ್ಟ್ರ ಸಮಿತಿ (ಕೆಆರ್ಎಸ್) ಪಕ್ಷವು ಖಂಡಿಸಿದೆ.

ಈ ಕುರಿತು ಜಿಲ್ಲಾಧಿಕಾರಿಗೆ ದೂರು ನೀಡಿರುವ ಪಕ್ಷದ ಜಿಲ್ಲಾ ಘಟಕವು, ಅಕ್ರಮ ಎಸಗಿರುವ ಅಧಿಕಾರಿಗಳ ಮೇಲೆ ಕಠಿಣ ಕಾನೂನು ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದೆ. ಈ ಬಗ್ಗೆ ಕ್ರಮವಹಿಸುವಂತೆ ಹೆಚ್ಚುವರಿ ಜಿಲ್ಲಾಧಿಕಾರಿ ಡಾ.ಎನ್.ಭಾಸ್ಕರ್ ಅವರಿಗೆ ಶುಕ್ರವಾರ ಕೆಆರ್ಎಸ್ ಕಾರ್ಯಕರ್ತರು ಮನವಿ ಸಲ್ಲಿಸಿದರು.

ಪುರಬೈರೇನಹಳ್ಳಿ ಗ್ರಾಮದ ಸ.ನಂ 36/1, 36/2, 43, 44, 45ರ ಒಟ್ಟು ಜಮೀನುಗಳು ಸರ್ಕಾರಿ ಹಾಗೂ ದಲಿತರಿಗೆ ಮಂಜೂರಾದ ಪಿ.ಟಿ.ಸಿ.ಎಲ್ ಕಾಯ್ದೆಯ ವ್ಯಾಪ್ತಿಗೆ ಬರುತ್ತವೆ ಎಂದು ಕಂದಾಯ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಸ್ಪಷ್ಟಪಡಿಸಿದ್ದಾರೆ. ಹೀಗಿದ್ದರೂ ಸರ್ಕಾರದ ಪೂರ್ವಾನುಮತಿ ಇಲ್ಲದೆ ಉದ್ದೇಶಪೂರ್ವಕವಾಗಿ ಕಾನೂನು ಉಲ್ಲಂಘಿಸಿ ಈ ಜಮೀನುಗಳಿಗೆ ಭೂ ಪರಿವರ್ತನಾ ಆದೇಶ ನೀಡಲಾಗಿದೆ ಎಂದು

ವಿವಾದಿತ ಜಮೀನಿನಲ್ಲಿ ನಡೆಯುತ್ತಿರುವ ಎಲ್ಲಾ ಕಾಮಗಾರಿಗಳನ್ನು ತಕ್ಷಣ ಸ್ಥಗಿತಗೊಳಿಸಬೇಕು. ಹಿಂದಿನ ಜಿಲ್ಲಾಧಿಕಾರಿ ನೀಡಿದ್ದ ಅಕ್ರಮ ಭೂ ಪರಿವರ್ತನಾ ಆದೇಶವನ್ನು ತಕ್ಷಣವೇ ರದ್ದುಗೊಳಿಸಬೇಕು. ಅಕ್ರಮಕ್ಕೆ ಶಿಫಾರಸು ಮಾಡಿದ ತಹಶೀಲ್ದಾರ್ ಹಾಗೂ ಆದೇಶ ನೀಡಿದ ಅಧಿಕಾರಿಗಳ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಬೇಕು. ಕರ್ತವ್ಯ ಲೋಪ ಎಸಗಿರುವ ಶಿಡ್ಲಘಟ್ಟ ತಹಶೀಲ್ದಾರರನ್ನು ಅಮಾನತುಗೊಳಿಸಬೇಕು. ಲೋಕಾಯುಕ್ತ ತನಿಖೆಗೆ ಒಪ್ಪಿಸಬೇಕು. ಅಕ್ರಮ ವರ್ಗಾವಣೆಯಾಗಿರುವ ಜಮೀನನ್ನು ಸರ್ಕಾರ ಮುಟ್ಟುಗೋಲು ಹಾಕಿಕೊಳ್ಳಬೇಕು ಎಂದು ಮನವಿಯಲ್ಲಿ ತಿಳಿಸಿದ್ದಾರೆ.

ಸರ್ಕಾರಿ ಮತ್ತು ದಲಿತರ ಜಮೀನುಗಳನ್ನು ರಕ್ಷಿಸುವುದು ಜಿಲ್ಲಾಡಳಿತದ ಜವಾಬ್ದಾರಿ. ಭ್ರಷ್ಟ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳದಿದ್ದರೆ, ಈ ಹಗರಣವನ್ನು ಲೋಕಾಯುಕ್ತಕ್ಕೆ ಹಸ್ತಾಂತರಿಸಲು ಮತ್ತು ರಾಜ್ಯಮಟ್ಟದಲ್ಲಿ ಹೋರಾಟ ರೂಪಿಸಲು ಕೆ.ಆರ್.ಎಸ್ ಪಕ್ಷ ನಿರ್ಧರಿಸಿದೆ ಎಂದು ಕಾರ್ಯಕರ್ತರು ತಿಳಿಸಿದರು.

ಕೆ.ಆರ್.ಎಸ್ ಪಕ್ಷದ ಜಿಲ್ಲಾ ಅಧ್ಯಕ್ಷ ಸುಬ್ರಮಣಿ ಕೆ.ಎನ್, ರಾಜ್ಯ ಕಾರ್ಯದರ್ಶಿ ಶ್ರೀನಿವಾಸ್ ಸಿ.ವಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸಂತೋಷ್ ಜಿ.ಆರ್, ಪದಾಧಿಕಾರಿಗಳು ಮನವಿ ಸಲ್ಲಿಸಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260509-16-1229537891

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.