ಚಿಕ್ಕಬಳ್ಳಾಪುರ: ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ವಿವಿಧ ಯೋಜನೆಗಳಡಿ ಬ್ಯಾಂಕ್ಗಳ ಮೂಲಕ ಅನುಷ್ಠಾನವಾಗಲಿರುವ ಸಾಲ ಸೌಲಭ್ಯಗಳ ಹಣ ಬಿಡುಗಡೆ ಪ್ರಕ್ರಿಯೆಯಲ್ಲಿ ವಿಳಂಬ ಮತ್ತು ನಿರ್ಲಕ್ಷ ಧೋರಣೆ ತೋರಿರುವುದನ್ನು ಸಹಿಸುವುದಿಲ್ಲ ಎಂದು ಹೆಚ್ಚುವರಿ ಜಿಲ್ಲಾಧಿಕಾರಿ ಡಾ. ಎನ್.ಭಾಸ್ಕರ್ ಬ್ಯಾಂಕ್ ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದರು.

ಇಲ್ಲಿನ ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ಶುಕ್ರವಾರ ನಡೆದ ನಗರ ಪ್ರದೇಶದ ಬೀದಿಬದಿ ವ್ಯಾಪಾರಸ್ಥರಿಗೆ ಸಾಲ ಸೌಲಭ್ಯ ಕುರಿತ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದರು.

ಜಿಲ್ಲೆಯ ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ‘ಪ್ರಧಾನ ಮಂತ್ರಿ ಬೀದಿಬದಿ ವ್ಯಾಪಾರಿಗಳ ಆತ್ಮ ನಿರ್ಭರ್ ನಿಧಿ ಯೋಜನೆ’ಯಡಿ ಸಾಲ ಸೌಲಭ್ಯ ನೀಡುವ ಯೋಜನೆಯಡಿ ಈವರೆಗೆ ಜಿಲ್ಲೆಯಲ್ಲಿ ಒಟ್ಟು 4,973 ಅರ್ಜಿಗಳನ್ನು ಮಂಜೂರಾತಿ ನೀಡಲಾಗಿದೆ. ಈ ಪೈಕಿ 4,762 ಫಲಾನುಭವಿಗಳಿಗೆ ಬ್ಯಾಂಕುಗಳಿಂದ ಹಣ ಬಿಡುಗಡೆಯಾಗಿದೆ ಎಂದರು.

ಬಾಕಿ 211 ಅರ್ಜಿಗಳಿಗೆ ಬ್ಯಾಂಕ್ಗಳಲ್ಲಿ ಎಲ್ಲಾ ಪ್ರಕ್ರಿಯೆಯನ್ನು ಪೂರ್ಣಗೊಳಿಸಿ ಹಣ ಬಿಡುಗಡೆಯನ್ನು ಮಾತ್ರ ಬಾಕಿ ಇಟ್ಟಿರುವುದು ಸರಿಯಲ್ಲ. ಈ ಧೋರಣೆ ಜಿಲ್ಲೆಯ ವಿವಿಧ ಬ್ಯಾಂಕ್ಗಳ ವ್ಯವಸ್ಥಾಪಕರ ನಿರ್ಲಕ್ಷ್ಯವನ್ನು ಎತ್ತಿ ತೋರಿಸುತ್ತದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಯಾವುದೇ ಅರ್ಜಿದಾರರನ್ನು ಅನಗತ್ಯವಾಗಿ ಅಲೆದಾಡಿಸಬೇಡಿ. ಮುಂದಿನ ದಿನಗಳಲ್ಲಿ ಇಂತಹ ನಿರ್ಲಕ್ಷಕ್ಕೆ ಆಸ್ಪದ ನೀಡಬಾರದು ಎಂದು ಎಚ್ಚರಿಸಿದರು.

ಆತ್ಮ ನಿರ್ಭರ ಯೋಜನೆಯಡಿ ಪ್ರಸ್ತುತ ಪ್ರಾಥಮಿಕ ಕಿರು ಸಾಲದ ಮೊತ್ತವನ್ನು ಸರ್ಕಾರ ₹ 10 ಸಾವಿರದಿಂದ ₹ 15 ಸಾವಿರಕ್ಕೆ ಹೆಚ್ಚಿಸಿದೆ. ಪ್ರಾಥಮಿಕ ಹಂತದ ಕಿರು ಸಾಲಕ್ಕೆ ಒಟ್ಟು 5,456 ಅರ್ಜಿಗಳನ್ನು ಸ್ವೀಕರಿಸಿ 4,762 ಫಲಾನುಭವಿಗಳಿಗೆ ₹ 499 ಲಕ್ಷಗಳ ಸಾಲ ಬಿಡುಗಡೆ ಮಾಡಲಾಗಿದೆ ಎಂದು ಹೇಳಿದರು.

ಮೊದಲ ಹಂತದಲ್ಲಿ ಪಡೆದ ಸಾಲವನ್ನು ತೀರಿಸಿದ ಬೀದಿಬದಿ ವ್ಯಾಪಾರಸ್ಥರಿಗೆ ದ್ವಿತೀಯ ಹಂತದಲ್ಲಿ 1,791 ಫಲಾನುಭವಿಗಳಿಗೆ ₹ 25 ಸಾವಿರಗಳಂತೆ ಒಟ್ಟು ₹ 373 ಲಕ್ಷಗಳ ಸಾಲ ಸೌಲಭ್ಯ ನೀಡಲಾಗಿದೆ. 3ನೇ ಹಂತದಲ್ಲಿ 634 ಫಲಾನುಭವಿಗಳಿಗೆ ತಲಾ ₹ 50,000ಗಳಂತೆ ಒಟ್ಟು 316 ಲಕ್ಷ ಸಾಲ ಬಿಡುಗಡೆ ಮಾಡಲಾಗಿದೆ. ಈ ಯೋಜನೆಯು ಬೀದಿ ಬದಿ ವ್ಯಾಪಾರಸ್ಥರಿಗೆ ಆರ್ಥಿಕವಾಗಿ ಅಭಿವೃದ್ಧಿಗೊಳ್ಳಲು ಬಹಳ ಸಹಕಾರಿ. ಹಣ ಬಿಡುಗಡೆಗೆ ಬಾಕಿ ಇರುವ 211 ಅರ್ಜಿಗಳನ್ನು ಒಂದು ವಾರದಲ್ಲಿ ವಿಲೇವಾರಿ ಮಾಡಬೇಕು ಎಂದು ಎಚ್ಚರಿಕೆ ನೀಡಿದರು.

ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಅತಿಕ್ ಪಾಷ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ಆರ್.ವೆಂಕಟೇಶರೆಡ್ಡಿ, ಕೌಶಲಾಭಿವೃದ್ಧಿ ಅಧಿಕಾರಿ ಎಂ.ಪ್ರಸಾದ್, ಅಭಿಯಾನ ವ್ಯವಸ್ಥಾಪಕ ವೆಂಕಟಾಚಲಪತಿ ಹಾಗೂ ಜಿಲ್ಲೆಯ ವಿವಿಧ ಬ್ಯಾಂಕುಗಳ ವ್ಯವಸ್ಥಾಪಕರು ಸಭೆಯಲ್ಲಿ ಪಾಲ್ಗೊಂಡಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260509-16-748636328

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.