ಬುಧವಾರ, 22 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಲೋಕಸಭೆ ಚುನಾವಣೆ | ಬಿಜೆಪಿ–ಜೆಡಿಎಸ್ ಕಾರ್ಯಕರ್ತರ ಸಮಾವೇಶ ಏಪ್ರಿಲ್ 5 ರಂದು

Published 4 ಏಪ್ರಿಲ್ 2024, 14:40 IST
Last Updated 4 ಏಪ್ರಿಲ್ 2024, 14:40 IST
ಅಕ್ಷರ ಗಾತ್ರ

ಚಿಂತಾಮಣಿ: ತಾಲ್ಲೂಕು ಮಟ್ಟದ ಜೆಡಿಎಸ್ ಮತ್ತು ಬಿಜೆಪಿ ಕಾರ್ಯಕರ್ತರ ಸಮಾವೇಶ ಏಪ್ರಿಲ್ 5 ರಂದು ಶುಕ್ರವಾರ ನಗರದ ಕೆ.ಎಂ.ಡಿ ಕಲ್ಯಾಣ ಮಂಟಪದಲ್ಲಿ ನಡೆಯಲಿದೆ ಎಂದು ಮಾಜಿ ಶಾಸಕ ಎಂ.ಕೃಷ್ಣಾರೆಡ್ಡಿ ತಿಳಿಸಿದರು.

ಗುರುವಾರ ನಗರದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಚುನಾವಣೆ ಪ್ರಚಾರ ಚುರುಕುಗೊಳಿಸಲು ರೂಪು ರೇಷೆಯನ್ನು ಎರಡು ಪಕ್ಷಗಳ ಕಾರ್ಯಕರ್ತರಿಗೆ ನೀಡಲಾಗುವುದು ಎಂದರು.

ತಾಲ್ಲೂಕಿನ ಎಲ್ಲ ಗ್ರಾಮಗಳಿಂದ ಬಿಜೆಪಿ ಮತ್ತು ಜೆಡಿಎಸ್ ಕಾರ್ಯಕರ್ತರು ಭಾಗವಹಿಸಲಿದ್ದಾರೆ.  ಜತೆಗೆ ಲೋಕಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಬರುವ ಎಂಟು ವಿಧಾನಸಭಾ ಕ್ಷೇತ್ರಗಳ ಮುಖಂಡರು ಸಹ ಹಾಜರಾಗಲಿದ್ದಾರೆ. ಪ್ರಚಾರದ ರೀತಿ ನೀತಿ, ಪ್ರಚಾರ ಶೈಲಿಯನ್ನು ಕಾರ್ಯಕರ್ತರಿಗೆ ಅರಿವು ಮೂಡಿಸಲಾಗುತ್ತದೆ ಎಂದು ತಿಳಿಸಿದರು‌.

ಸಂವಿಧಾನ ಬದಲಾವಣೆ ಯಾರಿಂದಲೂ ಸಾಧ್ಯವಿಲ್ಲ. ಅದೆಲ್ಲವು ಊಹಾಪೋಹದ ಮಾತು. ಸಂವಿಧಾನ ಬದಲಾವಣೆ ಪ್ರಶ್ನೆಯೇ ಇಲ್ಲ. ಕೆಲ ನಾಯಕರು ಮಾತನಾಡುವ ಭರದಲ್ಲಿ ಉದ್ವೇಗದಲ್ಲಿ ಮಾತನಾಡಿರಬಹುದಷ್ಟೇ  ಎಂದು ಹೇಳಿದರು.

ಬಿಜೆಪಿ ಮುಖಂಡ ವೇಣುಗೋಪಾಲ್ ಮಾತನಾಡಿ, ಜೆಡಿಎಸ್–ಬಿಜೆಪಿ ಒಟ್ಟಾಗಿದ್ದೇವೆ ಎಂದು ಸಂದೇಶ ನೀಡುವುದು ಸಮಾವೇಶದ ಉದ್ದೇಶವಾಗಿದೆ. ಜೆಡಿಎಸ್ ಯುವ ಘಟಕ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ, ಶಾಸಕ ಜಿ.ಟಿ.ದೇವೇಗೌಡ, ಬಿಜೆಪಿ ಮುಖಂಡರಾದ ನಂದೀಶರೆಡ್ಡಿ, ಮುನಿರಾಜು ಅವರನ್ನು ಆಹ್ವಾನಿಸಲಾಗಿದೆ ಎಂದು ತಿಳಿಸಿದರು.

ಬಿಜೆಪಿ ಮತ್ತು ಜೆಡಿಎಸ್ ಪಕ್ಷಗಳ ತಾಲ್ಲೂಕು ಮಟ್ಟದ ಪದಾಧಿಕಾರಿಗಳು ಮತ್ತು ಮುಖಂಡರು ಪಾಲ್ಗೊಂಡಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT