ಚಿಕ್ಕಬಳ್ಳಾಪುರ: ನಂದಿಗಿರಿಧಾಮ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ವ್ಯಕ್ತಿಯೊಬ್ಬ ಮದ್ಯದಲ್ಲಿ ವಿಷ ಬೆರೆಸಿಕೊಂಡು ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ನರಸಿಂಹಮೂರ್ತಿ (45) ಮೃತಪಟ್ಟವರು. ಅವರು ಸಾಲಗಾರರ ಕಿರುಕುಳಕ್ಕೆ ಬೇಸತ್ತು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ.

ತೋಟಗಳಲ್ಲಿ ಕೂಲಿ ಕೆಲಸ ಮಾಡಿಕೊಂಡು ಜೀವನ ನಡೆಸುತ್ತಿದ್ದ ನರಸಿಂಹಮೂರ್ತಿ ಕೆಲವರಿಂದ ಕೈಸಾಲ ಪಡೆದಿದ್ದು, ಸಾಲ ವಾಪಸ್ಸು ನೀಡುವಂತೆ ಕೆಲವು ದಿನಗಳಿಂದ ಸಾಲಗಾರರು ನಿರಂತರ ಕಿರುಕುಳ ನೀಡುತ್ತಿದ್ದರು. ಇದರಿಂದ ಬೇಸತ್ತು ನರಸಿಂಹಮೂರ್ತಿ ತಮ್ಮ ಮನೆಯಲ್ಲಿಯೇ ಮದ್ಯದಲ್ಲಿ ವಿಷ ಬೆರೆಸಿ ಸೇವಿಸಿದ್ದಾರೆ. ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತು. ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ ಎಂದಿದ್ದಾರೆ ಕುಟುಂಬಸ್ಥರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260418-16-1118287400

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.