ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವೈದ್ಯಕೀಯ ಕಾಲೇಜು ಕಟ್ಟಡ ಕಾಮಗಾರಿ ಪರಿಶೀಲನೆ

Last Updated 19 ಆಗಸ್ಟ್ 2022, 4:40 IST
ಅಕ್ಷರ ಗಾತ್ರ

ಚಿಕ್ಕಬಳ್ಳಾಪುರ: ತಾಲ್ಲೂಕಿನ ಅರೂರು ಗ್ರಾಮದ ಬಳಿ ನಿರ್ಮಾಣವಾಗುತ್ತಿರುವ ವೈದ್ಯಕೀಯ ಶಿಕ್ಷಣ ಕಾಲೇಜಿನ ಕಟ್ಟಡ ಕಾಮಗಾರಿಯನ್ನು ಗುರುವಾರ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಪರಿಶೀಲಿಸಿದರು.

‘ಗುಣಮಟ್ಟದ ಕೆಲಸ ಸಮಾಧಾನ ತಂದಿದೆ. ಮುಂದಿನ ದಿನಗಳಲ್ಲಿ ಜಿಲ್ಲೆಯಲ್ಲಿ ಇದು ಆರೋಗ್ಯಧಾಮವಾಗಲಿದೆ. ಈ ಭಾಗದ ಬಡ ವಿದ್ಯಾರ್ಥಿಗಳಿಗೆ ಅನುಕೂಲವಾಗಲಿದೆ’ ಎಂದು ಹೇಳಿದರು.

ಆರೋಗ್ಯ ಸೇವೆಗಳು ಮತ್ತು ಈ ಕ್ಷೇತ್ರದಲ್ಲಿನ ಕಲಿಕಾ ಉದ್ದೇಶಗಳಿಗಾಗಿ ದೂರದ ಸ್ಥಳಗಳಿಗೆ ಹೋಗುವ ಅಗತ್ಯವಿಲ್ಲದೆ ಕಟ್ಟ ಕಡೆಯ ವ್ಯಕ್ತಿಗೂ ಗುಣಮಟ್ಟದ ಆರೋಗ್ಯ ಸೇವೆ ನೀಡಿದಂತಾಗುತ್ತದೆ ಎಂದರು.

ಎರಡು ತಿಂಗಳುಗಳಿಂದ ಮಳೆ ಹೆಚ್ಚಿತ್ತು. ಆದ್ದರಿಂದ ಕಾಮಗಾರಿಗಳು ಮಂದಗತಿಯಲ್ಲಿದ್ದವು. ಕಾಮಗಾರಿಗೆ ವೇಗ ನೀಡಲಾಗಿದೆ. ಲೋಕೋಪಯೋಗಿ ಹಾಗೂ ಸಂಬಂಧಪಟ್ಟ ಇಲಾಖೆಯಗಳಲ್ಲಿ ಲಭ್ಯವಿರುವ ಪರಿಣತ ಎಂಜಿನಿಯರ್‌ಗಳನ್ನು ನೇಮಿಸಿ ಗುಣಮಟ್ಟದಲ್ಲಿ ಕಾಮಗಾರಿ ಪೂರ್ಣಗೊಳಿಸಲು ಸಂಬಂಧಪಟ್ಟ ಅಧಿಕಾರಿಗಳಿಗೆ ಗುತ್ತಿಗೆದಾರರಿಗೆ ಸೂಚನೆ ನೀಡಲಾಗಿದೆ ಎಂದರು.

ವೈದ್ಯಕೀಯ ಶಿಕ್ಷಣ ಇಲಾಖೆ ನಿರ್ದೇಶಕಿ ಡಾ.ಸುಜಾತ ರಾಥೋಡ್, ಜಂಟಿ ನಿರ್ದೇಶಕ ವಿಜಯ್, ಜಿಲ್ಲಾಧಿಕಾರಿ ಎನ್.ಎಂ.ನಾಗರಾಜ್, ಚಿಕ್ಕಬಳ್ಳಾಪುರ ಸರ್ಕಾರಿ ವೈದ್ಯಕೀಯ ಕಾಲೇಜಿನ ನಿರ್ದೇಶಕ ಸಿದ್ದೀಕ್ ಎಂ.ಅಹಮದ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಎಸ್.ಎಸ್.ಮಹೇಶ್ ಕುಮಾರ್, ಜಿಲ್ಲಾ ಶಸ್ತ್ರಚಿಕಿತ್ಸಕ ಡಾ.ರಾಜಾರೆಡ್ಡಿ, ಸರ್ಕಾರಿ ವೈದ್ಯಕೀಯ ಕಾಲೇಜಿನ ನೋಡಲ್ ಅಧಿಕಾರಿ ಡಾ.ವಿಜಯ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT